ಬಡವರಿಗೆ ಶಕ್ತಿ ತುಂಬುವ ಉಮೇಶ್ ಮೇಟಿಯನ್ನು ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ

Date:

ಬಡವರಿಗೆ ಶಕ್ತಿ ತುಂಬವ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.

- Advertisement -

ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾನಾ ಸಂಘ ಸಂಸ್ಥೆಗಳ ಮುಖಂಡರುಗಳ ಜೊತೆಗೆ ಸಭೆ ನಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಹೆಚ್.ವೈ. ಮೇಟಿಯವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿ ಯವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಗೆಲ್ಲಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದರು.

ತಳಸಮುದಾಯವದರಿಗೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ

ನಮ್ಮ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬಲು ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಿಂದ ಎಲ್ಲಾ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡಿದೆ. ಇದುವರೆಗೆ 1.31 ಲಕ್ಷ ಕೋಟಿಯನ್ನು ಗ್ಯಾರಂಟಿಗಳಿಗೆ ವ್ಯಯಿಸಲಾಗಿದೆ ಎಂದರು.

ವಿಬಿಜಿರಾಮ್ ಜಿ ಕಾಯ್ದೆ ಉದ್ಯೋಗದ ಭರವಸೆ ನುಂಗಿದೆ

ಸಮಪಾಲು, ಸಮಬಾಳು ಎನ್ನುವ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಮ್ಮ ಸರ್ಕಾರ. ಕೇಂದ್ರ ಸರ್ಕಾರ ಉದ್ಯೋಗದ ಭರವಸೆಯನ್ನು ನುಂಗುವ ವಿಬಿಜಿರಾಮ್ ಜಿ ಯೋಜನೆಯನ್ನು ತರಲಾಗಿದೆ. ಕೇಂದ್ರ ಬಿಜೆಪಿಯವರಿಂದ ಕೇವಲ ಕಾರ್ಪೊರೇಟ್ ಶಕ್ತಿಗಳು ಬಲಗೊಳ್ಳುತ್ತಿದ್ದು, ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚುತ್ತಿದೆ ಎಂದರು.

ಬಾಗಲಕೋಟೆ ವೈದ್ಯಕೀಯ ಕಾಲೇಜು ಹೆಚ್.ವೈ.ಮೇಟಿ ಕನಸು

ಹೆಚ್.ವೈ.ಮೇಟಿಯವರು 5 ಬಾರಿ ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಸೇವೆ ಸಲ್ಲಿಸಿದ ಜನಾನುರಾಗಿ ನಾಯಕರಾಗಿದ್ದರು, ಜಾತಿಬೇಧವಿಲ್ಲದೇ ಜನರ ಸೇವೆ ಸಲ್ಲಿಸಿದವರು. ಬಾಗಲಕೋಟೆಗೆ ವೈದ್ಯಕೀಯ ಕಾಲೇಜು ಸ್ಥಾಪನೆಯ ಕನಸು ಕಂಡಿದ್ದರು. ಅದರಂತೆ ಇಲ್ಲಿ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆಯನ್ನು ಮಾಡಲಾಗಿದೆ. ಆದ್ದರಿಂದ ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮಿಸಿದ ಹೆಚ್.ವೈ.ಮೇಟಿಯವರ ಪುತ್ರ ಉಮೇಶ್ ಮೇಟಿಯವರನ್ನು ಬಹುಮತದಿಂದ ಆಯ್ಕೆ ಮಾಡಬೇಕೆಂದು ಕೋರಿದರು.

ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇರುವ ಪಕ್ಷ ನಮ್ಮದು

ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಟ್ಟುಕೊಂಡಿರುವ ಪಕ್ಷ ನಮ್ಮದು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಹಾಗೂ ಎಲ್ಲರಿಗೂ ಸಮಾನ ರಕ್ಷಣೆ ದೊರೆಯಬೇಕು. ದುರ್ಬಲ ವರ್ಗದವರಿಗೆ, ಮಹಿಳೆಯರಿಗೆ, ಮಕ್ಕಳಿಗೆ, ಶಕ್ತಿಯಿಲ್ಲದವರಿಗೆ ಆದ್ಯತೆ ಮೇರೆಗೆ ರಕ್ಷಣೆ ನೀಡಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಇದು ನಮ್ಮ ಸರ್ಕಾರದ ಧ್ಯೇಯ ಎಂದರು.

ಇದನ್ನು ಓದಿದ್ದೀರಾ? IPL | ಒಂದೆಡೆ ಮನರಂಜನೆಯ ಮಹಾಪೂರ, ಮತ್ತೊಂದೆಡೆ ಜೂಜಾಟದ ಕರಾಳ ಘೋರ

ಕಾಂಗ್ರೆಸ್ ಎಲ್ಲಾ ಕಾಲದಲ್ಲಿಯೂ ಬಡವರ ಪರವಾಗಿ ಕೆಲಸ ಮಾಡಿದೆ

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್. ಹಾಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷ ವನ್ನು ಬೆಂಬಲಿಸಬೇಕು. ಬಿಜೆಪಿ ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದರು. ಸ್ವಾತಂತ್ರ್ಯ ಲಭಿಸದೆ ಹೋಗಿದ್ದರೆ ನಾವು ಗುಲಾಮರಾಗಿಯೇ ಇರುತ್ತಿದ್ದೆವು. ಕಾಂಗ್ರೆಸ್ ಎಲ್ಲಾ ಕಾಲದಲ್ಲಿಯೂ ಬಡವರ ಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಬಿಜೆಪಿಯವರು ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರ ಮಾಡಿದ್ದಾರೆ. ಏನು ಮಾಡಿದ್ದಾರೆ ಎಂದು ಅವರು ಜನರ ಮುಂದೆ ಹೇಳುವುದೇ ಇಲ್ಲ. ಅದರ ಬದಲಿಗೆ ನಮ್ಮ ಸರ್ಕಾರವನ್ನು ಟೀಕೆ, ಅಪಪ್ರಚಾರ ಮಾಡಿಕೊಂಡು ಓಡಾಡಿದ್ದಾರೆ. ಬಿಜೆಪಿ ನುಡಿದಂತೆ ನಡೆದ ಪಕ್ಷವಲ್ಲ ಎಂದರು.

ಬಿಜೆಪಿ ನುಡಿದಂತೆ ನಡೆದಿಲ್ಲ

ನರೇಂದ್ರ ಮೋದಿಯವರು 2014 ರಲ್ಲಿ ಹೇಳಿದ್ದನ್ನು ಇಲ್ಲಿಯವರೆಗೂ ಜಾರಿ ಮಾಡಿಲ್ಲ. ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಬಡತನ ಹೋಗುತ್ತದೆ, ನಿರುದ್ಯೋಗ ಹೋಗಲಾಡಿಸಲಾಗುತ್ತದೆ, ರೈತರ ಆದಾಯ ದುಪ್ಪಟಾಗುತ್ತದೆ ಎಂದೆಲ್ಲಾ ಹೇಳಿದ್ದರು. ಒಳ್ಳೆ ದಿನಗಳು ಬರಲಿಲ್ಲ, ರೈತರ ಆದಾಯವೂ ಎರಡು ಪಟ್ಟು ಆಗಲಿಲ್ಲ. ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ಪ್ರತಿ ಮನೆಗೆ 15 ಲಕ್ಷ ರೂಪಾಯಿ ಕೊಡುತ್ತೇನೆ ಎಂದಿದ್ದರು, ಕೊಟ್ಟರೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಬಿಜೆಪಿ 28 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದರೆ ನಿರುದ್ಯೋಗ ಸಮಸ್ಯೆಯೇ ಇರುತ್ತಿರಲಿಲ್ಲ. ದೇಶದಲ್ಲಿ ರೈತರಿಗೆ ಉಳುವವನೇ ಭೂಮಿಯ ಒಡೆಯ ಎಂದು ಮಾಡಿದ್ದು, ಮಲ ಹೊರುವ ಪದ್ದತಿ ನಿಷೇಧ, ಸಾಲ ಮನ್ನಾ ಮಾಡಿದ್ದು, ಕಾಂಗ್ರೆಸ್ ಸರ್ಕಾರ. ಬಿಜೆಪಿ 28 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದರೆ ನಿರುದ್ಯೋಗ ಸಮಸ್ಯೆಯೇ ಇರುತ್ತಿರಲಿಲ್ಲ. ನಮ್ಮ ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿ ಮಾಡಿದೆ. ಇದನ್ನು ಬಿಜೆಪಿ ಏಕೆ ಮಾಡಲಿಲ್ಲ ಎಂದರು.

ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಲು ಪ್ರತಿಯೊಬ್ಬರೂ , ಸಾಮಾಜಿಕ, ಶೈಕ್ಷಣಿಕವಾಗಿ ಪ್ರಬಲರಾಗಬೇಕು
ಅಂತ್ಯೋದಯ, ಸರ್ವೋದಯ ಮಂತ್ರವನ್ನು ಮಹಾತ್ಮಾ ಗಾಂಧಿ ನೀಡಿದ್ದರು. ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಲು ಪ್ರತಿಯೊಬ್ಬರೂ, ಸಾಮಾಜಿಕ, ಶೈಕ್ಷಣಿಕವಾಗಿ ಪ್ರಬಲರಾಗಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...