ಇ-ಆಡಳಿತ | ನಾಗರಿಕ ಕೇಂದ್ರಿತ ಸೇವೆ ಹೆಚ್ಚಿಸುವ ಪ್ರಯತ್ನಕ್ಕೆ ಮತ್ತಷ್ಟು ಬಲ: ಸಚಿವ ಪ್ರಿಯಾಂಕ್ ಖರ್ಗೆ

Date:

Advertisements

ಸರ್ಕಾರ ಎನ್ಐಎಸ್‌ಜಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸ್ಮಾರ್ಟ್ ಗೌರ್ನಮೆಂಟ್) ಜೊತೆ ಸಹಯೋಗಕ್ಕೆ ಮುಂದಾಗಿದ್ದು, ಇದರಿಂದ ಇ-ಆಡಳಿತದ ಮೂಲಕ ನಾಗರಿಕ ಕೇಂದ್ರಿತ ಸೇವೆಗಳನ್ನು ಹೆಚ್ಚಿಸುವ ನಮ್ಮ ಪ್ರಯತ್ನಗಳು ಮತ್ತಷ್ಟು ಬಲಪಡಿಸುವಂತಾಗುತ್ತದೆ ಎಂದು ಸಚಿವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ಇ-ಆಡಳಿತ ಪರಿಹಾರಗಳನ್ನು ಸುಗಮಗೊಳಿಸಲು ಎನ್ಐಎಸ್ಜಿ ಸಂಸ್ಥೆಯ ಡಿಜಿಟಲ್ ತಂತ್ರಜ್ಞಾನ ನೆರವಾಗಲಿದೆ ಹಾಗೂ ಸಾರ್ವಜನಿಕ ಮೂಲಸೌಕರ್ಯವನ್ನು ಹೆಚ್ಚಿಸಲು ಸಹಾಯಕವಾಗಲಿದೆ, ಸೇವಾ ವಿತರಣಾ ದಕ್ಷತೆಯನ್ನು ಸುಧಾರಿಸಿ, ನಾಗರಿಕರಿಗೆ ನೇರವಾಗಿ ಪ್ರಯೋಜನವನ್ನು ನೀಡುವ ಎಐ- ಚಾಲಿತ ಆಡಳಿತ ಮಾದರಿಗಳನ್ನು ಸಂಯೋಜಿಸುವಲ್ಲಿ ನೆರವಾಗಲಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಕರ್ನಾಟಕವು ಭಾರತದ ತಂತ್ರಜ್ಞಾನ ಮತ್ತು ಇನ್ನೋವೇಶನ್ ಹಬ್ ಎಂದು ಗುರುತಿಸಿಕೊಂಡಿದ್ದು, ಡಿಜಿಟಲ್ ಆಡಳಿತದಲ್ಲಿ ಮುಂಚೂಣಿಯಲ್ಲಿದೆ. ರಾಜ್ಯ ಸರ್ಕಾರಗಳು, ಸಾರ್ವಜನಿಕ ಮತ್ತು ಖಾಸಗಿ ಮಧ್ಯಸ್ಥಗಾರರ ಆಡಳಿತದಲ್ಲಿ ಜಾಗತಿಕ ಹಾಗೂ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದರಿಂದ ಇ-ಆಡಳಿತದಲ್ಲಿ ಮಹತ್ವದ ಬದಲಾವಣೆಯನ್ನು ತರಬಹುದಾಗಿದೆ ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪಾಠ ಕಲಿಯದ ‘ರೈಲ್ವೆ ಇಲಾಖೆ’

ಎನ್ಐಎಸ್‌ಜಿಯ ಡಿಜಿಟಲ್ ಪರಿಣತಿಯೊಂದಿಗೆ ರಾಜ್ಯದ ಇ-ಆಡಳಿತದಲ್ಲಿ ಮಹತ್ವದ ಬೆಳವಣಿಗೆ ರೂಪಿಸುವ ಸಲುವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಎನ್ಐಎಸ್ಜಿಯ ಹಿರಿಯ ಅಧಿಕಾರಿಗಳ ನಡುವೆ ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸಲು ಮತ್ತು ಕರ್ನಾಟಕದ ಡಿಜಿಟಲ್ ರೂಪಾಂತರವನ್ನು ವೇಗಗೊಳಿಸಲು ಬೆಂಗಳೂರಿನಲ್ಲಿ ಫೆ.16ರಂದು ಸಭೆಯನ್ನು ಆಯೋಜಿಸಲಾಗಿತ್ತು. ಆಡಳಿತದಲ್ಲಿ ಹೊಸ ಮಾನದಂಡಗಳನ್ನು ರೂಪಿಸಿ ಭವಿಷ್ಯದಲ್ಲಿ ಡಿಜಿಟಲ್ ಮೂಲಸೌಕರ್ಯವನ್ನು ನಿರ್ಮಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗುವುದರೊಂದಿಗೆ ಇತರ ರಾಜ್ಯಗಳಿಗೆ ಮಾದರಿಯಾಗಬಲ್ಲದು ಎಂದು ತಿಳಿಸಿದ್ದಾರೆ.

“ನವೀನ ಡಿಜಿಟಲ್ ತಂತ್ರಜ್ಞಾನಗಳನ್ನು ರೂಪಿಸುವ ಮೂಲಕ ಕರ್ನಾಟಕದ ಇ-ಆಡಳಿತದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲು ಎನ್ಐಎಸ್‌ಜಿ ಬದ್ಧವಾಗಿದೆ. ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸುವುದು, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಬಲಪಡಿಸುವುದು ಮತ್ತು ವಾಯುಯಾನ ಕ್ಷೇತ್ರ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳನ್ನು ಅನ್ವೇಷಿಸುವುದು ಸಚಿವ ಪ್ರಿಯಾಂಕ್ ಖರ್ಗೆ ಅವರ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖಗೊಂಡು ಕರ್ನಾಟಕದ ಸುಧಾರಿತ ಇ-ಆಡಳಿತಕ್ಕೆ ಮಹತ್ವದ ಕೊಡುಗೆ ನೀಡುತ್ತೇವೆ” ಎನ್ಐಎಸ್‌ಜಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೀವ್ ಬನ್ಸಾಲ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X