ಕುಸುಮಾವತಿಯವರ ಕಾನೂನು ಹೋರಾಟ ಯಾರ ವಿರುದ್ಧ ಎಂಬ ಪ್ರಜ್ಞೆ ಬಿಜೆಪಿಗಿದೆಯೇ: ಪ್ರಿಯಾಂಕ್‌ ಪ್ರಶ್ನೆ

Date:

Advertisements

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸು ಧೈರ್ಯವಿದೆಯೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

“ಸೌಜನ್ಯ ಹೆಸರು ಹೇಳಿಕೊಂಡು ಹಣ ಮಾಡಿದ್ದಾರೆ, ಇಷ್ಟು ದೊಡ್ಡ ಮನೆ ಕಟ್ಟಿಸಿದ್ದಾರೆ ಎಂದು ನಿಮ್ಮದೇ ಪಕ್ಷದವರು ಹೇಳುತ್ತಿದ್ದಾರೆ“ ಎಂಬ ಕುಸುಮಾವತಿಯವರ ಮಾತಿಗೆ ಬಿಜೆಪಿ ನಾಯಕರು ಉತ್ತರ ನೀಡದೆ ಮೌನವಹಿಸಿದ್ದೇಕೆ? ಬಿ ವೈ ವಿಜಯೇಂದ್ರ ಅವರೇ, ಮೊದಲು ಸೌಜನ್ಯ ಕುಟುಂಬಕ್ಕೆ ನಿಮ್ಮ ಪಕ್ಷ ನೀಡಿದ ಕಿರುಕುಳಕ್ಕೆ ನ್ಯಾಯ ಸಿಗಬೇಕಲ್ಲವೇ? ಆ ನೊಂದ ಕುಟುಂಬಕ್ಕೆ ಬಿಜೆಪಿ ನೀಡುತ್ತಿರುವ ಕಿರುಕುಳದ ಬಗ್ಗೆ ಉತ್ತರ ಸಿಗಲೇಬೇಕು” ಎಂದು ಎಕ್ಸ್‌ ಖಾತೆಯಲ್ಲಿ ಆಗ್ರಹಿಸಿದ್ದಾರೆ.

“ಬಿಜೆಪಿ ಯಾರ ಪರವಾಗಿ ಧರ್ಮಸ್ಥಳಕ್ಕೆ ಹೋಗಿದ್ದರೋ ಅವರ ವಿರುದ್ಧವೇ ಕುಸುಮಾವತಿ ದೂರು ಹೇಳಿದ್ದಾರೆ. ಬಿಜೆಪಿ ನಾಯಕರು ಕುಸುಮಾವತಿಯವರ ಮಾತು ಕೇಳಿಸಿಕೊಂಡ ನಂತರವೂ ಕಾರ್ಯಕ್ರಮದ ವೇದಿಕೆ ಹತ್ತಿ ಕೂರುವುದಕ್ಕೆ ಹೇಗೆ ಮನಸಾಯಿತು? ಬಿಜೆಪಿಯವರು ಸೌಜನ್ಯ ಪರವೋ, ವಿರುದ್ಧವೋ ಎನ್ನುವುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ” ಎಂದು ಒತ್ತಾಯಿಸಿದ್ದಾರೆ.

“ಸೌಜನ್ಯ ಸಾವಿಗೆ ನ್ಯಾಯ ಸಿಗಬೇಕು ಎಂದಿದ್ದ ಬಿಜೆಪಿಗೆ ಯಾರಿಂದ ನ್ಯಾಯ ಸಿಗಬೇಕು ಎನ್ನುವುದನ್ನು ಸೌಜನ್ಯ ತಾಯಿ ಸ್ಪಷ್ಟವಾಗಿ ಹೇಳಿದ್ದಾರೆ, ನ್ಯಾಯ ಕೊಡಿಸುವರೇ? ಸೌಜನ್ಯ ತಾಯಿಯವರ ಕಾನೂನು ಹೋರಾಟಕ್ಕೆ ಬಿಜೆಪಿ ಪಕ್ಷವೇ ಹಣದ ನೆರವನ್ನು ನೀಡಲಿದೆ ಎಂದು ಘೋಷಿದ್ದಾರೆ. ಆ ಕಾನೂನು ಹೋರಾಟ ಯಾರ ವಿರುದ್ಧವಾಗಿರುತ್ತದೆ ಎಂಬ ಪ್ರಜ್ಞೆ ಬಿಜೆಪಿಗಿದೆಯೇ?” ಎಂದಿದ್ದಾರೆ.

“ಸೌಜನ್ಯ ಸಾವಿಗೆ ನ್ಯಾಯ ಕೊಡಿಸುವುದರಲ್ಲಿ ಬಿಜೆಪಿಗೆ ನೈಜ ಬದ್ಧತೆ ಇದ್ದಿದ್ದೇ ಆಗಿದ್ದರೆ ಕುಸುಮಾವತಿಯವರ ಮಾತು ಕೇಳಿದ ನಂತರ ಧರ್ಮಸ್ಥಳ ಚಲೋ ಮಾಡುವ ಬದಲು “ಧರ್ಮಸ್ಥಳದಿಂದ ವಾಪಸ್ ಚಲೋ“ ಕಾರ್ಯಕ್ರಮ ಮಾಡಬೇಕಿತ್ತು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

Download Eedina App Android / iOS

X