ಹೊರ ರಾಜ್ಯದ ದನಕರುಗಳನ್ನು ಕಾಡಿನಲ್ಲಿ ಮೇಯಿಸುವುದಕ್ಕೆ ಮಾತ್ರ ನಿಷೇಧ: ಈಶ್ವರ ಖಂಡ್ರೆ

Date:

ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

- Advertisement -

ಮಾಧ್ಯಮ ಹೇಳಿಕೆ ನೀಡಿರುವ ಅವರು, ವನ್ಯಜೀವಿ ಸಂರಕ್ಷಣಾ ಕಾಯಿದೆ 1972ರ ಅಡಿಯಲ್ಲಿ ಮೀಸಲು ಅರಣ್ಯ, ವನ್ಯಜೀವಿಧಾಮ, ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಜನರ ಅತಿಕ್ರಮ ಪ್ರವೇಶಕ್ಕೆ ಮತ್ತು ಸಾಕುಪ್ರಾಣಿಗಳನ್ನು ಮೇಯಿಸಲು ಅವಕಾಶ ಇರುವುದಿಲ್ಲ. ಆದರೆ ರಾಜ್ಯದ ಕೆಲವು ಅರಣ್ಯ ಭಾಗದಲ್ಲಿ ಹಲವು ವರ್ಷದಿಂದ ಇಂತಹ ರೂಢಿ ಇದ್ದು, ಕಾಡಿನಂಚಿನ ಜನರಿಗೆ ಜಾಗೃತಿ ಮೂಡಿಸಿ, ಅವರಿಗೆ ಹೆಚ್ಚು ಹಾಲು ನೀಡುವ ಹಸುಗಳನ್ನು ಹೊಂದಲು ಅವಕಾಶ ಕಲ್ಪಿಸುವ ಮೂಲಕ ಮತ್ತು ತಮ್ಮ ಪಟ್ಟಾ ಜಮೀನಿನಲ್ಲಿ ಹಸಿ ಮೇವು ಬೆಳೆಸಲು ಪ್ರೋತ್ಸಾಹಿಸುವ ಮೂಲಕ ಹಂತ ಹಂತವಾಗಿ ಅರಣ್ಯದಲ್ಲಿ ಜಾನುವಾರುಗಳನ್ನು ಬಿಡದಂತೆ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ದನಕರುಗಳಿವೆ ಎಂದು ಪಶುಸಂಗೋಪನಾ ಇಲಾಖೆ ಅಂಕಿ ಅಂಶ ತಿಳಿಸುತ್ತದೆ. ಇಷ್ಟೊಂದು ದನಕರುಗಳನ್ನು ಒಟ್ಟಿಗೆ ಕಾಡಿಗೆ ತೆಗೆದುಕೊಂಡು ಹೋಗುವುದರಿಂದ ವನ್ಯಜೀವಿಗಳಾದ ಆನೆ, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ ಇತ್ಯಾದಿಗಳಿಗೆ ಮೇವಿನ ಕೊರತೆ, ನೀರಿನ ಕೊರತೆ ಎದುರಾಗುತ್ತಿದೆ. ಕಾಲುಬಾಯಿ ರೋಗ, ಚರ್ಮಗಂಟು ಅಥವಾ ಬಾವು (ಲಿಂಪಿ ಸ್ಕಿನ್), ನೆರಡಿ (ಆಂಥರಾಕ್ಸ್) ಮೊದಲಾದ ಸಾಂಕ್ರಾಮಿಕ ಕಾಯಿಲೆಗಳು ವನ್ಯಜೀವಿಗಳಿಗೂ ಹಬ್ಬುವ ಅಪಾಯ ಇರುತ್ತದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಜಾನುವಾರುಗಳನ್ನು ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚಿಸಲಾಗಿದೆ. ಆದರೆ ಸ್ಥಳೀಯರ ದನಕರುಗಳಿಗೆ ಮತ್ತು ಅರಣ್ಯಹಕ್ಕು ಕಾಯಿದೆಯಡಿ ಹಕ್ಕು ಪಡೆದವರಿಗೆ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಮೋಶಾ ಕಂಪನಿಯ ಮತ್ತೊಂದು ನಿಗೂಢ ನಾಟಕ!

Advertisements

ಚಾಮರಾಜನಗರದಲ್ಲಿ ಈಗಾಗಲೇ ಅರಣ್ಯ ಇಲಾಖೆ, ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ನಿಧಿಯನ್ನು ಬಳಸಿಕೊಂಡು 10-15 ರೈತರಿಗೆ ಹೆಚ್ಚು ಹಾಲು ನೀಡುವ ಹೈಬ್ರೀಡ್ ಹಸುಗಳನ್ನು ಕೊಡಿಸಿದ್ದಾರೆ. ಪ್ರಸ್ತುತ ಕಾಡಿನಲ್ಲಿ ದನ ಮೇಯಿಸುವ ಕಾಯಕವನ್ನೇ ಜೀವನೋಪಾಯ ಮಾಡಿಕೊಂಡಿರುವವರಿಗೆ ಇಂತಹ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಹಂತ ಹಂತವಾಗಿ ಕಾಡಿನಲ್ಲಿ ದನ, ಕರು, ಎಮ್ಮೆ, ಮೇಕೆ, ಕುರಿಗಳನ್ನು ಮೇಯಿಸದಂತೆ ಮನವೊಲಿಸಲಾಗುವುದು ಎಂದೂ ತಿಳಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ನಲ್ಲಿ ಈ ಸಂಬಂಧ ಸುದೀರ್ಘ ವಾದ ಪ್ರತಿವಾದ ನಡೆದು, ಅಂತಿಮವಾಗಿ ತಮಿಳುನಾಡಿನ ಅರಣ್ಯಗಳಲ್ಲಿ ಜಾನುವಾರು ಮೇಯಿಸಲು ಅವಕಾಶ ಇರುವುದಿಲ್ಲ ಎಂಬ ತೀರ್ಪು ಬಂದಿದೆ. ಆ ತೀರ್ಪಿನ ಬಳಿಕ ರಾಜ್ಯಕ್ಕೆ ನೆರೆ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಜಾನುವಾರು ತಂದು ರಾಜ್ಯದ ಕಾಡಿನಲ್ಲಿ ಮೇಯಿಸಲಾಗುತ್ತಿದೆ. ತಿಂಗಳುಗಟ್ಟಲೆ ಹೀಗೆ ಕಾಡಿನಲ್ಲಿ ದನಕರು ಮೇಯಿಸುವುದರಿಂದ ಕಾಡಿನ ಹುಲ್ಲುಗಾವಲು ಬರಿದಾಗುತ್ತಿದೆ, ಸಸ್ಯಸಂವರ್ಧನೆಗೂ ಅಡ್ಡಿಯಾಗುತ್ತದೆ. ಜೊತೆಗೆ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇದು ವನ್ಯಜೀವಿಗಳಿಗೆ ವಿಷ ಹಾಕುವ ಹಂತ ತಲುಪಿದ್ದ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಮತ್ತು ನಿಯಮಾನುಸಾರ ಕ್ರಮ ವಹಿಸಲು ಸೂಚಿಸಲಾಗಿತ್ತು ಎಂದೂ ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಮೊದಲ ಕಂತು ₹1,250 ಕೋಟಿ ಬಿಡುಗಡೆ; ರೈತರ ಖಾತೆಗೆ ₹2,500

ರಾಜ್ಯದಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ತನ್ನದೇ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ....

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...