ಕುಡಿಯುವ ನೀರಿನ ಅಭಾವ : ಸಮರೋಪಾದಿಯಲ್ಲಿ ತಯಾರಿ ನಡೆಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Date:

ಬೇಸಿಗೆಯು ಕಠಿಣ ಪರಿಸ್ಥಿತಿಯನ್ನು ತಂದೊಡ್ಡುವ ಮುನ್ನವೇ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಲು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ನಿರ್ದೇಶಿಸಲಾಗಿದೆ. ಕುಡಿಯುವ ನೀರಿನ ಸವಾಲನ್ನು ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ತಯಾರಿ ನಡೆಸುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದ್ಯತೆಯಾಗಿ ಪರಿಗಣಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

- Advertisement -

ಮುಂದಿನ ಮೂರು ತಿಂಗಳು ಪ್ರತಿ ತಿಂಗಳಿನ 2ನೇ ಹಾಗೂ 4ನೇ ಸೋಮವಾರದಂದು ಪಂಚಾಯತ್ ಅಭಿವೃದ್ಧಿ ಅಧಿಕಾರಗಳ ಕುಡಿಯುವ ನೀರಿನ ಸಮಸ್ಯೆ ಕುರಿತ ವಸ್ತು ಸ್ಥಿತಿಯ ಬಗ್ಗೆ ಸಭೆ ನಡೆಸಬೇಕು ಹಾಗೂ ಆಯಾ ಜಿಲ್ಲೆಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಕೈಗೊಂಡ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಬೇಕೆಂಬುದು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎಲ್ಲಾ ಜಿಲ್ಲಾ ಪಂಚಾಯಿತಿಗಳಲ್ಲಿ 24/7 ನಿಯಂತ್ರಣ ಕೊಠಡಿಗಳನ್ನು ತೆರೆದು, ಸಿಬ್ಬಂದಿಗಳನ್ನು ನಿಯೋಜಿಸಲು ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯಾನಿರ್ವಾಹಕ ಅಧಿಕಾರಿಗಳ ಮುಖಾಂತರ ಕ್ಷಿಪ ಕಾರ್ಯಪಡೆಯನ್ನು ರಚಿಸಿ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ನೀರಿನ ಮೂಲಗಳ ಸುರಕ್ಷತೆಯನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಹಾಗೂ ಕುಡಿಯುವ ನೀರಿನ ಅಭಾವ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.

ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿನ ನೀರಿನ ಮೂಲಗಳನ್ನು ಪರಿಶೀಲನೆ ನಡೆಸಿ, ಕೊಳವೆಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ನೀರು ಅಥವಾ ಚರಂಡಿ ನೀರು ನಿಲ್ಲದಂತೆ ಹಾಗೂ ಕಲುಷಿತ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆಯನ್ನು ಕೈಗೊಂಡು, ಕೊಳವೆಬಾವಿ ಸುತ್ತ ಕಾಂಕ್ರೀಟ್ ಕಟ್ಟೆಯನ್ನು ಕಟ್ಟಿ, ಕಲುಷಿತ ನೀರು ಕೊಳವೆಬಾವಿಗೆ ಸೇರದಂತೆ ಮುಂಜಾಗ್ರತೆ ವಹಿಸಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...