ಮಾಧ್ಯಮದವರು ಪದೇ ಪದೆ ನಾಯಕತ್ವ ಬದಲಾವಣೆ ಬಗ್ಗೆ ನನ್ನ ಕೇಳಬೇಡಿ:‌ ಡಿಸಿಎಂ ಡಿ ಕೆ ಶಿವಕುಮಾರ್

Date:

ಸಿಎಂ ಬದಲಾವಣೆ ವಿಚಾರವಾಗಿ ನಿಮ್ಮ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳೇ ಉತ್ತರ ನೀಡಿದ್ದಾರೆ. ಅವರು ಉತ್ತರ ನೀಡಿದ ಮೇಲೆ ನಾವು ಮತ್ತೆ ಆ ವಿಚಾರ ಚರ್ಚೆ ಮಾಡುವುದು ಸೂಕ್ತವಲ್ಲ. ನೀವುಗಳು ಸಹ ಮತ್ತೆ ಆ ವಿಚಾರವಾಗಿ ಪ್ರಶ್ನೆ ಮಾಡುವುದು ಸೂಕ್ತವಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

- Advertisement -

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿ, “ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಹೇಳುವ ಮುನ್ನ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿರುವುದು ಎಷ್ಟು ಸರಿ ಎಂದು ಕೇಳಿದಾಗ, “ನೀವು ನನಗೆ ಹೇಗೆ ತಿರುಗಿಸಿ ಕೇಳಿದರೂ ನಾನಂತೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಿಮಗೆ ಬಲಿಯಾಗುವುದಿಲ್ಲ. ನಿಮ್ಮ ಪ್ರಶ್ನೆಗಳಲ್ಲೇ ಉತ್ತರವಿದೆ. ಪಕ್ಷ ಕೊಟ್ಟಿರುವ ಜವಾಬ್ದಾರಿ ಮುಂದುವರಿಸಿಕೊಂಡು ಹೋಗುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಧೀಕ್ಷೆ ನೀಡಿದ್ದು, ನಾವೆಲ್ಲರೂ ಅದನ್ನು ಸಂತೋಷವಾಗಿ ಸ್ವೀಕರಿಸಿದ್ದೇವೆ. ಇದರ ಹೊರತಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.

ಹೈಕಮಾಂಡ್ ಭೇಟಿಯಾಗಿ ಯಾವೆಲ್ಲಾ ರಾಜಕೀಯ ಚರ್ಚೆ ನಡೆಯಿತು ಎಂದು ಕೇಳಿದಾಗ, “ನಾವು ಸುರ್ಜೆವಾಲಾ ಅವರ ಹೊರತಾಗಿ ಬೇರೆ ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿಯಾಗಿಲ್ಲ. ರಾಜ್ಯ ಉಸ್ತುವಾರಿಗಳ ಜೊತೆ ನಮ್ಮ ಕಾರ್ಯಕರ್ತರಿಗೆ ಕೆಲವು ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಎಲ್ಲಾ ಶಾಸಕರು ತಮ್ಮ ಅಭಿಪ್ರಾಯ ಸಲ್ಲಿಸಿದ್ದಾರೆ. ಸಚಿವರ ಅಭಿಪ್ರಾಯ ಸಂಗ್ರಹಿಸಬೇಕಿದೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಶ್ರಮಿಸಿರುವವರಿಗೆ ಹಾಗೂ ಕೆಲವರಿಗೆ ನಾವು ಕೊಟ್ಟಿರುವ ಮಾತಿಗೆ ಬದ್ಧವಾಗಿ ಸ್ಥಾನಮಾನ ನೀಡಬೇಕಿದೆ. ಈ ಪ್ರಕ್ರಿಯೆ ಈಗಾಗಲೇ ತಡವಾಗಿದೆ. ಇದು ಅಂತಿಮ ಹಂತಕ್ಕೆ ಬಂದಿದೆ. ಅಧ್ಯಕ್ಷನಾಗಿ ನಾನು ಪಕ್ಷದ ಸಂಘಟನೆಗೆ ಶ್ರಮಿಸಿದವರ ಹೆಸರನ್ನು ಸೇರಿಸಿ ಇದರ ಪ್ರಸ್ತಾವನೆಯನ್ನು ಮತ್ತೊಮ್ಮೆ ದೆಹಲಿಗೆ ಕಳುಹಿಸಿ ಅನುಮತಿ ಪಡೆಯಲಾಗುವುದು” ಎಂದರು.

ಡಿ.ಕೆ. ಶಿವಕುಮಾರ್ ಅವರಿಗೆ ಕೆಲವು ಶಾಸಕರ ಬೆಂಬಲ ಮಾತ್ರವಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಪಕ್ಷದ ರಾಜ್ಯ ಅಧ್ಯಕ್ಷ. ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ. ನಾನು ನಿನ್ನೆ ಬ್ಯುಸಿ ಇದ್ದೆ. ಅದರ ಮಧ್ಯೆ ಮುಖ್ಯಮಂತ್ರಿಗಳ ಹೇಳಿಕೆ ನೋಡಿದೆ” ಎಂದು ಹೇಳಿದರು.

ಈ ಹಿಂದೆ ನನ್ನ ಬಳಿ ಆಯ್ಕೆ ಇಲ್ಲ ಎಂದು ಹೇಳಿದ್ದಿರಿ, ಈಗಲೂ ನೀವು ಅದೇ ಸ್ಥಿತಿಯಲ್ಲಿದ್ದೀರಾ ಎಂದು ಕೇಳಿದಾಗ, “ನಿಮಗೆ ನಮ್ಮ ವಿಚಾರದಲ್ಲಿ ಯಾಕೆ ಗಾಬರಿ? ಈ ವಿಚಾರದಲ್ಲಿ ನಮಗೆ ಗಾಬರಿಯಿಲ್ಲ” ಎಂದರು.

2028ರ ಚುನಾವಣೆಗೂ ನನ್ನದೇ ನಾಯಕತ್ವ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ವೈಯಕ್ತಿಕ ಹೇಳಿಕೆ. ಅದನ್ನು ಹೇಳುವ ಸಂಪೂರ್ಣ ಅಧಿಕಾರ ಅವರಿಗಿದೆ.ಪಕ್ಷದ ಅಧ್ಯಕ್ಷನಾಗಿ ಪಕ್ಷ ಸಂಘಟನೆ ಮಾಡುವುದು ನನ್ನ ಜವಾಬ್ದಾರಿ. ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಯುವುದು ನನ್ನ ಗುರಿ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....