ಇರಾನ್‌ನಲ್ಲಿ ಸಿಲುಕಿರುವ ರಾಜ್ಯದ 125 ಮಂದಿಯನ್ನು ಸುರಕ್ಷಿತವಾಗಿ ಕರೆತರಲು ಪ್ರಯತ್ನ: ಆರತಿ ಕೃಷ್ಣ

Date:

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‍ನಲ್ಲಿ ಸುಮಾರು 10 ಸಾವಿರ ಮಂದಿ ಭಾರತೀಯರು ಸಿಲುಕಿದ್ದು, ಆ ಪೈಕಿ ವಿದ್ಯಾರ್ಥಿಗಳು ಸೇರಿದಂತೆ 125ಕ್ಕೂ ಅಧಿಕ ಮಂದಿ ಕನ್ನಡಿಗರಿದ್ದಾರೆ. ಅವರೆಲ್ಲರನ್ನು ಸುರಕ್ಷಿತವಾಗಿ ಕರ್ನಾಟಕಕ್ಕೆ ಕರೆತರಲು ಎಲ್ಲ ರೀತಿಯ ಪ್ರಯತ್ನ ನಡೆಸಿದ್ದೇವೆ’ ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದ್ದಾರೆ.

- Advertisement -

ಬುಧವಾರ ವಿಕಾಸಸೌಧದಲ್ಲಿನ ತಮ್ಮ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಇಸ್ರೇಲ್ ಮತ್ತು ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಅಲ್ಲಿರುವ ಅನಿವಾಸಿ ಭಾರತೀಯರು ಆತಂಕಗೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಭಾರತೀಯ ರಾಯಭಾರಿ ಕಚೇರಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ರಾಜ್ಯದಿಂದ ಅಧ್ಯಯನಕ್ಕಾಗಿ ತೆರಳಿದ್ದ ನದೀಮ್ ಹುಸೈನ್ ಸೇರಿದಂತೆ 9 ಮಂದಿ ವಿದ್ಯಾರ್ಥಿಗಳಿದ್ದು, ಅವರ ಪೋಷಕರು ತಮ್ಮನ್ನು ಸಂಪರ್ಕಿಸಿದ್ದಾರೆ. ಅವರೊಂದಿಗೆ ಇರಾನ್‍ನ ವಿವಿಧ ವಿವಿಗಳಲ್ಲಿ ಅಧ್ಯಯನಕ್ಕೆ ತೆರಳಿರುವ ರಾಜ್ಯದ 50ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಅಲ್ಲಿ ಇದ್ದಾರೆ ಎಂಬ ಮಾಹಿತಿ ಇದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ಆಲಿಪುರದ ವಿದ್ಯಾರ್ಥಿಗಳು ಸೇರಿ ಇನ್ನಿತರರು ಇರಾನ್ ರಾಜಧಾನಿ ಟೆಹರಾನ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ, ಧಾರ್ಮಿಕ ಅಧ್ಯಯನ, ಉದ್ಯೋಗ ಹಾಗೂ ಪ್ರವಾಸಕ್ಕಾಗಿ ತೆರಳಿದ್ದು, ಅಲ್ಲಿ ಸಿಲುಕಿದ್ದಾರೆ ಎಂದು ಗೊತ್ತಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಾದಚಾರಿಗಳನ್ನು ‘ಬೇವರ್ಸಿ’ಗಳಂತೆ ನಡೆಸಿಕೊಳ್ತಿದೆ ಬೆಂಗಳೂರು ನಗರ!

ಹೀಗಾಗಿ, ಅವರೆಲ್ಲರನ್ನು ಭಾರತೀಯ ರಾಯಭಾರಿ ಕಚೇರಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಸಂಪರ್ಕ ಮಾಡುತ್ತಿದ್ದೇವೆ. ಅವರ ಮಾಹಿತಿಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಯಭಾರಿ ಕಚೇರಿಗೆ ನೀಡಲಾಗಿದೆ. ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರಕಾರವು ಪ್ರಯತ್ನ ನಡೆಸಿದೆ ಎಂದು ಆರತಿ ಕೃಷ್ಣ ಹೇಳಿದರು.

‘ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಭಾರತೀಯರ ಪೈಕಿ 5 ಸಾವಿರ ಮಂದಿಯನ್ನು ಹಂತ-ಹಂತವಾಗಿ ಇರಾನ್‍ನ ಟೆಹರಾನ್ ಸಮೀಪದಲ್ಲಿನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಅಲ್ಲಿಂದ ಅವರೆಲ್ಲನ್ನು ಭಾರತ ದೇಶಕ್ಕೆ ಕರೆತರಲು ಅಗತ್ಯ ಕ್ರಮ ವಹಿಸಲಾಗುತ್ತಿದೆ. ಹೀಗಾಗಿ ಯಾರೂ ಆತಂಕಗೊಳ್ಳುವ ಅಗತ್ಯವಿಲ್ಲ’ ಎಂದು ಆರತಿ ಕೃಷ್ಣ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಫಾರ್ಮ್‌-7 ವಿವಾದ | ಆರೋಪಿಗಳ ರಕ್ಷಣೆಗೆ ನಿಂತರೇ ಎಚ್‌ಡಿಕೆ?

ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ...

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...

SIR | ‘ಫಾರ್ಮ್-7’ ಅಕ್ರಮ: ಕರ್ನಾಟಕದಲ್ಲಿ ಬಿಜೆಪಿ ಎಲ್ಲೆಲ್ಲಿ ಏನೇನು ಮಾಡಿತು? ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...