ಈದಿನ ಯೂಟ್ಯೂಬ್‌ ಚಾನೆಲ್ ನಿರ್ಬಂಧ ಸಂಪೂರ್ಣ ತೆರವು; ಮತ್ತೆ ಸಕ್ರಿಯ

Date:

Advertisements

ಹೈಕೋರ್ಟ್ ಮಧ್ಯಂತರ ಆದೇಶದ ಅನ್ವಯ ಕೆಲದಿನಗಳಿಂದ ನಿರ್ಬಂಧಕ್ಕೆ ಒಳಗಾಗಿದ್ದ ಈದಿನ (eedina) ಯೂಟ್ಯೂಬ್ ಚಾನೆಲ್‌, ಮತ್ತೆ ಸಕ್ರಿಯವಾಗಿದೆ. ಮಧ್ಯಂತರ ಆದೇಶ ತೆರವು ಮಾಡಿದ ಬಳಿಕ ಗೂಗಲ್ ಮತ್ತು ಯೂಟ್ಯೂಬ್ ಸಂಸ್ಥೆಗಳಿಗೆ ಕೋರ್ಟ್ ಸೂಚನೆಯನ್ನು ನೀಡಿತ್ತು. ಅದರಂತೆ ಇಂದಿನಿಂದ ಚಾನೆಲ್ unblock ಆಗಿದೆ.

ಸತ್ಯ, ನ್ಯಾಯ, ಪ್ರೀತಿಯ ಸಂಕೇತವಾಗಿರುವ ನಿಮ್ಮ ಈದಿನ ಯೂಟ್ಯೂಬ್‌, ಜನಪರ ವಿಚಾರಗಳ ದಿಟ್ಟ ದನಿ. ಇನ್ನು ಮುಂದೆ ಎಂದಿನಂತೆ ಈದಿನ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೊಗಳನ್ನು ನೋಡಿ, ಶೇರ್ ಮಾಡಿರಿ. ಜೊತೆಗೆ ಈದಿನ ಟಿವಿ (Eedina TV) ಚಾನೆಲ್ ಕೂಡ ಚಾಲ್ತಿಯಲ್ಲಿರುತ್ತದೆ. ಈದಿನಕ್ಕೆ ನಿಮ್ಮೆಲ್ಲರ ಬೆಂಬಲ ಸದಾ ಹೀಗೇ ಇರಲಿ.

ಈ ದಿನ ಸೇರಿದಂತೆ ಎಲ್ಲ ಜನಪರ ಡಿಜಿಟಲ್ ಮಾಧ್ಯಮಗಳು ನ್ಯಾಯಾಲಯದ ಆದೇಶಕ್ಕೆ ಬದ್ಧವಾಗಿ ಸುದ್ದಿಗಳನ್ನು ಪ್ರಕಟಿಸಲು ನಿರ್ಧರಿಸಿವೆ. “ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಹಾಗೂ ಧರ್ಮಸ್ಥಳದ ಸುತ್ತಮುತ್ತ ನಡೆಯಿತೆನ್ನಲಾದ ಸರಣಿ ಕೊಲೆಗಳನ್ನು ವರದಿ ಮಾಡುವ ವಿಚಾರದಲ್ಲಿ ನ್ಯಾಯಾಲಯಗಳ ಆದೇಶ ಎಂದಿಗೂ ಉಲ್ಲಂಘಿಸುವುದಿಲ್ಲ. ಸದರಿ ಆದೇಶಗಳನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುವ ನಮ್ಮ ಹಕ್ಕನ್ನು ಉಳಿಸಿಕೊಳ್ಳುತ್ತಾ, ಈ ಸದ್ಯ ಕೆಳಹಂತದ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ಆದೇಶಗಳನ್ನು ನಾವು ಪಾಲಿಸಲು ಬದ್ಧರಿದ್ದೇವೆ” ಎಂದು ನಿರ್ಣಯಿಸಿರುವ ಡಿಜಿಟಲ್ ಮಾಧ್ಯಮಗಳ ಪೈಕಿ ಈದಿನವೂ ಒಂದಾಗಿದೆ.

Advertisements

ಇದನ್ನೂ ಓದಿರಿ: ಈದಿನ ಯೂಟ್ಯೂಬ್‌ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ

“ಆದೇಶದಲ್ಲೇ ಸೂಚಿಸಿರುವ ಹಾಗೆ ಮತ್ತು ನಮ್ಮ ಪತ್ರಿಕಾಧರ್ಮಕ್ಕೆ ಬದ್ಧರಾಗಿದ್ದುಕೊಂಡು, ಯಾರದ್ದೇ ಮೇಲೆ ಆಧಾರರಹಿತವಾದ, ಮಾನನಷ್ಟಕ್ಕೆ ಕಾರಣವಾಗುವ ಸುದ್ದಿ ಅಥವಾ ವಿಶ್ಲೇಷಣೆಗಳನ್ನು ನಾವು ಪ್ರಕಟಿಸುವುದಿಲ್ಲ; ಅದೇ ಸಂದರ್ಭದಲ್ಲಿ ನಡೆಯುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಯಥಾವತ್ ಸುದ್ದಿಗಳನ್ನು ಪ್ರಕಟಿಸುವ ನಮ್ಮ ಹಕ್ಕನ್ನು ನ್ಯಾಯಾಲಯವು ನಿರ್ಬಂಧಿಸಿಲ್ಲದಿರುವುದನ್ನೂ ನಾವು ಅರಿತಿದ್ದೇವೆ. ಹೀಗಾಗಿ ಸುದ್ದಿಗಳನ್ನು ಪ್ರಕಟಿಸುವ ಮತ್ತು ಈ ಹೊತ್ತು ಎತ್ತಬೇಕಾದ ಪ್ರಶ್ನೆಗಳನ್ನು ಎತ್ತುವ ನಮ್ಮ ಹಕ್ಕನ್ನು ಚಲಾಯಿಸುತ್ತೇವೆ ಮತ್ತು ಆ ಮೂಲಕ ನಮ್ಮ ಕರ್ತವ್ಯವನ್ನು ಪಾಲಿಸಲು ನಾವು ಬದ್ಧರಾಗಿದ್ದೇವೆ” ಎಂದು ಮಾಧ್ಯಮಗಳು ನಿಲುವು ತಾಳಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X