44 ಲಕ್ಷ ಮತದಾರರಿಗೆ ನೋಟಿಸ್: ವಿಚಾರಣಾ ಗಡುವು 6 ತಿಂಗಳು ವಿಸ್ತರಿಸಲು ‘ಜಾಗೃತ ಕರ್ನಾಟಕ’ ಆಗ್ರಹ

Date:

ಎಸ್‌ಐಆರ್ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ ಕರ್ನಾಟಕ’ ಸಂಘಟನೆಯು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಮನವಿ ಸಲ್ಲಿಸಿದೆ.

- Advertisement -

​ರಾಜ್ಯದಲ್ಲಿ ಒಟ್ಟು ಮತದಾರರ ಪೈಕಿ ಶೇ. 9.2ರಷ್ಟು (43,81,335) ಜನರಿಗೆ ಆಯೋಗದಿಂದ ನೋಟಿಸ್ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ. ಆದರೆ, ನಿರ್ದಿಷ್ಟವಾಗಿ ಯಾವ ಮತದಾರರಿಗೆ ನೋಟಿಸ್ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ಬಿಎಲ್‌ಎಗಳಿಗೆ (ಬೂತ್ ಮಟ್ಟದ ಏಜೆಂಟ್) ಒದಗಿಸಬೇಕು. ಈ ಪಟ್ಟಿಯನ್ನು ಎಲ್ಲರಿಗೂ ಲಭ್ಯವಾಗುವಂತೆ ಆಯೋಗದ ವೆಬ್‌ಸೈಟ್, ಪಂಚಾಯಿತಿ ಮತ್ತು ವಾರ್ಡ್ ಕಚೇರಿಗಳಲ್ಲಿ ಬಹಿರಂಗವಾಗಿ ಪ್ರಕಟಿಸಬೇಕು. ಹೀಗೆ ಮಾಡಿದಲ್ಲಿ ಮಾತ್ರ ಮತದಾರರಿಗೆ ನಿಗದಿತ ಸಮಯದೊಳಗೆ ದಾಖಲೆಗಳನ್ನು ಒದಗಿಸಿಕೊಳ್ಳಲು ನೆರವು ನೀಡಲು ಸಾಧ್ಯವಾಗುತ್ತದೆ ಎಂದು ಸಂಘಟನೆ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

​ಸುಮಾರು 44 ಲಕ್ಷ ನೋಟಿಸ್‌ಗಳ ವಿಚಾರಣೆಯನ್ನು (ಹಿಯರಿಂಗ್) ತ್ವರಿತವಾಗಿ ಮುಗಿಸುವುದು ಅಸಾಧ್ಯದ ಮಾತಾಗಿದೆ. ಇಆರ್‌ಒಗಳು ನಿಮಿಷಕ್ಕೊಂದು ವಿಚಾರಣೆ ನಡೆಸಿದರೂ ಇದು ಕಾರ್ಯಸಾಧುವಲ್ಲ. ಆದ್ದರಿಂದ ಈ ಪ್ರಕ್ರಿಯೆಯ ಕಾಲಾವಕಾಶವನ್ನು ಆರು ತಿಂಗಳ ಕಾಲ ವಿಸ್ತರಿಸಬೇಕು. ಅಲ್ಲದೆ, ಜನರಿಗೆ ಕೇವಲ ಒಂದು ವಾರದೊಳಗೆ ದಾಖಲೆಗಳನ್ನು ಒದಗಿಸುವುದು ಕಷ್ಟಕರವಾಗಿರುವುದರಿಂದ, ನೋಟಿಸ್ ತಲುಪಿದ ಬಳಿಕ ಕನಿಷ್ಠ ಆರು ವಾರಗಳ ಸಮಯಾವಕಾಶ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

​ಹೆಚ್ಚುವರಿಯಾಗಿ, ನಿರ್ದಿಷ್ಟವಾಗಿ ಯಾವ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಟಿಸ್ ನೀಡಲಾಗುತ್ತಿದೆಯೋ, ಅಲ್ಲಿ ಅಗತ್ಯವಿರುವ ಹೆಚ್ಚುವರಿ ಇಆರ್‌ಒ (ERO) ಹಾಗೂ ಎಇಆರ್‌ಒ (AERO) ಸಿಬ್ಬಂದಿಯನ್ನು ನೇಮಿಸಿ ಸೂಕ್ತ ವಿಚಾರಣಾ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.

​ಅಂಚಿನಲ್ಲಿರುವ ಸಮುದಾಯಗಳಿಗೆ ವಿಶೇಷ ಆದ್ಯತೆ ನೀಡಿ:

ಮತದಾರರು ತಾವು ಈಗ ವಾಸವಿರುವ ಸ್ಥಳದಲ್ಲೇ ಮತದಾನದ ಹಕ್ಕು ಪಡೆಯಲು ಅನುಕೂಲವಾಗುವಂತೆ ನಮೂನೆ 6 ಮತ್ತು 8ರ ಬಗ್ಗೆ ಮನೆ-ಮನೆಗೆ ತೆರಳಿ ಅರಿವು ಮೂಡಿಸುವ ಅಭಿಯಾನ ಕೈಗೊಳ್ಳಬೇಕು. ವಿಶೇಷವಾಗಿ ದಾಖಲಾತಿಗಳನ್ನು ಹೊಂದಿಸಲು ಕಷ್ಟಪಡುವ ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಬಗ್ಗೆ ಹೆಚ್ಚಿನ ಗಮನಹರಿಸಿ, ಅವರ ಮತದಾನದ ಹಕ್ಕನ್ನು ಖಾತರಿಪಡಿಸಬೇಕು ಎಂದು ಒತ್ತಾಯಿಸಲಾಗಿದೆ.

​ಮತದಾರರು ತಮ್ಮ ಸಮಸ್ಯೆಗಳನ್ನು ಒಂದೇ ಕಡೆ ಬಂದು ಬಗೆಹರಿಸಿಕೊಳ್ಳಲು ಅನುಕೂಲವಾಗುವಂತೆ ಮುಂದಿನ ಆರು ತಿಂಗಳ ಕಾಲ ವಿಶೇಷ ಕ್ಯಾಂಪ್‌ಗಳನ್ನು ಆಯೋಜಿಸಬೇಕು ಎಂದು ಜಾಗೃತ ಕರ್ನಾಟಕದ ಪರವಾಗಿ ಅದಂ ಖಾನ್ ಅವರು ಚುನಾವಣಾ ಆಯೋಗವನ್ನು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...