ಭತ್ತ ಖರೀದಿ ಕೇಂದ್ರ ಸ್ಥಾಪಿಸಿ, ಕ್ವಿಂಟಲ್‌ಗೆ ₹500 ಪ್ರೋತ್ಸಾಹ ಧನ ನೀಡಿ: ಆರ್‌ ಅಶೋಕ್‌ ಆಗ್ರಹ

Date:

ಭತ್ತ ಖರೀದಿ ಕೇಂದ್ರಗಳನ್ನು ಕೂಡಲೇ ತೆರೆದು ರೈತರು ಮತ್ತೊಮ್ಮೆ ಬೀದಿಗಿಳಿದು ಪ್ರತಿಭಟಸಬೇಕಾದ ಅನಿವಾರ್ಯತೆ ತಪ್ಪಿಸಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಆಗ್ರಹಿಸಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ಈ ಬಾರಿ ಉತ್ತಮ ಮಳೆಯಿಂದಾಗಿ ಮಂಡ್ಯ, ಮೈಸೂರು ಭಾಗದಲ್ಲಿ ಭತ್ತದ ಬೆಳೆಯಲ್ಲಿ ಉತ್ತಮ ಫಸಲು ಬಂದಿದೆ. ಆದರೆ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸದೆ, ಸೂಕ್ತ ಬೆಲೆ ಕೊಡದೆ, ದಾಸ್ತಾನಿಗೆ ಜಾಗವಿಲ್ಲ, ತೇವಾಂಶ ಜಾಸ್ತಿ ಇದೆ ಎಂದು ಎಂದಿನಂತೆ ಅನ್ನದಾತರನ್ನು ಸತಾಯಿಸುತ್ತಿದೆ ಈ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ” ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಸಿಎಂ ಸಿದ್ದರಾಮಯ್ಯ ಅವರೇ ಕೇಂದ್ರ ಸರ್ಕಾರ ಕ್ವಿಂಟಲ್ ಭತ್ತಕ್ಕೆ ₹2362 ಬೆಂಬಲ ಬೆಲೆ ಘೋಷಿಸಿದೆ. ಕೇರಳ, ಒಡಿಸ್ಸಾ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ನೀಡುತ್ತಿರುವಂತೆ ರಾಜ್ಯ ಸರ್ಕಾರದ ವತಿಯಿಂದ ಕ್ವಿಂಟಲ್ ಭತ್ತಕ್ಕೆ ₹500 ಪ್ರೋತ್ಸಾಹ ಧನವಾಗಿ ಬೆಂಬಲ ಬೆಲೆ ಘೋಷಣೆ ಮಾಡಿ ಖರೀದಿ ಕೇಂದ್ರಗಳ ಮೂಲಕ ಭತ್ತ ಖರೀದಿ ಮಾಡಿ ರೈತರ ನೆರವಿಗೆ ಬನ್ನಿ” ಎಂದು ಒತ್ತಾಯಿಸಿದ್ದಾರೆ.

“ತೇವಾಂಶ ಕಡಿಮೆ ಮಾಡಿಕೊಂಡು ಬನ್ನಿ, ದಾಸ್ತಾನಿಗೆ ಸ್ಥಳವಿಲ್ಲ ಎನ್ನುವ ಕುಂಟು ನೆಪಗಳನ್ನು ಕೊಡುವುದು ಬಿಟ್ಟು, ಪಂಜಾಬ್ ಇನ್ನಿತರ ರಾಜ್ಯಗಳ ಮಾದರಿಯಲ್ಲಿ ಭತ್ತ ಖರೀದಿ ಕೇಂದ್ರಗಳಲ್ಲೇ ಒಣಗಿಸುವ ಯಂತ್ರ ಅಳವಡಿಸಿ ಖರೀದಿ ಪ್ರಕ್ರಿಯೆ ತ್ವರಿತಗೊಳಿಸಿ” ಎಂದಿದ್ದಾರೆ.

“ನಿಮ್ಮ ಸರ್ಕಾರದ ಈ ರೈತ ವಿರೋಧಿ ಧೋರಣೆ ಭತ್ತ ಖರೀದಿಯಲ್ಲೂ ಮುಂದುವರೆದರೆ ಈ ಬಾರಿ ರೈತರ ಕೆಂಗಣ್ಣಿಗೆ ಗುರಿಯಾಗಿ ಸರ್ಕಾರ ಬೀಳುವುದು ಗ್ಯಾರಂಟಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...

ಅರಮನೆ ಸರ್ಕಾರದ್ದು; ರಾಜವಂಶಸ್ಥರಿಗೆ ವಾಸಿಸಲು ಜಾಗ ಕೊಟ್ಟಿದ್ದೇವೆ: ಸಚಿವ ಯತೀಂದ್ರ

ದಸರಾ ಆಚರಣೆಯಲ್ಲಿ ಸಮನ್ವಯದ ಕೊರತೆಯಿತ್ತು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...