ಇಂಧನ ಇಲಾಖೆ | 35 ಸಾವಿರ ಹುದ್ದೆಗಳಿಗೆ ಹಂತ ಹಂತವಾಗಿ ಭರ್ತಿ: ಸಿಎಂ ಸಿದ್ದರಾಮಯ್ಯ ಭರವಸೆ

Date:

Advertisements

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವ ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದರು.

“ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಇದೇ ವಿಶ್ವಾಸ ವ್ಯಕ್ತಪಡಿಸಿದರು.

Advertisements

“1964 ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು” ಎಂದು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪಾದಚಾರಿಗಳನ್ನು ‘ಬೇವರ್ಸಿ’ಗಳಂತೆ ನಡೆಸಿಕೊಳ್ತಿದೆ ಬೆಂಗಳೂರು ನಗರ!

“ಇಡೀ ಏಷ್ಯಾದಲ್ಲಿ ಮೊದಲಿಗೆ ವಿದ್ಯುತ್ ಉತ್ಪಾದನೆ ಆಗಿದ್ದು 1902 ರಲ್ಲಿ ಕರ್ನಾಟಕದಲ್ಲಿ. 1905 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ವಿದ್ಯುತ್ ಸರಬರಾಜು ಕಂಪನಿ ಆರಂಭಿಸಲಾಯಿತು. 1908 ರಲ್ಲಿ ಮೊದಲ ಬಾರಿ ಅರಮನೆಗೆ ವಿದ್ಯುತ್ ಬಂತು. ಅಲ್ಲಿಂದ ಇಲ್ಲೀವರೆಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ನಾವು 34000 ಮೆಘಾ ವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ಕೇವಲ ನಮ್ಮ ರಾಜ್ಯದ್ದಾಗಿದೆ” ಎಂದರು.

“ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗುತ್ತಿರುವುದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿರುವ ಕಾರಣಕ್ಕೆ. ರೈತರಿಗೆ, ಕೃಷಿಗೆ, ಪಂಪ್ ಸೆಟ್ ಗಳಿಗೆ ಹಗಲಲ್ಲೂ 7 ಗಂಟೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಶಕ್ತರಾಗುತ್ತೇವೆ. ಈ ಗುರಿ ಇಟ್ಟುಕೊಂಡು ಕೆಲಸಗಳು ನಡೆಯುತ್ತಿವೆ. 60000 ಮೆಘಾ ವ್ಯಾಟ್ ಉತ್ಪಾದನೆ ಗುರಿ ನಾವು ತಲುಪಿದ ತಕ್ಷಣ ಇದು ಸಾಧ್ಯವಗಲಿದೆ. ವಿದ್ಯುತ್ ಪ್ರಮುಖ ಕಚ್ಛಾವಸ್ತು ಎನ್ನುವುದನ್ನು ನಾವು ಮರೆಯಬಾರದು” ಎಂದು ಹೇಳಿದರು.

“ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೀರಿ. ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ನಮ್ಮ ಸರ್ಕಾರ ಸಿದ್ಧವಿದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ನೀವು ನಮ್ಮ ಜೊತೆಗೆ ಇರಿ” ಎಂದು ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X