‘ಪ್ರಖಾಂಡ ಪಂಡಿತ’ ಪ್ರಕಾಶ್ ಬೆಳವಾಡಿಗೆ ನೆಲದ ಸಂವಿಧಾನ ತಿಳಿದಿದೆಯೇ? ಬಿ ಕೆ ಹರಿಪ್ರಸಾದ್‌ ಕಿಡಿ

Date:

ರಾಜ್ಯಸಭೆಯ ಸದಸ್ಯರಾದವರು ಪ್ರಧಾನಿಯಾಗಬಾರದೆಂದು ಯಾವ ಸಂವಿಧಾನ, ಕಾನೂನಿನಲ್ಲಿದೆ ಎಂದು ನಟ ಪ್ರಕಾಶ್ ಬೆಳವಾಡಿ ಜನರಿಗೆ ತಿಳಿಸಲಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

- Advertisement -

ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದೇ ಕಾನೂನುಬಾಹಿರ ಎಂದು ಹೇಳಿಕೆ ನೀಡಿರುವ ಪ್ರಕಾಶ್ ಬೆಳವಾಡಿ ವಿರುದ್ಧ ಎಕ್ಸ್‌ ತಾಣದಲ್ಲಿ ಹರಿಹಾಯ್ದಿರುವ ಅವರು, “ಜಗತ್ತು ಕಂಡ ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರು ಅಸ್ಸಾಂ ರಾಜ್ಯದಿಂದ ರಾಜ್ಯಸಭೆಗೆ ಸದಸ್ಯರಾಗಿ ಪ್ರಧಾನಿಯಾದದ್ದು ಯಾವ ಅಪರಾಧ? ಅಸ್ಸಾಂ ದೇಶದಲ್ಲಿರುವ ರಾಜ್ಯವಲ್ಲವೇ? ಕರ್ನಾಟಕದಿಂದಲೇ ಪ್ರಧಾನಿಯಾದ ಹೆಚ್ ಡಿ ದೇವೇಗೌಡರು ಕೂಡ ರಾಜ್ಯಸಭೆಯ ಸದಸ್ಯರಾಗಿಯೇ ಎನ್ನುವುದು ಬಹಿರಂಗ ಸತ್ಯ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

“ಖ್ಯಾತ ಪತ್ರಕರ್ತರಾದ ಕುಲದೀಪ್ ನಯ್ಯರ್ ಅವರು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ದೇಶದ ಪ್ರಜೆಯಾದವರು ಯಾವ ರಾಜ್ಯದಿಂದಲೂ ರಾಜ್ಯಸಭೆ ಸದಸ್ಯರಾಗಲು ಅರ್ಹರು ಎಂದು ದಾವೆ ಹೂಡಿದ ನಂತರ ಸುಪ್ರೀಂಕೋರ್ಟ್ ಕೂಡ ಅದಕ್ಕೆ ಅವಕಾಶ ನೀಡಿದೆ. ಇದು ‘ಪ್ರಖಾಂಡ ಪಂಡಿತ’ ಬೆಳವಾಡಿಗೆ ತಿಳಿದಿದೆಯೇ? ಸಂವಿಧಾನ, ಕಾನೂನಿನ ಬಗ್ಗೆ ಮಾತಾಡುವಾಗ ಎಚ್ಚರ ಇರಲಿ” ಎಂದು ಹೇಳಿದ್ದಾರೆ.

“7 ವರ್ಷದ ಬಾಲಕಿ ಮೇಲೆ ಶಾಸಕನ ತಮ್ಮನಿಂದ ಅತ್ಯಾಚಾರ ಆದರೂ, ಆತನ ಪರವಾಗಿ ವಾದ ಮಾಡುತ್ತಾ, ಕೋರ್ಟ್​​ನಲ್ಲಿ ಕಣ್ಣೀರು, ಕರುಣೆಗಿಂತಲೂ ಮುಖ್ಯವಾಗಿ ಬೇಕಿರುವುದು ಸಾಕ್ಷಿಗಳು ಎಂದು ‘ಯುದ್ಧಕಾಂಡ’ ಸಿನಿಮಾದಲ್ಲಿ ಡೈಲಾಗ್ ಹೊಡೆಯುವ ಪ್ರಕಾಶ್ ಬೆಳವಾಡಿಯವರಿಗೆ ನಿಜ ಜೀವನದಲ್ಲಿ ಮಾತಾಡುವಾಗ ಸಾಕ್ಷಿ, ದಾಖಲೆಗಳಿಲ್ಲದೆ ಪುಂಗುವುದನ್ನು ರೂಢಿ ಮಾಡಿಕೊಂಡಂತಿದೆ” ಎಂದು ಕುಟುಕಿದ್ದಾರೆ.

“ಮೋದಿಯ ಚಮಚಾಗಿರಿ ಮಾಡುತ್ತೇನೆ ಎಂದು ಬಹಿರಂಗವಾಗಿಯೇ ಘೋಷಿಸಿಕೊಂಡಿರುವ ಬೆಳವಾಡಿ, ಕನಿಷ್ಠಪಕ್ಷ ಮೋದಿ ಗುಜರಾತಿನಲ್ಲಿ ಶಾಸಕರಾಗಿ ಮುಖ್ಯಮಂತ್ರಿಯಾದರೋ, ಇಲ್ಲ ಮುಖ್ಯಮಂತ್ರಿಯಾದ ನಂತರ ಶಾಸಕರಾದರೋ ಎಂಬ ಸಾಮಾನ್ಯ ತಿಳಿವಳಿಕೆಯೂ ಇಲ್ಲದೇ ಇರುವುದು ದುರಂತ” ಎಂದು ಟೀಕಿಸಿದ್ದಾರೆ.

“ಸಂವಿಧಾನದಲ್ಲಿ ಪ್ರಧಾನಿಗಳ ಆಯ್ಕೆ, ಅಧಿಕಾರ, ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ವಿಧಿಗಳಿವೆ ಅದರ ಬಗ್ಗೆ ಎಳ್ಳಷ್ಟು ಬೆಳವಾಡಿಗೆ ತಿಳಿವಳಿಕೆ ಇಲ್ಲ, ಜ್ಞಾನವಂತೂ ಇಲ್ಲವೇ ಇಲ್ಲ. ಭಾರತದ ಪ್ರಜೆ, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಸದಸ್ಯರಾಗಿದ್ದರೆ ದೇಶದ ಪ್ರಧಾನಿಯಾಗಲು ಅರ್ಹತೆ ಹೊಂದಿರುತ್ತಾರೆ. ಆದರೆ ನಿಮ್ಮಂತೆ ದಿವಾಳಿಯಂತೂ ಆಗಿರಬಾರದು” ಎಂದು ವಾಗ್ದಾಳಿ ನಡೆಸಿದ್ದಾರೆ.

“ಸಂವಿಧಾನದ ಪ್ರಖಾಂಡ ಪಂಡಿತರಂತೆ, ಕಾನೂನು ತಜ್ಞರಂತೆ ಸಂವಿಧಾನದ ವಿಧಿ, ವಿಧಾನಗಳು ಹಾಗೂ ಕಾನೂನುಗಳ ಬಗ್ಗೆ ವಾಚಾಮಗೋಚರ ಹಲುಬಿರುವ ಬೆಳವಾಡಿಗೆ ದೇಶದ ಮೂಲೆಯ ಯಾವ ಪ್ರಜೆಯಾದರೂ ಪ್ರಧಾನಿಯಾಗುವ ಹಕ್ಕು, ಅಧಿಕಾರ, ಅರ್ಹತೆ ಸಂವಿಧಾನವೇ ನೀಡಿದೆ ಎಂಬುದು ಗೊತ್ತಿಲ್ಲದೆ ಇರುವುದು ವಿಪರ್ಯಾಸ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...