ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು, ಬೆಳಗಾವಿ ನಿವಾಸಗಳ ಮೇಲೆ ಇ.ಡಿ ದಾಳಿ

Date:

ಅಬಕಾರಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು, ಬೆಳಗಾವಿ ನಿವಾಸ ಸೇರಿದಂತೆ ಹಲವು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.

- Advertisement -

​ಸಚಿವರು, ಅವರ ಆಪ್ತರು ಹಾಗೂ ಬೆಂಬಲಿಗರ ಮನೆಗಳು ಮತ್ತು ಕಚೇರಿಗಳನ್ನು ಗುರಿಯಾಗಿಸಿಕೊಂಡು ಈ ಬೃಹತ್ ಕಾರ್ಯಾಚರಣೆ ನಡೆಯುತ್ತಿದೆ. ಉನ್ನತ ಮೂಲಗಳ ಪ್ರಕಾರ, ಸಚಿವರ ಬೆಂಗಳೂರು, ಬೆಳಗಾವಿ ನಿವಾಸಗಳು ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ವಿವಿಧ ಪ್ರದೇಶಗಳು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲಕ್ಕೆ ಇ.ಡಿ ಅಧಿಕಾರಿಗಳ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

​ಈ ಹಿಂದೆ ಸಚಿವರ ಸಂಬಂಧಿ ಮಂಜುನಾಥ್ ಎಂಬುವವರ ಮೇಲೆ ನಡೆದಿದ್ದ ಅಬಕಾರಿ ಹಗರಣದ ಇ.ಡಿ ದಾಳಿಯ ಮುಂದುವರಿದ ಭಾಗವಾಗಿ ಈ ಮಹತ್ವದ ಕಾರ್ಯಾಚರಣೆ ನಡೆದಿದೆ ಎಂದು ಹೇಳಲಾಗಿದೆ. ಸತೀಶ್ ಜಾರಕಿಹೊಳಿ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ತಮ್ಮ ರಾಜಕೀಯ ಅಧಿಕಾರದ ಪ್ರಭಾವ ಬಳಸಿ ಸುಮಾರು 18 ಅನಧಿಕೃತ ಬಾರ್ ಲೈಸೆನ್ಸ್‌ಗಳನ್ನು ನೀಡಲು ನೇರವಾಗಿ ನೆರವಾಗಿದ್ದರು ಎಂಬ ಆರೋಪಗಳು ಅವರ ಮೇಲಿವೆ ಎನ್ನಲಾಗಿದೆ.

​ನಿಯಮಬಾಹಿರವಾಗಿ ನೀಡಲಾದ ಬಾರ್ ಲೈಸೆನ್ಸ್‌ಗಳ ಕಡತಗಳು ಹಾಗೂ ಆ ಮೂಲಕ ನಡೆದಿರುವ ಭಾರಿ ಮೊತ್ತದ ಅಕ್ರಮ ಹಣ ವರ್ಗಾವಣೆಯ (ಮನಿ ಲಾಂಡರಿಂಗ್) ಜಾಡನ್ನು ಹಿಡಿದು ತನಿಖಾಧಿಕಾರಿಗಳು ಇದೀಗ ಮಹತ್ವದ ದಾಖಲೆಗಳನ್ನು ಜಾಲಾಡುತ್ತಿದ್ದಾರೆ. ಸಚಿವರ ನಿವಾಸಗಳಲ್ಲಿ ದೊರೆತ ಆಸ್ತಿ ಪತ್ರಗಳು, ವ್ಯವಹಾರದ ಕಡತಗಳು ಹಾಗೂ ಬ್ಯಾಂಕ್ ವಹಿವಾಟುಗಳ ಕುರಿತು ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

​ರಾಜ್ಯದ ಅತ್ಯಂತ ಪ್ರಭಾವಿ ಸಚಿವರೊಬ್ಬರ ಮೇಲೆ ದಿಢೀರನೆ ನಡೆದಿರುವ ಈ ದಾಳಿಯು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಇದೊಂದು ರಾಜಕೀಯ ಪ್ರೇರಿತ ದಾಳಿ ಎಂಬ ಆರೋಪಗಳು ಬಲವಾಗಿ ಕೇಳಿಬರುತ್ತಿವೆ. ಪ್ರಸ್ತುತ ತನಿಖೆಯು ತೀವ್ರಗತಿಯಲ್ಲಿ ಮುಂದುವರಿದಿದ್ದು, ದಾಳಿಯ ವೇಳೆ ವಶಪಡಿಸಿಕೊಂಡಿರುವ ಅಧಿಕೃತ ದಾಖಲೆಗಳು ಹಾಗೂ ಇತರ ಹಣಕಾಸಿನ ಮಾಹಿತಿಗಳ ಬಗ್ಗೆ ಇ.ಡಿ ಅಧಿಕಾರಿಗಳು ತನಿಖೆಯ ಬಳಿಕವಷ್ಟೇ ಸ್ಪಷ್ಟ ಚಿತ್ರಣ ನೀಡಬೇಕಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಬೇಕಾಬಿಟ್ಟಿ FIR ಹಾಕುವಂತಿಲ್ಲ, ಬಂಧಿಸುವಂತಿಲ್ಲ: ಪೊಲೀಸರಿಗೆ ಹೈಕೋರ್ಟ್ ಮಾರ್ಗಸೂಚಿಗಳೇನು?

ಫೇಸ್‌ಬುಕ್, ಎಕ್ಸ್, ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಪೋಸ್ಟ್‌ಗಳು, ಅಭಿಪ್ರಾಯಗಳು...

ಕುವೆಂಪು ವಿವಿ ಸಂಶೋಧನಾ ವಿದ್ಯಾರ್ಥಿಗೆ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ!

ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವು ಎಲ್ಸೆವಿಯರ್ ಸಹಯೋಗದಲ್ಲಿ ಪ್ರಕಟಿಸಿರುವ ಜಾಗತಿಕ ವೈಜ್ಞಾನಿಕ ಶ್ರೇಯಾಂಕದಲ್ಲಿ,...

​’ರಾಜತಾಂತ್ರಿಕ ಒಪ್ಪಂದಕ್ಕೆ ಬಾರದಿದ್ದರೆ ಇರಾನ್ ಮೇಲೆ ಮತ್ತೆ ದಾಳಿ’: ಡೊನಾಲ್ಡ್ ಟ್ರಂಪ್

ಟೆಹ್ರಾನ್ ರಾಜತಾಂತ್ರಿಕ ಒಪ್ಪಂದಕ್ಕೆ ಬರಲು ವಿಫಲವಾದರೆ ಇರಾನ್ ಮೇಲೆ ಮತ್ತೊಂದು ಸೇನಾ...

ರೆಹಾನ್ ವಾಡ್ರಾ ಛಾಯಾಚಿತ್ರ ಪ್ರದರ್ಶನಕ್ಕೆ ಕೇರಳಕ್ಕೆ ಆಹ್ವಾನ ನೀಡಿದ ಸಿಎಂ ಸತೀಶನ್

ದೆಹಲಿಯ ಬಿಕಾನೇರ್ ಹೌಸ್‌ನಲ್ಲಿ ನಡೆಯುತ್ತಿರುವ ತಮ್ಮ 'ನೋ ಐಡಿಯಾ ಈಸ್ ಫೈನಲ್'...