ಜನರಿಂದ ಪಡೆದ ಹೆಚ್ಚಿನ ಜಿಎಸ್ ಟಿಯನ್ನು ಕೇಂದ್ರ ಸರ್ಕಾರ ಮರಳಿ ನೀಡುವುದೇ: ಸಿಎಂ ಪ್ರಶ್ನೆ

Date:

ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕನ್ನಡ ವಿಚಾರ ಪರಂಪರೆಗೆ ಕೆವಿಎನ್...

ನಮ್ಮೊಳಗಿನ ತಾಕಲಾಟ, ಹೊಯ್ದಾಟ, ತೀರಗಳೇ ತಲುಪದ ಭಾರಿ ಅಲೆಗಳ ಏರಾಟದಲ್ಲಿ ಸಿಲುಕಿ ಒದ್ದಾಡುವಾಗ ಒಮ್ಮೆ ಕೆವಿಎನ್‌ ಜತೆ ಮಾತನಾಡಿದರೆ ಸಾಕು… ಕಂಡ ಆಪ್ತರು “ ಏನೋ ಇವತ್ತು ನಿನಗೆ ಬಂಪರ್‌ ಲಾಟರಿ ಹೊಡೀತಾ’’...

E20 ಹೆಸರಲ್ಲಿ E31 ಸುಲಿಗೆ: ಕರ್ನಾಟಕದಲ್ಲಿ ಮೋದಿ ಸರ್ಕಾರದ...

ದೇಶದ ಇಂಧನ ಮಾರುಕಟ್ಟೆಯ ಇತಿಹಾಸದಲ್ಲೇ ಅತ್ಯಂತ ಕರಾಳವಾದ, ಜನರ ಕಣ್ಣಿಗೆ ಮಣ್ಣು ಎರಚಿ ಅವರ ವಾಹನಗಳ ಎಂಜಿನ್‌ಗಳನ್ನು ನಾಶಪಡಿಸುವ ಮತ್ತು ಜೇಬಿಗೆ ಕತ್ತರಿ ಹಾಕುವ ಬೃಹತ್ ದರೋಡೆಕೋರತನ ಕರ್ನಾಟಕದಲ್ಲಿ ಬಯಲಾಗಿದೆ. ಪೆಟ್ರೋಲ್‌ನಲ್ಲಿ 20%ರ...

ಮೀಟರ್ ಹಾಕಲ್ಲ, ನಿಗದಿತ ಬಾಡಿಗೆಗೆ ಬರಲ್ಲ: ಆಟೋ ಸುಲಿಗೆಯಿಂದ...

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋಗಳ ಸಂಚಾರ ಮತ್ತು ಆಟೋ ಪ್ರಯಾಣಿಕರ ಸಮಸ್ಯೆ ಇಂದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ನಗರದ ರಸ್ತೆಗಳಲ್ಲಿ ಆಟೋಗಳ ಸಂಖ್ಯೆ ಹೆಚ್ಚುತ್ತಿರುವುದು, ನಿಗದಿತ ದರಕ್ಕಿಂತ ಹೆಚ್ಚಿನ ಬಾಡಿಗೆ ಕೇಳುವುದು,...

ಜಿಎಸ್ ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ ಟಿ ಯನ್ನು ಜಾರಿಗೆ ತಂದು ಜಿಎಸ್ ಟಿ ದರ ನಿಗದಿಪಡಿಸಿದರು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರಸರ್ಕಾರ, ಆ ಹಣವನ್ನು ಮರಳಿ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್ ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ. ಬಿಹಾರದ ಚುನಾವಣೆಯಿರುವ ಕಾರಣ, ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿ, ಕಡಿತಗೊಳಿಸಿದ್ದೇವೆ ಎಂದು ಹೇಳಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು.

ರಾಜ್ಯಕ್ಕೆ ಕೇಂದ್ರದ ಸುಮಾರು 17000 ಕೋಟಿ ಅನುದಾನದಲ್ಲಿ ಖೋತಾ
ಕೇಂದ್ರದಿಂದ ತೆರಿಗೆ ಹಣವಾಗಿ ಕೇವಲ 3200 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಉತ್ತರ ಪ್ರದೇಶಕ್ಕೆ ಶೇ.18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ. 3.5 ರಷ್ಟು ನೀಡುತ್ತಿರುವುದು ಅನ್ಯಾಯ. ಕರ್ನಾಟಕ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ನೀಡಿದರೆ , ನಮಗೆ ರೂಪಾಯಿಗೆ ಕೇವಲ 14 ಪೈಸೆ ಮಾತ್ರ ರಾಜ್ಯ ದೊರೆಯುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಅನುದಾನವನ್ನು ಕೇಂದ್ರ ವಿತ್ತಸಚಿವರು ರದ್ದುಪಡಿಸಿದರು. ಆಯೋಗದ ಶಿಫಾರಸ್ಸಿನಂತೆ 5490 ಕೋಟಿ ಹಾಗೂ ಕೆರೆಗಳ ಅಭಿವೃದ್ದಿ 3000 ಕೋಟಿ, ರಸ್ತೆ ನಿರ್ಮಾಣಕ್ಕೆ 3000 ಕೋಟಿ, ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೊಟಿ ರೂ.ಗಳ ಅನುದಾನವನ್ನು ನಮಗೆ ನೀಡಲಾಗಿಲ್ಲ. ಒಟ್ಟಾರೆ 17000 ಕೋಟಿ ರೂ. ಬರಬೇಕಾಗಿದ್ದ ಅನುದಾನ ಖೋತಾ ಆಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಅಗತ್ಯಬಿದ್ದರೆ ನ್ಯಾಯಾಲಯದ ನೆರವು ಪಡೆದು ಕೇಂದ್ರದ ಅನುದಾನ ಪಡೆಯಲಾಗುವುದು ಎಂದರು.

ಬಿಜೆಪಿ ಸಂಸದರಿಗೆ ರಾಜ್ಯದ ಹಿತ ಬೇಕಾಗಿಲ್ಲ
ಕೇಂದ್ರದ ಕಡಿಮೆ ಅನುದಾನದ ನಡುವೆ ಗ್ಯಾರಂಟಿಗಳ ವೆಚ್ಚವನ್ನು ಭರಿಸುವುದು ಸರ್ಕಾರಕ್ಕೆ ಸವಾಲಾಗಿದ್ದರೂ, ಸವಾಲನ್ನು ದಿಟ್ಟತನದಿಂದ ಎದುರಿಸಲಾಗುವುದು. ಜಿಎಸ್ ಟಿ ಸರಳೀಕರಣದಿಂದ ರಾಜ್ಯಸರ್ಕಾರಗಳು ಹೆಚ್ಚು ನಷ್ಟ ಎದುರಿಸಲಿವೆ. ಕರ್ನಾಟಕಕ್ಕೆ ಇದರಿಂದ ವಾರ್ಷಿಕ ಅಂದಾಜು 15 ಸಾವಿರ ಕೋಟಿ ನಷ್ಟವಾಗಲಿದೆ. ಕೇಂದ್ರಸರ್ಕಾರ , ಎನ್ ಡಿ ಎ ಗೆ ಬರುವ ರಾಜ್ಯಗಳ ಅನುಕೂಲಕ್ಕೆ ತಕ್ಕಂತೆ ಜಿಎಸ್ ಟಿ ಪರಿಹಾರವನ್ನು ನೀಡುತ್ತಿದೆ. ಕರ್ನಾಟಕದ ಬಿಜೆಪಿ ಸಂಸದರಿಗೆ ಮೋದಿಯವರನ್ನು ಹೊಗಳುವುದೇ ಕೆಲಸವಾಗಿದ್ದು, ರಾಜ್ಯದ ಹಿತಚಿಂತನೆ ಮಾಡುತ್ತಿಲ್ಲ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನರಮೇಧ ನಡೆಸಿದವರೊಂದಿಗೆ ಭಾರತ ನಿಲ್ಲುವುದು ಅಕ್ಷಮ್ಯ ಅಪರಾಧ

ಅಕ್ಟೋಬರ್ 7 ರೊಳಗೆ ಸಮೀಕ್ಷೆ ಪೂರ್ಣಗೊಳ್ಳುವ ಭರವಸೆಯಿದೆ
ರಾಜ್ಯದಲ್ಲಿ ಜಾತಿಸಮೀಕ್ಷೆ ಕಾರ್ಯದ ಪ್ರಗತಿ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್ 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸಮೀಕ್ಷೆಯಲ್ಲಿ ಜಾತಿ ವಿವರ- ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ
ಮತಾಂತರ ಹಾಗೂ ಜಾತಿ ಒಡೆಯುವ ದೃಷ್ಠಿಯಿಂದ ಸಮೀಕ್ಷೆಯನ್ನು ಸರ್ಕಾರ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದು, ಕೇಂದ್ರ ನಡೆಸಲಿರುವ ಜಾತಿ ಸಮೀಕ್ಷೆಯ ಉದ್ದೇಶವನ್ನು ತಿಳಿಸಬೇಕು. ಕೇಂದ್ರ ಸರ್ಕಾರಕ್ಕೆ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಕರ್ನಾಟಕದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜನರ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯುವ ಉದ್ದೇಶವಿದೆ. ಕಾಂತರಾಜು ವರದಿಯಲ್ಲಿ ಬ್ರಾಹ್ಮಣ ಕ್ರಿಶ್ಚಿಯನ್, ಎಂಬಿತ್ಯಾದಿ ಜಾತಿಗಳನ್ನು ನಮೂದಿಸಲಾಗಿತ್ತು. ಜನರು ತಮ್ಮ ಜಾತಿಯನ್ನು ಸ್ವಯಂಪ್ರೇರಿತರಾಗಿ ನಮೂದಿಸಿದರೆ ಅದಕ್ಕೆ ಸರ್ಕಾರ ಜವಾಬ್ದಾರವಾಗುವುದಿಲ್ಲ. ಆದರೆ ಆಯೋಗ, ಈ ಜಾತಿಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ. ಆದ್ದರಿಂದ ಜನರು ಸ್ವಯಂಪ್ರೇರಿತವಾಗಿ ಹೇಳುವ ಜಾತಿಯ ಮಾಹಿತಿಯನ್ನು ಆಯೋಗ ಪಡೆಯಲಿದೆ. ಇದರಲ್ಲಿ ಜಾತಿ ಒಡೆಯುವ ಪ್ರಶ್ನೆಯಿಲ್ಲ. ಜನರನ್ನು ರಾಜಕೀಯ ಉದ್ದೇಶದಿಂದ ದಾರಿತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದರು.

ರಾಜಕಾರಣಕ್ಕಾಗಿ ಆರೋಪ
ವಿಪಕ್ಷ ನಾಯಕ ಅಶೋಕ್ ರವರು ರೈತರ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರ ಇದ್ದರೂ ಸತ್ತಂತೆಯೇ ಎಂದು ಹೇಳಿಕೆ ನೀಡಿರುವ ಬಗ್ಗೆ ಉತ್ತರಿಸಿ, ಅಶೋಕ್ ಅವರು ವಿಪಕ್ಷದ ನಾಯಕರಾಗಿದ್ದರೂ, ಆರ್ ಎಸ್ ಎಸ್ ನವರ ನಿರ್ದೇಶನದಂತೆ ಮಾತನಾಡುತ್ತಾರೆ. ಅಶೋಕ್ ರವರು ರಾಜಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ ಎಂದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...

​’ಶಾಲೆಗಳ ಅಭಿವೃದ್ಧಿ ನೆಪದಲ್ಲಿ ಕಾರ್ಪೊರೇಟ್‌ಗಳಿಗೆ ಮಣೆ’: ರಾಜ್ಯ ಸರ್ಕಾರದ ವಿರುದ್ಧ ಎಸ್‌ಐಒ ಆಕ್ರೋಶ

'ಶಾಲಾ ಅಭಿವೃದ್ಧಿ'ಯ ಆಕರ್ಷಕ ನೆಪವೊಡ್ಡಿ ರಾಜ್ಯದ ಸರ್ಕಾರಿ ಶಾಲೆಗಳನ್ನು ಖಾಸಗಿ ಕಾರ್ಪೊರೇಟ್...

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ರೈತ ಸಂಘದಿಂದ ರಸ್ತೆ ತಡೆ

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಕರ್ನಾಟಕ ರಾಜ್ಯ ಕಬ್ಬು...

ಅಡ್ಡಂಡ ಕಾರ್ಯಪ್ಪರ ‘ಗಾಂಧಿ ಹತ್ಯೆಯ ಸತ್ಯ’ ನಾಟಕ, ಪುಸ್ತಕ ನಿಷೇಧಕ್ಕೆ ಆಗ್ರಹ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ ಕಾರ್ಯಪ್ಪ ಅವರು ರಚಿಸಿರುವ...