ಪ್ರತ್ಯೇಕ ಧರ್ಮದ ಪ್ರಯತ್ನ ಮುಂದುವರಿಯಲಿದೆ, ವೀರಶೈವ-ಲಿಂಗಾಯತವೇ ನಮ್ಮ ನಿಲುವು: ಈಶ್ವರ ಖಂಡ್ರೆ

Date:

ವೀರಶೈವ-ಲಿಂಗಾಯತ ಬೇರೆ ಬೇರೆ ಅಲ್ಲ ಒಂದೇ ಎಂಬುದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿಲುವಾಗಿದ್ದು, ಪ್ರತ್ಯೇಕ ಧರ್ಮಕ್ಕಾಗಿ ಪ್ರಯತ್ನ ಮುಂದುವರಿಯಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಪುನರುಚ್ಚರಿಸಿದರು.

- Advertisement -

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದಗಾಂಗಾ ಮಹಾಸಂಸ್ಥಾನದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರೂ ವೀರಶೈವ-ಲಿಂಗಾಯತ ಒಂದೇ ಎಂದು ಪ್ರತಿಪಾದಿಸಿದ್ದರು. ನಿನ್ನೆ ಹುಬ್ಬಳ್ಳಿಯಲ್ಲಿ ಮಠಾಧಿಪತಿಗಳ ಒಕ್ಕೂಟ ಆಯೋಜಿಸಿದ್ದ ಏಕತಾ ಸಮಾವೇಶ ಸಂಪೂರ್ಣ ಯಶಸ್ವಿಯಾಗಿದೆ. ದಿಂಗಾಲೇಶ್ವರ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ಪಂಚಪೀಠದ ಪೀಠಾಧಿಪತಿಗಳು, ಸಾವಿರಾರು ಹರಚರಗುರು ಮೂರ್ತಿಗಳು ಹಾಗೂ ಸಾವಿರಾರು ಸಮಾಜ ಬಾಂಧವರು ಪಾಲ್ಗೊಂಡಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎಲ್ಲರಿಗೂ ತೃಪ್ತಿಯಾಗುವಂತೆ ಸಮೀಕ್ಷೆ

“ಇದೇ 22ರಿಂದ ಆರಂಭವಾಗಲಿರುವ ಸಮೀಕ್ಷೆ ಪೂರ್ಣಗೊಂಡ ಬಳಿಕ, ಹಿಂದುಳಿದಿರುವಿಕೆಯ ಗುರುತಿಸುವಿಕೆ, ಅಂಕ ನೀಡಿಕೆಯಲ್ಲಿ ಯಾರಿಗೂ ಅನ್ಯಾಯ ಆಗದ ರೀತಿಯಲ್ಲಿ, ಎಲ್ಲರ ಅಭಿಪ್ರಾಯ ಪಡೆದೇ ಸರ್ಕಾರ ಮುಂದಡಿ ಇಡಲಿದೆ. ಇದನ್ನು ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಎಲ್ಲ 7 ಕೋಟಿ ಜನರಿಗೂ ತೃಪ್ತಿಯಾಗುವ ರೀತಿಯಲ್ಲಿ ಸಮೀಕ್ಷೆ ನಡೆಯಲಿದೆ” ಎಂದು ಈಶ್ವರ ಖಂಡ್ರೆ ತಿಳಿಸಿದರು.

“ಎಲ್ಲ ಜಾತಿ, ಜನಾಂಗದಲ್ಲೂ ಬಡವರಿದ್ದಾರೆ, ನಿರ್ಗತಿಕರಿದ್ದಾರೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕು. ಸರ್ಕಾರದ ಯೋಜನೆಯ ಲಾಭ ದೊರಕಬೇಕು. ಈ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ. ಹಿಂದುಳಿದಿರುವಿಕೆಯನ್ನು ತಿಳಿಯಲು ಮತ್ತು ಅವರಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ಉದ್ದೇಶದಿಂದಲೇ ಈ ಸಮೀಕ್ಷೆ ನಡೆಯುತ್ತಿದೆ. ಹೀಗಾಗಿ ಸಮಾಜದ ಪ್ರತಿಯೊಬ್ಬರೂ ಇದರಲ್ಲಿ ಭಾಗಿಯಾಗಬೇಕು ಮತ್ತು ವಾಸ್ತವ ಮಾಹಿತಿಯನ್ನು ದಾಖಲೀಕರಿಸಬೇಕು” ಎಂದರು.

“ಲಿಂಗಾಯತ-ವೀರಶೈವ ಧರ್ಮ ಎಂದು ಧರ್ಮದ ಕಾಲಂನಲ್ಲಿ ಬರೆಸಬೇಕು ಎಂಬುದು ಮಹಾಸಭಾ ನಿಲುವಾಗಿದೆ. ಆದರೆ ಪ್ರತ್ಯೇಕ ಧರ್ಮ ಎಂದು ಇನ್ನೂ ಗುರುತಿಸಿಲ್ಲ. ಹೀಗಾಗಿ ಆತ್ಮಸಾಕ್ಷಿಯಂತೆ ಮತ್ತು ವಿವೇಚನೆಗೆ ತಕ್ಕಂತೆ ಬರೆಸುವಂತೆ ಮನವಿ ಮಾಡಲಾಗಿದೆ” ಎಂದು ಸ್ಪಷ್ಟಪಡಿಸಿದರು.

“ವೀರಶೈವ ಲಿಂಗಾಯತ ಮಹಾಸಭಾ ವಿಸರ್ಜನೆ ಮಾಡಬೇಕು ಎಂದು ಅಸಂಬದ್ಧ ಹೇಳಿಕೆ ನೀಡಿರುವವರಿಗೆ ತಾವು ಉತ್ತರ ನೀಡುವುದಿಲ್ಲ. ಅವರಿಗೆ ಯಾವುದೇ ಅಸ್ತಿತ್ವ ಇಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...