ಧರ್ಮಸ್ಥಳ ಪ್ರಕರಣ: ನಾಪತ್ತೆಯಾಗಿರುವ 17 ಮಂದಿ DNA ಹೊಂದಾಣಿಕೆ ಪ್ರಕ್ರಿಯೆ ಆರಂಭ

Date:

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇದೀಗ ನಾಪತ್ತೆಯಾಗಿರುವ 17 ಮಂದಿಯ DNA ಹೊಂದಾಣಿಕೆ ಪ್ರಕ್ರಿಯೆ ಆರಂಭಿಸಿದೆ.

- Advertisement -

ಎಸ್‌ಐಟಿ ತಂಡವು ಈ 17 ಮಂದಿಯ ಕುಟುಂಬಗಳ ಮಾಹಿತಿ ಸಂಗ್ರಹಿಸಿದೆ. ಬಂಗ್ಲೆಗುಡ್ಡೆ ಮೀಸಲು ಅರಣ್ಯದಲ್ಲಿ ಪತ್ತೆಯಾದ ಮಾನವ ಅವಶೇಷಗಳೊಂದಿಗೆ ಡಿಎನ್‌ಎ ಹೊಂದಾಣಿಕೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | SIT ಕೈಗೆ FSL ವರದಿ? ಹೊರಬಂದ ಮಾಹಿತಿಗಳೇನು?

ದೂರುದಾರ ಮಾಜಿ ಪೌರಕಾರ್ಮಿಕನು, ಅತ್ಯಾಚಾರ ಮತ್ತು ಕೊಲೆಗೀಡಾದ ಹಲವರ ಮೃತದೇಹಗಳನ್ನು ತಾನು ಸಮಾಧಿ ಮಾಡಿದ್ದಾಗಿ ಹೇಳಿಕೆ ನೀಡಿದ್ದನು. ಈ ದೂರಿನ ತನಿಖೆಗಾಗಿ ರಚನೆಯಾದ ಎಸ್‌ಐಟಿ ತಂಡವು 2025ರಲ್ಲಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಶೋಧ ನಡೆಸಿದಾಗ ಒಟ್ಟು ಏಳು ಮಾನವ ತಲೆಬುರುಡೆಗಳು ಹಾಗೂ ಇತರೆ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿತ್ತು. ಈ ಅವಶೇಷಗಳನ್ನು ವಶಕ್ಕೆ ಪಡೆದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿತ್ತು.

ಅದಾದ ಬಳಿಕ ಅವಶೇಷಗಳನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿತ್ತು. ಈ ಎಲ್ಲ ಅವಶೇಷಗಳು ಪುರುಷರದ್ದು ಎಂದು ತಿಳಿದುಬಂದಿತ್ತು. ಇದೀಗ ಈ ಮಾನವ ಅವಶೇಷಗಳೊಂದಿಗೆ ಧರ್ಮಸ್ಥಳದಲ್ಲಿ ನಾಪತ್ತೆಯಾದ 17 ಮಂದಿಯ ಕುಟುಂಬಸ್ಥರೊಂದಿಗೆ ಡಿಎನ್‌ಎ ಹೊಂದಾಣಿಕೆ ಪ್ರಕ್ರಿಯೆ ಆರಂಭಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...

ಬೀದರ್‌ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...