ಸೋನಿಯಾ, ರಾಹುಲ್ ಗಾಂಧಿ ಬೆಂಬಲಿಗರಿಗೆ ಇಡಿ ಕಿರುಕುಳ: ಡಿಸಿಎಂ ಡಿ ಕೆ ಶಿವಕುಮಾರ್

Date:

ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

- Advertisement -

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿ, “ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇ.ಡಿ. ಚಾರ್ಜ್ ಶೀಟ್ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಡಿ.19 ರ ಒಳಗೆ ಪೊಲೀಸರಿಗೆ ಮಾಹಿತಿ ನೀಡಬೇಕು

“ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್‌ಗೆ ಇಡಿ ಸಮನ್ಸ್ ನೀಡಿದೆ. ಈಗಾಗಲೇ ನಾವು ಇದಕ್ಕೆ ಹಿಂದೆಯೇ ಉತ್ತರ ಕೊಟ್ಟಿದ್ದೆವು. ಆದರೂ ನಮಗೆ ಸಮನ್ಸ್ ನೀಡಿರುವುದು ಆಘಾತಕಾರಿ. ದೆಹಲಿ ಪೊಲೀಸರು ಡಿಸೆಂಬರ್ 19ನೇ ತಾರೀಕಿನ ಒಳಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ” ಎಂದು ಹೇಳಿದರು.

“ನಾವು ತೆರಿಗೆ ಪಾವತಿ ಮಾಡುತ್ತಿದ್ದೇವೆ. ನಮ್ಮ ಹಣವನ್ನು ನಮಗೆ ಬೇಕಾದವರಿಗೆ ನೀಡುತ್ತೇವೆ. ಕಿರುಕುಳ ನೀಡಲು ಪಿಎಂಎಲ್ ಎ ಪ್ರಕರಣ ಕೂಡ ದಾಖಲಿಸಿದ್ದರು. ಆನಂತರ ಏನಾಯಿತು? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಜತೆಗೆ ಗೊಂದಲ ಮೂಡಿಸುವುದು ಇದರ ಉದ್ದೇಶ” ಎಂದರು.

“ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್, ಯಂಗ್ ಇಂಡಿಯಾ ಇವು ನಮ್ಮ ಕಾಂಗ್ರೆಸ್ ಪಕ್ಷದ ಸಂಸ್ಥೆಗಳು. ನಾವು ಕಾಂಗ್ರೆಸ್ಸಿಗರಾದ ಕಾರಣಕ್ಕೆ ಈ ಸಂಸ್ಥೆಗಳು ಕಷ್ಟ ಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್ ಗಳಿಂದ ದೇಣಿಗೆ ನೀಡಿದ್ದೇವೆ. ನಮ್ಮಂತೆ ಅನೇಕ ಜನರು ಸಹಾಯ ಮಾಡಿದ್ದಾರೆ” ಎಂದು ಹೇಳಿದರು.

“ಶುಕ್ರವಾರ ನನಗೆ ಹಾಗೂ ಸುರೇಶ್ ಅವರಿಗೆ ನೋಟಿಸ್ ಬಂದಿದೆ. ಆತ ಸಂಸದನಾದ ಸಮಯದಲ್ಲಿ ಒಂದಷ್ಟು ಹಣ ದೇಣಿಗೆ ನೀಡಿದ್ದ. ನೋಟಿಸ್ ಅನ್ನು ವಿವರವಾಗಿ ತಿಳಿದುಕೊಂಡು ಕಾನೂನಾತ್ಮಕವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...

ಅರಮನೆ ಸರ್ಕಾರದ್ದು; ರಾಜವಂಶಸ್ಥರಿಗೆ ವಾಸಿಸಲು ಜಾಗ ಕೊಟ್ಟಿದ್ದೇವೆ: ಸಚಿವ ಯತೀಂದ್ರ

ದಸರಾ ಆಚರಣೆಯಲ್ಲಿ ಸಮನ್ವಯದ ಕೊರತೆಯಿತ್ತು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...