ಬಸವಶ್ರೀ ಪ್ರಶಸ್ತಿ ಸ್ವೀಕರಿಸಲು ಸಾಮಾಜಿಕ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆಗೆ ಎನ್ಐಎ ಅನುಮತಿ

Date:

ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ನ್ಯಾಯಾಲಯ ಮಾನವ ಹಕ್ಕುಗಳ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ ಅವರಿಗೆ ಬಸವಶ್ರೀ ಪ್ರಶಸ್ತಿ ಸ್ವೀಕರಿಸುವ ಸಲುವಾಗಿ ಬೆಂಗಳೂರಿಗೆ ಆಗಮಿಸಲು ಎರಡು ದಿನಗಳ ಕಾಲ ಅನುಮತಿ ನೀಡಿದೆ.

- Advertisement -

ಎಲ್ಗರ್ ಪರಿಷತ್ ಪ್ರಕರಣದಲ್ಲಿ ಆರೋಪಿಯಾಗಿರುವ ಆನಂದ್ ತೇಲ್ತುಂಬ್ಡೆ ಅವರು ಬೆಂಗಳೂರಿನ ತಮ್ಮ ನಿವಾಸದ ಸ್ಥಳ ಹಾಗೂ ದೂರವಾಣಿಯೊಂದಿಗೆ ಪ್ರಯಾಣದ ವಿವರವನ್ನು ನೀಡಬೇಕು ಎಂದು ವಿಶೇಷ ನ್ಯಾಯಾಧೀಶರಾದ ಆರ್‌ಜೆ ಕಾಟೇರಿಯಾ ನಿರ್ದೇಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಅರ್ಜಿದಾರರು ನೀಡಿರುವ ಸ್ವತಂತ್ರವನ್ನು ದುರುಪಯೋಗಪಡಿಸಿಕೊಳ್ಳಬಾರದು.ನಿಗದಿಪಡಿಸಿರುವ ದಿನದಂದು ಫೆ.02ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು” ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಆನಂದ್ ತೇಲ್ತುಂಬ್ಡೆ ಹಾಗೂ ಧಾರಾವಾಡದ ಡಾ.ಎನ್‌ ಜಿ ಮಹದೇವಪ್ಪ ಅವರಿಗೆ 2023 ಹಾಗೂ 2024ನೇ ಸಾಲಿನ ರಾಷ್ಟ್ರಮಟ್ಟದ ಬಸವಶ್ರೀ ಪ್ರಶಸ್ತಿಗೆ ಜನವರಿ 25 ರಂದು ಆಯ್ಕೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಯಾ ಕುಮಾರ್, ಗಯಾ ಕುಮಾರ್’- ಅವರೇ ನಿತೀಶ್ ಕುಮಾರ್

ಬಸವಶ್ರೀ ಪ್ರಶಸ್ತಿಯು ಸಾಹಿತ್ಯ, ಸಾಮಾಜಿಕ ನ್ಯಾಯ ಹಾಗೂ ಸಾಮರಸ್ಯ ಕ್ಷೇತ್ರಗಳಲ್ಲಿ ಮಾಡಿರುವಂತ ಸಾಧನೆಗೆ ವ್ಯಕ್ತಿಗತವಾಗಿ ಹಾಗೂ ಸಂಘಸಂಸ್ಥೆಗಳಿಗೆ ನೀಡಲಾಗುತ್ತದೆ. ಕರ್ನಾಟಕ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಿಧ ಹಲವು ಪ್ರಶಸ್ತಿಗಳೊಂದಿಗೆ ಈ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಜನವರಿ 31ರಂದು ಪ್ರದಾನ ಮಾಡಲಾಗುತ್ತದೆ.

ಆನಂದ್ ತೇಲ್ತುಂಬ್ಡೆ ಅವರು ಐಐಎಂ ಅಹಮದಾಬಾದ್‌ನ ಪದವೀದರರಾಗಿದ್ದು,ದಲಿತ ಸಮುದಾಯ ಎದುರಿಸುತ್ತಿರುವ ಹಲವು ಸಮಸ್ಯೆಗಳ ಮುಂಚೂಣಿ ಬರಹಗಾರರಲ್ಲಿ ಒಬ್ಬರಾಗಿದ್ದಾರೆ. ಐಐಟಿ ಖಾರಗ್‌ಪುರ್‌ ಪ್ರಾಧ್ಯಾಪಕರು ಕೂಡ ಆಗಿದ್ದು,ವಿಶ್ವದ ಹಲವು ದೇಶಗಳ ವಿವಿಗಳ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಲು ಇವರನ್ನು ಆಹ್ವಾನಿಸಲಾಗುತ್ತದೆ.

ಭೀಮಾ ಕೋರೆಗಾಂವ್‌ ಪ್ರಕರಣವು 2017ರ ಡಿಸೆಂಬರ್ 31ರಂದು ಪುಣೆಯ ಶನಿವಾರವಾಡದಲ್ಲಿ ನಡೆದ ಎಲ್ಗಾರ್ ಪರಿಷದ್ ಸಮಾವೇಶದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದೆ. ಭಾಷಣದ ಮರುದಿನ ನಗರದ ಹೊರವಲಯದಲ್ಲಿರುವ ಭೀಮಾ ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿತು ಎಂಬುದು ಆನಂದ್ ತೇಲ್ತುಂಬ್ಡೆ ಮೇಲಿನ ಆರೋಪವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...