ಮುಂಗಾರು ಅಂತ್ಯ; 236 ತಾಲೂಕುಗಳ ಪೈಕಿ 4 ತಾಲೂಕುಗಳಲ್ಲಷ್ಟೇ ಅತ್ಯಧಿಕ ಮಳೆ

Date:

ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್ 1 ರಿಂದ ಸೆಪ್ಟೆಂಬರ್ 30ರ ಅವಧಿಯನ್ನು ಮುಂಗಾರು ಎನ್ನಲಾಗುತ್ತದೆ. ಈ ನಾಲ್ಕು ತಿಂಗಳ ಅವಧಿಯಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ ಕೇವಲ 4 ತಾಲೂಕುಗಳಲ್ಲಿ ಮಾತ್ರವೇ ಅತ್ಯಧಿಕ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

- Advertisement -

ಮಳೆಯ ಪಟ್ಟಿ ಬಿಡುಗಡೆ ಮಾಡಿರುವ ಇಲಾಖೆ, “ಜೂನ್ 1 ರಿಂದ ಸೆಪ್ಟೆಂಬರ್ 30ರ ಅವಧಿಯಲ್ಲಿ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ತುಮಕೂರು, ರಾಮನಗರ, ಕೋಲಾರ, ಬಳ್ಳಾರಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳು ಮಳೆ ಕೊರತೆ ಪಟ್ಟಿಯಲ್ಲಿವೆ. 23 ಜಿಲ್ಲೆಗಳ 146 ತಾಲೂಕುಗಳಲ್ಲಿ ಮಳೆ ಕೊರತೆಯಾಗಿದೆ. 8 ಜಿಲ್ಲೆಗಳ 86 ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಿದೆ. ನಿನ್ನೆಯ ಮಳೆಯ ನಂತರ ದಕ್ಷಿಣ ಕನ್ನಡ ಜಿಲ್ಲೆ ಸಾಧಾರಣ ಮಳೆಯ ಪಟ್ಟಿಗೆ ಸೇರಿದೆ. ಈ ಬಾರಿಯ ಮುಂಗಾರು ಮಳೆಯು ವಿಶೇಷವಾಗಿ ಆಗಸ್ಟ್‌ನಲ್ಲಿ ರೈತರಿಗೆ ಭಾರೀ ನಷ್ಟ ಮತ್ತು ಸಂಕಟವನ್ನುಂಟು ಮಾಡಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

“ಬೆಂಗಳೂರಿನಲ್ಲಿ ಸೆಪ್ಟೆಂಬರ್‌ನಲ್ಲಿ ಸರಾಸರಿ 208.3 ಮಿ.ಮೀಗೆ ಬದಲಾಗಿ 248.4 ಮಿಲಿ ಮೀಟರ್ ಮಳೆಯಾಗಿದೆ. ಮುಂಗಾರು ಆರಂಭವಾದಗಿನಿಂದ ಅಂತ್ಯದವರೆಗೆ ಬೆಂಗಳೂರಿನಲ್ಲಿ ಸರಾಸರಿ ಒಟ್ಟು ಮಳೆ ಪ್ರಮಾಣ 597.7 ಮಿ.ಮೀ. ಆಗಬೇಕಿತ್ತು. ಆದರೆ, 474.8 ಮಿಮೀ ಮಳೆಯಾಗಿದೆ. ಒಟ್ಟಾರೆ ವರ್ಷದಲ್ಲಿ ಆಗಬೇಕಿದ್ದ ಸರಾಸರಿ ಮಳೆ 980 ಮಿ.ಮಿ. ಆದರೆ ಪ್ರಸ್ತುತ ವರ್ಷದಲ್ಲಿ 817.6 ಮಿ.ಮೀ ಮಳೆಯಾಗಿದೆ” ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ಈ ಸುದ್ದಿ ಓದಿದ್ದೀಯಾ? ಬೆಳಗಾವಿ | ಮೋಡ ಬಿತ್ತನೆ ಕಾರ್ಯಾಚರಣೆ ಆರಂಭ; ಯಶಸ್ವಿಯಾದರೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಯತ್ನ

“ಮುಂಬರುವ ದಿನಗಳಲ್ಲಿ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಅತಿ ಹೆಚ್ಚು ಮಳೆಯೊಂದಿಗೆ ಸಾಧಾರಣದಿಂದ ಭಾರೀ ಮಳೆಯಾಗಬಹುದು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ” ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಅಕ್ರಮ ಪ್ರಕರಣ; IAS ಅಧಿಕಾರಿ ಗಂಗ್ವಾರ್‌ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರ ಅನುಮತಿ

ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ...

ಚಿಕ್ಕಬಳ್ಳಾಪುರದಲ್ಲಿ ಕಂಪಿಸಿದ ಭೂಮಿ; 2.9 ತೀವ್ರತೆಯ ಲಘು ಭೂಕಂಪ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಬೆನ್ನಲ್ಲೇ, ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ...

ಬೆಂಗಳೂರಿನ ಶೇ. 63ರಷ್ಟು ಪಿಜಿಗಳು ಅನಧಿಕೃತ: ಜಿಬಿಎ ಆಡಿಟ್ ವರದಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗಳ ಪೈಕಿ...

ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಬೇಕಾಬಿಟ್ಟಿ FIR ಹಾಕುವಂತಿಲ್ಲ, ಬಂಧಿಸುವಂತಿಲ್ಲ: ಪೊಲೀಸರಿಗೆ ಹೈಕೋರ್ಟ್ ಮಾರ್ಗಸೂಚಿಗಳೇನು?

ಫೇಸ್‌ಬುಕ್, ಎಕ್ಸ್, ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಪೋಸ್ಟ್‌ಗಳು, ಅಭಿಪ್ರಾಯಗಳು...