BREAKING NEWS | ಕೆಪಿಎಸ್‌ಸಿ ಕಚೇರಿ ಸೇರಿ ಹಲವೆಡೆ ಇಡಿ ದಾಳಿ

Date:

ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ಅಕ್ರಮ ನೇಮಕಾತಿ ಆರೋಪ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು (ಆಗಸ್ಟ್ 18) ಕೆಪಿಎಸ್‌ಸಿ ಕಚೇರಿ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

- Advertisement -

ಬೆಂಗಳೂರಿನಲ್ಲಿರುವ ಕೆಪಿಎಸ್‌ಸಿ ಮುಖ್ಯ ಕಚೇರಿ, ಅಮಾನತುಗೊಂಡಿರುವ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ ಹಾಗೂ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಅವರ ನಿವಾಸ ಸೇರಿದಂತೆ ಕರ್ನಾಟಕ ಮತ್ತು ಅಹಮದಾಬಾದ್‌ನ ಒಟ್ಟು 21 ಸ್ಥಳಗಳ ಮೇಲೆ ಇಡಿ ಏಕಕಾಲದಲ್ಲಿ ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿ: 545 ಪಿಎಸ್ಐ ಹುದ್ದೆ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕೆಪಿಎಸ್‌ಸಿ ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿ ಮತ್ತು ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆಯ ಹುದ್ದೆಗಳ ನೇಮಕಾತಿಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ, ಒಎಂಆರ್ ಶೀಟ್ ತಿದ್ದುಪಡಿ, ಸ್ವಜನಪಕ್ಷಪಾತ ಹಾಗೂ ಅಕ್ರಮ ಹಣ ವರ್ಗಾವಣೆ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಕಾರವಾರ, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಡಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ. ಡಿಜಿಟಲ್ ಮೌಲ್ಯಮಾಪನದ ಹೊಣೆ ಹೊತ್ತಿದ್ದ ‘ಎಡುಟೆಸ್ಟ್ ಸಲ್ಯೂಷನ್ಸ್’ ಸಂಸ್ಥೆ ಹಾಗೂ ಮಧ್ಯವರ್ತಿಗಳ ಮನೆಗಳ ಮೇಲೂ ದಾಳಿ ನಡೆದಿದೆ.

ಇನ್ನು ಈಗಾಗಲೇ ರಾಜ್ಯ ಸರ್ಕಾರವು ಈ ಸಂಬಂಧ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಇದೀಗ ಅಕ್ರಮ ಹಣ ವರ್ಗಾವಣೆ ಕಾಯ್ದೆ (PMLA) ಅಡಿಯಲ್ಲಿ ಇಡಿ ಕೂಡ ಪ್ರಕರಣ ದಾಖಲಿಸಿಕೊಂಡು ತೀವ್ರ ಶೋಧ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...