ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳ ಮೇಲೆ ಸೇರಿದಂತೆ ಒಟ್ಟು ಬೆಂಗಳೂರಿನ 5 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ. ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದು, ಇವರ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಅದರ ಅನ್ವಯ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನೂ ಓದಿರಿ: ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: ಪೌರತ್ವ ಸಾಬೀತಿಗೆ ಜನರ ಪರದಾಟ; ಮತದಾನದ ಹಕ್ಕನ್ನೇ ಕಳೆದುಕೊಳ್ಳುವರೇ 50% ಜನರು?
ಶಾಸಕ ಸುಬ್ಬಾರೆಡ್ಡಿ ಕುಟುಂಬ ಸದಸ್ಯರು ಹೊಂದಿರುವ ವಿದೇಶಿ ಆಸ್ತಿ ಮತ್ತು ಅವರ ಉದ್ಯಮ ಪಾಲುದಾರರಿಗೆ ಸೇರಿದ ಆಸ್ತಿ ಸಂಬಂಧ ದಾಳಿ ನಡೆದಿದೆ. ವಿದೇಶಗಳಲ್ಲಿನ ಬ್ಯಾಂಕ್ ಖಾತೆ, ವಿದೇಶ ವ್ಯವಹಾರದಲ್ಲಿ ಹೂಡಿಕೆ ವಿಚಾರವಾಗಿ ಶೋಧ ನಡೆಸಲಾಗುತ್ತಿದೆ. ಸುಬ್ಬಾರೆಡ್ಡಿ ಅವರು ಮಲೇಷ್ಯಾ, ಹಾಂಕಾಂಗ್, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ.