ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

Date:

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಮಾರಂಭವನ್ನು ಸೆ.17ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

- Advertisement -

ಬೆಳಗ್ಗೆ 11 ಗಂಟೆಗೆ ಕಬ್ಬನ್ ಪಾರ್ಕ್‌ನಲ್ಲಿರುವ ಎನ್‌ಜಿಒ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದತ್ತಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಹಿರಿಯ ಪತ್ರಕರ್ತ ಎನ್. ರವಿಕುಮಾರ್ ಟೆಲೆಕ್ಸ್ ಅವರ ‘ಸುದ್ದಿಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ’ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಎ.ಆರ್. ಕೃಷ್ಣಮೂರ್ತಿ, ನಿಕಟಪೂರ್ವ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತೆ ಅನುಚೇತ್, ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಚ್.ಬಿ. ಮದನಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಘದ ಅಧ್ಯಕ್ಷ ಚೆಲುವರಾಜು ಅಧ್ಯಕ್ಷತೆ ವಹಿಸಲಿದ್ದಾರೆ.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ದತ್ತಿ ಪ್ರಶಸ್ತಿಗೆ ಮೈಸೂರಿನ ಕೆ. ದೀಪಕ್, ಬಿ. ರಾಚಯ್ಯ ದತ್ತಿ ಪ್ರಶಸ್ತಿಗೆ ಮಾಹಿತಿ ಆಯುಕ್ತ ಬದ್ರುದ್ದೀನ್ ಕೆ., ಪ್ರೊ. ಬಿ. ಕೃಷ್ಣಪ್ಪ ದತ್ತಿ ಪ್ರಶಸ್ತಿಗೆ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಹಾಗೂ ಬಿ. ಬಸವಲಿಂಗಪ್ಪ ದತ್ತಿ ಪ್ರಶಸ್ತಿಗೆ ಯುವ ಪತ್ರಕರ್ತ ಯತಿರಾಜ್ ಬ್ಯಾಲಹಳ್ಳಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ತಲಾ ₹10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಇದೇ ಸಂದರ್ಭದಲ್ಲಿ ದಾವಣಗೆರೆಯ ಚಂದ್ರಣ್ಣ, ಕಲಬುರಗಿಯ ದೇವೇಂದ್ರಪ್ಪ ಕಪನೂರ, ಬಾಗಲಕೋಟೆಯ ಸುಭಾಸ್ ಹೊದ್ಲೂರು, ದಾವಣಗೆರೆಯ ಬಿ.ಓ. ಕರಿಯಮ್ಮ ಹಾಗೂ ಬಳ್ಳಾರಿಯ ಅನೂಪ್ ಕುಮಾರ್ ಅವರಿಗೆ ಸಂಘದ ಗೌರವ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.

ಇದನ್ನೂ ಓದಿ: ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರಕಟ

2001ರ ಫೆಬ್ರವರಿ 20ರಂದು ಕಲಬುರಗಿಯಲ್ಲಿ ವಾರ್ತಾ ಇಲಾಖೆ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಪತ್ರಕರ್ತರ ಕಾರ್ಯಾಗಾರದ ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘ ಅಸ್ತಿತ್ವಕ್ಕೆ ಬಂದಿತು. ಅಂದಿನ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ವಾರ್ತಾ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್ ಸಂಘಕ್ಕೆ ಚಾಲನೆ ನೀಡಿದ್ದರು.

ಕಳೆದ 26 ವರ್ಷಗಳಿಂದ ರಾಜ್ಯದ ಸರ್ಕಾರದ ಮಾಧ್ಯಮ ಪಟ್ಟಿಯಲ್ಲಿರುವ ದಲಿತರ ಮಾಲೀಕತ್ವ ಅಥವಾ ಸಂಪಾದಕತ್ವದ ಪತ್ರಿಕೆಗಳ ಹಕ್ಕುಗಳು ಹಾಗೂ ಸಂವಿಧಾನಬದ್ಧ ಸವಲತ್ತುಗಳಿಗಾಗಿ ಸಂಘಟನಾತ್ಮಕವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾರಂಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸಂಗೀತಾ’ ಮತ್ತು ‘ಸಂಗೇತಾ’ ನಡುವಿನ ವ್ಯತ್ಯಾಸ ಹಸಿದ ಗ್ರಾಹಕರಿಗೆ ತಿಳಿಯದು: ಮದ್ರಾಸ್ ಹೈಕೋರ್ಟ್

ತಂಜಾವೂರಿನ ಐತಿಹಾಸಿಕ ಬೃಹದೀಶ್ವರ ದೇವಾಲಯದ ಎದುರು ಇರುವ ಉಪಾಹಾರ ಗೃಹವೊಂದು ‘ಹೋಟೆಲ್...

ಗ್ಯಾನೇಶ್ ವಿರುದ್ಧ ‘ಇಂಡಿಯಾ’ ಒಕ್ಕೂಟದ ಸಾಂಕೇತಿಕ ‘ಮಹಾಭಿಯೋಗ’: ಮುಂದುವರಿದ ವಾಗ್ದಾಳಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ 'ಇಂಡಿಯಾ'...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರರಕಣ; ಅಪರಾಧ ಸ್ಥಳ ಮರುಸೃಷ್ಟಿಸಿದ SIT

ದೇಶಾದ್ಯಂತ ತೀವ್ರ ಕುತೂಹಲ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು...

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...