ಕರ್ನಾಟಕದ 4 ಎಂಎಲ್‌ಸಿ ಸ್ಥಾನಗಳಿಗೆ ಚುನಾವಣೆ ಘೋಷಣೆ; ಅಕ್ಟೋಬರ್ 23ಕ್ಕೆ ಮತದಾನ

Date:

ಕರ್ನಾಟಕದಲ್ಲಿ ಖಾಲಿಯಾಗಲಿರುವ ನಾಲ್ಕು ವಿಧಾನ ಪರಿಷತ್ (ಎಂಎಲ್‌ಸಿ) ಸ್ಥಾನಗಳು ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳ 28 ಪರಿಷತ್ ಕ್ಷೇತ್ರಗಳಿಗೆ ಚುನಾವಣಾ ಆಯೋಗವು (ECI) ಚುನಾವಣೆ ಘೋಷಿಸಿದೆ. ಈ ಸ್ಥಾನಗಳಿಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಅದೇ ತಿಂಗಳ 27ರಂದು ಫಲಿತಾಂಶ ಘೋಷಣೆಯಾಗಲಿದೆ.

- Advertisement -

ರಾಜ್ಯದ ಹಾಲಿ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ. ಗೌಡ (ಆಗ್ನೇಯ ಪದವೀಧರರ ಕ್ಷೇತ್ರ), ಎಸ್.ವಿ. ಸಂಕನೂರ್ (ಪಶ್ಚಿಮ ಪದವೀಧರರ ಕ್ಷೇತ್ರ), ಶಶೀಲ್ ಜಿ. ನಮೋಶಿ (ಈಶಾನ್ಯ ಶಿಕ್ಷಕರ ಕ್ಷೇತ್ರ) ಹಾಗೂ ಪುಟ್ಟಣ್ಣ (ಬೆಂಗಳೂರು ಶಿಕ್ಷಕರ ಕ್ಷೇತ್ರ) ಅವರ ಅಧಿಕಾರಾವಧಿಯು ಸೆಪ್ಟಂಬರ್‌ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಈ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 2020ರಲ್ಲಿ ಈ ನಾಲ್ವರೂ ಬಿಜೆಪಿಯಿಂದ ಆಯ್ಕೆಯಾಗಿದ್ದರಾದರೂ, 2023ರ ವಿಧಾನಸಭಾ ಚುನಾವಣೆಗೂ ಮುನ್ನ ಪುಟ್ಟಣ್ಣ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಚುನಾವಣಾ ಆಯೋಗ ಪ್ರಕಟಿಸಿರುವ ವೇಳಾಪಟ್ಟಿಯಂತೆ, ಕರ್ನಾಟಕ ಜೊತೆಗೆ ಉತ್ತರ ಪ್ರದೇಶದ 11, ಬಿಹಾರದ 8 ಹಾಗೂ ಮಹಾರಾಷ್ಟ್ರದ 5 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಎಲ್ಲೆಡೆ ಸೆಪ್ಟೆಂಬರ್ 29 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಅಕ್ಟೋಬರ್ 6 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್ 23 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 27 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿವೆ. ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಶಶಿ ಹುಲಿಕುಂಟೆಮಠ್, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶರಣಪ್ಪ ಮಟ್ಟೂರ್ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ.

ಮತ್ತೊಂದೆಡೆ, ಬಿಜೆಪಿ ತನ್ನ ಪಟ್ಟಿಯಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಎಸ್.ವಿ. ಸಂಕನೂರ್, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್ ಜಿ. ನಮೋಶಿ ಹಾಗೂ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಕೆ.ಎಂ. ಸುರೇಶ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ. ಮೈತ್ರಿ ಒಪ್ಪಂದದ ಭಾಗವಾಗಿ ಈ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಸಾಧ್ಯತೆಯಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ಇರಲಿ, ಯಾವುದೇ ಕೇಸಿರಲಿ ಲಿಖಿತ ಕಾರಣವಿಲ್ಲದ ಬಂಧನ ಅಕ್ರಮ: ಸುಪ್ರೀಂ ಕೋರ್ಟ್

ಭಯೋತ್ಪಾದನೆ ತಡೆ ಕಾಯ್ದೆ (UAPA) ಸೇರಿದಂತೆ ಯಾವುದೇ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದರೂ,...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ 105 ಕೃತ್ಯ ಸೆರೆ

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ದುರ್ಬಳಕೆ ಹಾಗೂ ಕಳ್ಳತನ ನಡೆದಿದೆ ಎನ್ನಲಾದ...

ಹಾಸನ | ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯಲ್ಲಿ ಕರ್ನಾಟಕ ವಿನಾಯಿತಿ ಪಡೆಯಲು ಕೆ.ಪಿ.ಆರ್.ಎಸ್ ಆಗ್ರಹ

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳು ಹಾಗೂ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ...

ಪ್ರೀಮಿಯಂ ಲೇಖನ | ಉರ್ದುವಿಗೆ ಅಧಿಕೃತ ಸ್ಥಾನಮಾನ ಯಾವಾಗ? ತುಳುವಿನ ಬಳಿಕ ಮತ್ತೊಂದು ಭಾಷಾ ಪ್ರಶ್ನೆ

2011ರ ಜನಗಣತಿಯ ಮಾತೃಭಾಷಾ ಮಾಹಿತಿಯ ಪ್ರಕಾರ, ಕರ್ನಾಟಕದಲ್ಲಿ ಉರ್ದುವನ್ನು ಮಾತೃಭಾಷೆ ಎಂದು...