ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿಯಂತ್ರಿಸಲು ಸುಲಭದ ಮಾರ್ಗವಿದೆ: ಕಾಂಗ್ರೆಸ್‌ಗೆ ಸಾಧ್ಯವೇ?

Date:

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡರೂ, ಅದು ಖಂಡಿತ ನ್ಯಾಯಾಲಯದ ಅಂಗಳಕ್ಕೆ ಹೋಗಲಿದೆ. ಅಲ್ಲಿ ಏನು ತೀರ್ಮಾನವಾಗುತ್ತದೋ ಗೊತ್ತಿಲ್ಲ. ಅದೊಂದು ದೀರ್ಘಕಾಲೀನ ಹೋರಾಟ.
ಸದ್ಯಕ್ಕೆ, RSS ಚಟುವಟಿಕೆಗಳನ್ನು ನಿಯಂತ್ರಿಸಲು ಸುಲಭದ ಮಾರ್ಗವಿದೆ. ಮೊದಲು ರಾಜ್ಯದ ಕಾಂಗ್ರೆಸ್ ನಾಯಕರು ಸ್ವಯಂಪ್ರೇರಣೆಯಿಂದ ತಮ್ಮ ಒಡೆತನದಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್‌ ಒಳಗೊಂಡಂತೆ ಸಂಘ ಪರಿವಾರದ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಹಿರಿಯ ಪತ್ರಕರ್ತ ದಿನೇಶ್‌ ಅಮಿನ್ ಮಟ್ಟು ಸಲಹೆ ನೀಡಿದ್ದಾರೆ.

- Advertisement -

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, “ಕಾಂಗ್ರೆಸ್‌ ನಾಯಕರು ಈ ಕ್ರಮ ಕೈಗೊಳ್ಳುವುದು ಸಾಧ್ಯವೇ? ಮಂಗಳೂರಿನ ಒಂದು ಶಿಕ್ಷಣ ಸಂಸ್ಥೆಯಲ್ಲಿ ದೊಡ್ಡಮಟ್ಟದ ಎಬಿವಿಪಿ ಸಮ್ಮೇಳನ ನಡೆಯುತ್ತದೆ. ಅದರ ನಂತರ ಆ ಸಂಸ್ಥೆಯ ಒಡೆಯರು ವಿಧಾನ ಪರಿಷತ್ ಸದಸ್ಯರಾಗುತ್ತಾರೆ. ಕಲ್ಲಡ್ಕದ ಭಟ್ರ ಜೊತೆಯಲ್ಲಿಯೇ ಚಕ್ಕಂದವಾಡುತ್ತಾ ಶಾಸಕರು, ಸಚಿವರು, ಇನ್ನು ಏನೇನೋ ಆಗುತ್ತಾರೆ, ಚುನಾವಣೆ ಬಂದಾಗ ಹಿಂದಿನ ದಿನದವರೆಗೆ ಆರ್‌ಎಸ್‌ಎಸ್‌ನ ಬೈಠಕ್‌ನಲ್ಲಿದ್ದವರನ್ನು ರಾಜಮರ್ಯಾದೆಯಿಂದ ಕರೆತಂದು ಟಿಕೆಟ್ ಕೊಡುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

“ಆರ್‌ಎಸ್‌ಎಸ್‌ಗೆ ಹೆದರುವವರು, ಅದರ ಜೊತೆ ಸಂಬಂಧ ಇಟ್ಟುಕೊಂಡವರು ಪಕ್ಷ ಬಿಟ್ಟು ತೊಲಗಿ ಎಂದು ರಾಹುಲ್‌ ಗಾಂಧಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗಳು ರೋಮಾಂಚನವನ್ನುಂಟು ಮಾಡಿದ್ದವು. ಆದರೆ, ಸಂಘ ಪರಿವಾರದ ವಿರುದ್ದ ಮಾತನಾಡುತ್ತಿದ್ದ ನಮ್ಮಂತಹವರಿಗೆ ಕೊಲೆ-ಹಲ್ಲೆ ಬೆದರಿಕೆ, ತಂದೆ-ತಾಯಿ, ಅಕ್ಕ-ತಂಗಿ ಎನ್ನದೆ ಎಲ್ಲರ ಹೆಸರು ತೆಗೆದು ವಾಚಾಮಗೋಚರ ಬೈಗುಳ ಸುರಿಮಳೆ ಎಲ್ಲವೂ ನಡೆಯುತ್ತಲೇ ಇರುತ್ತದೆ. ಈಗ ನೋಡಿ ಸಚಿವ ಪ್ರಿಯಾಂಕ ಖರ್ಗೆಯವರು ಧೈರ್ಯ ಮಾಡಿ ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ ತಪ್ಪಿಗೆ ಅವರು ಎಲ್ಲ ಬಗೆಯ ಬೆದರಿಕೆ, ಬೈಗುಳಗಳನ್ನು ಅನುಭವಿಸುವಂತಾಗಿದೆ. ಒಬ್ಬಿಬ್ಬರನ್ನು ಹೊರತುಪಡಿಸಿದರೆ ಕಾಂಗ್ರೆಸ್‌ನ ಯಾವ ನಾಯಕರೂ ಖರ್ಗೆಯವರ ಪರವಾಗಿ ದನಿ ಎತ್ತುತ್ತಿಲ್ಲ. ಪ್ರಿಯಾಂಕ ಖರ್ಗೆಯವರು ಕೂಡಾ ತಮ್ಮ ಅಕ್ಕಪಕ್ಕದಲ್ಲಿ ಯಾರು ಇದ್ದಾರೆ ಎನ್ನುವುದನ್ನು ನೋಡಲು ಇದು ಸಕಾಲ. ನಾವಂತೂ ನಿಮ್ಮ ಜೊತೆಗೆ ಇರುತ್ತೇವೆ” ಎಂದು ಅಮಿನ್ ಮಟ್ಟು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...