ಪರಿಸರ ಸ್ನೇಹಿ ಬಟ್ಟೆಯ ಕೈಚೀಲದ ಸ್ವಯಂ ಚಾಲಿತ ವಿತರಣಾ ಯಂತ್ರಕ್ಕೆ ಚಾಲನೆ

Date:

ಪರಿಸರ ಮಾಲಿನ್ಯ ತಡೆಗೆ ವಿನೂತನ ಪರಿಹಾರ ಹುಡುಕಲು ಮತ್ತು ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಲು ಯೋಜನೆ ರೂಪಿಸಿ ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಪರಿಸರ ಇಲಾಖೆಗೆ ಸೂಚಿಸಿದರು.

- Advertisement -

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟಡದಲ್ಲಿ ಅಳವಡಿಸಲಾಗಿರುವ ಸ್ವಯಂ ಚಾಲಿತ ಬಟ್ಟೆಯ ಕೈಚೀಲ ವಿತರಣಾ ಯಂತ್ರಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಏಕ ಬಳಕೆ ಪ್ಲಾಸ್ಟಿಕ್‌ನಿಂದ ಪರಿಸರಕ್ಕೆ ತೀವ್ರ ಹಾನಿ ಆಗುತ್ತಿದ್ದು, ಇದಕ್ಕೆ ಪರ್ಯಾಯವಾದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಿ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯ ಜಗತ್ತಿಗೆ ಸವಾಲಾಗಿದ್ದು, ಈ ಸಂದರ್ಭದಲ್ಲಿ ಪ್ರಕೃತಿ, ಪರಿಸರ ಸಂರಕ್ಷಣೆಗೆ ಕೈಗೊಳ್ಳುವ ಸಣ್ಣ ಪರಿಹಾರಗಳೂ ದೀರ್ಘ ಕಾಲದಲ್ಲಿ ದೊಡ್ಡ ಪರಿಣಾಮ ಬೀರುತ್ತವೆ” ಎಂದರು.

“ಮಾಲಿನ್ಯ ನಿಯಂತ್ರಣಕ್ಕೆ ಸಾಂಪ್ರಧಾಯಿಕ ವಿಧಾನಗಳ ಜೊತೆಗೆ ನಾವೀನ್ಯಪೂರ್ಣ ಮತ್ತು ಆಧುನಿಕ ತಂತ್ರಜ್ಞಾನ ಆಧಾರಿತ ಪರಿಹಾರ ಹುಡುಕುವ ನಿಟ್ಟಿನಲ್ಲಿ ಸಂಶೋಧನೆಗೂ ಉತ್ತೇಜನ ನೀಡಬೇಕು” ಎಂದು ಹೇಳಿದರು.

“ಏಕ ಬಳಕೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಬಾಟಲಿ, ಚಮಚ, ತಟ್ಟೆ, ಲೋಟ ಇವೆಲ್ಲವೂ ಪರಿಸರಕ್ಕೆ ಶತ್ರುಗಳಾಗಿದ್ದು ಇದಕ್ಕೆ ಪರ್ಯಾಯವಾಗಿ ಜೈವಿಕ ವಿಘಟನೀಯ ವಸ್ತುಗಳ ಬಳಕೆಗೆ ಶೀಘ್ರ ಆದೇಶ ಹೊರಡಿಸಲು ಕ್ರಮ ಕೈಗೊಳ್ಳುವಂತೆ” ಸೂಚಿಸಿದರು.

“ಜೈವಿಕವಾಗಿ ವಿಘಟನೆಯಾಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್ ಆಸಿಡ್ ಪೋಲಿಮರ್ ಕೈಚೀಲ (ಕ್ಯಾರಿ ಬ್ಯಾಗ್)ಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ಅವಕಾಶ ಆಗುವಂತೆ ನಗರಾಭಿವೃದ್ಧಿ ಇಲಾಖೆಗೆ ಕಳಿಸಿರುವ ಪ್ರಸ್ತಾವನೆಯ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾದ ಶರಣು ಮೋದಿ, ಮರಿಸ್ವಾಮಿ ಗೌಡ ಮತ್ತು ಡಾ. ಪ್ರದೀಪ್, ಮಂಡಳಿಯ ಅಧ್ಯಕ್ಷ (ಉಸ್ತುವಾರಿ) ವಿಜಯ ಮೋಹನ ರಾಜ್, ಸದಸ್ಯ ಕಾರ್ಯದರ್ಶಿ ಬಾಲಚಂದ್ರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...