ಈದಿನ ಎಕ್ಸ್‌ಕ್ಲೂಸಿವ್‌ ಬ್ರೇಕಿಂಗ್‌ ನ್ಯೂಸ್‌: ಮುನಿರತ್ನ ವಿರುದ್ಧ ಚಾರ್ಜ್‌ಶೀಟ್‌ ಹಾಕಲು ಸ್ಪೀಕರ್‌ ಅನುಮತಿ!

Date:

Advertisements

ಹಲವು ಕ್ರಿಮಿನಲ್‌ ಆರೋಪಗಳಡಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಚಾರ್ಜ್‌ಶೀಟ್‌ ಆಗಿರುವ ಕೇಸೊಂದರಲ್ಲಿ ಅಭಿಯೋಜನೆಗೆ (ಪ್ರಾಸಿಕ್ಯೂಷನ್‌ಗೆ) ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್‌ ಅವರು ಅನುಮತಿ ನೀಡಿದ್ದಾರೆ.

ಈ ಕುರಿತ ಸರ್ಕಾರಿ ಆದೇಶದ ಪ್ರತಿ ಈದಿನ ಡಾಟ್‌ ಕಾಮ್‌ಗೆ ಲಭ್ಯವಾಗಿದೆ.

ಹನಿಟ್ರ್ಯಾಪ್‌ ನಡೆಸಲು ಎಚ್‌ ಐ ವಿ ಸೋಂಕಿತ ಮಹಿಳೆಯರನ್ನು ಬಳಸಿಕೊಂಡಿದ್ದು, ದಲಿತರ ಮೇಲೆ ಜಾತಿನಿಂದನೆ, ಆಮಿಷವೊಡ್ಡಿ ವಿಕಾಸಸೌಧದಲ್ಲೇ ಅತ್ಯಾಚಾರ ಮಾಡಿದ್ದು ಒಳಗೊಂಡಂತೆ ಬಹಳ ಗಂಭೀರ ಆರೋಪಗಳ ಮೇಲೆ ಮುನಿರತ್ನ ವಿರುದ್ಧ ಎಫ್‌ ಐ ಆರ್‌ ದಾಖಲಾಗಿತ್ತು ಮತ್ತು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು.

Advertisements

ಆ ನಂತರ ಜಾಮೀನಿನ ಮೇಲೆ ಹೊರಬಂದು ಕಳೆದ ಬಜೆಟ್‌ ಅಧಿವೇಶನದಲ್ಲೂ ಭಾಗಿಯಾಗಿದ್ದರು. ಬಜೆಟ್‌ ಅಧಿವೇಶನದಲ್ಲಿ ಸಚಿವ ಕೆ.ಎನ್‌.ರಾಜಣ್ಣ ಹನಿಟ್ರ್ಯಾಪ್‌ ನಡೆಯುತ್ತಿದೆಯೆಂದು ಹೇಳಿದಾಗ, ಸದನದಲ್ಲಿ ಭಾರೀ ಕೋಲಾಹಲ ಆಗಿತ್ತು. ಬಿಜೆಪಿ ಶಾಸಕರು ಈ ವಿಚಾರದಲ್ಲಿ ದೊಡ್ಡ ಪ್ರತಿಭಟನೆಯನ್ನೂ ನಡೆಸಿದ್ದರು.

ಅದೇ ಸಂದರ್ಭದಲ್ಲಿ ಅವರದ್ದೇ ಪಕ್ಷದ ಹನಿಟ್ರ್ಯಾಪ್‌ ಆರೋಪವನ್ನು ಹೊತ್ತಿದ್ದ ಶಾಸಕ ಮುನಿರತ್ನ ಸಹಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಪ್ರಶ್ನೆಗೊಳಗಾಗಿತ್ತು. ಸ್ವತಃ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರ ಬಳಿಯೇ ಎಚ್‌ ಐ ವಿ ಸೋಂಕಿತರನ್ನು ಕಳಿಸಿ, ಸೋಂಕು ತಗುಲಿಸಲು ಯತ್ನಿಸಿದ್ದರು ಎಂಬ ಆರೋಪವೂ ಮುನಿರತ್ನ ಅವರ ಮೇಲಿದೆ. ಸದನದಲ್ಲಿ ಅದೇ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರ ನೇತೃತ್ವದಲ್ಲೇ ನಡೆದ ಪ್ರತಿಭಟನೆಯಲ್ಲಿ ಮುನಿರತ್ನ ಅವರೂ ಇದ್ದರು.

1000193215

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ 153 ಎ(1)(ಎ)(ಬಿ) ಮತ್ತು 504 ಹಾಗೂ 506 ಕಲಂಗಳ ಅಡಿಯಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಲು ಸರ್ಕಾರದ ಪೂರ್ವಾನುಮತಿ ಅಗತ್ಯವಿತ್ತು. ಅದನ್ನು ಈಗ ನೀಡಲಾಗಿದ್ದು, ಈ ಕಾರಣದಿಂದ ಮುನಿರತ್ನ ಅವರ ಮೇಲೆ ಹೂಡಲಾಗಿದ್ದ ಕೇಸಿನ ವಿಚಾರಣೆ ನ್ಯಾಯಾಲಯದಲ್ಲಿ ಆರಂಭವಾಗಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X