ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ

Date:

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದೇವರಾಜ ಅರಸು ಅವರು ತಳ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸಿದರು. ಆ ಅವಕಾಶಗಳಿಂದ ಬಹಳ ಮಂದಿ ಸಮಾಜದ ಮುಖ್ಯವಾಹಿನಿಗೆ ಬಂದರು. ಸುದೀರ್ಘ ಅವಧಿಯ ಕಾಲ ಮುಖ್ಯಮಂತ್ರಿಗಳಾಗಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸಿದ್ದರು ಎಂದು ವಿವರಿಸಿದರು.

Advertisements

ಬಹುಸಂಖ್ಯಾತ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದ್ದರಿಂದ ಅಸಮಾನತೆ ಸೃಷ್ಟಿಯಾಗಿದೆ. ನಮ್ಮ ಸರ್ಕಾರ ಅಸಮಾನತೆ ನಿವಾರಿಸಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸುತ್ತಿದೆ, ಜನಪರ, ಸಾಮಾಜಿಕ ನ್ಯಾಯದ ಪರ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.

ಶಿಕ್ಷಣ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಎಲ್ಲರಲ್ಲೂ ಪ್ರತಿಭೆ ಇದೆ. ಅಂಬೇಡ್ಕರ್ ಮತ್ತು ವಾಲ್ಮೀಕಿ, ವ್ಯಾಸರು ಇದಕ್ಕೆ ಉದಾಹರಣೆ ಎಂದರು.

ನಮ್ಮ ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣ ಆಗಿದ್ದು ಅರಸು ಅವರ ಕಾಲದಲ್ಲಿ. ಇದರ ಸುವರ್ಣ ಸಂಭ್ರಮ ಮಾಡಿದ್ದು ನಮ್ಮ ಸರ್ಕಾರ ಎಂದು ಸ್ಮರಿಸಿದರು. ಸಚಿವ ಹೆಚ್‌ ಸಿ ಮಹದೇವಪ್ಪ, ಎಂಎಲ್ಸಿ ಹೆಚ್‌ ವಿಶ್ವನಾಥ್‌, ಶಾಸಕ ತನ್ವೀರ್‌ ಸೇಠ್‌, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಪುಷ್ಪಾ ಅಮರನಾಥ್‌, ಅರಸು ಪುತ್ರಿ ಭಾರತಿ ಅರಸ್‌ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...