ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ; 67 ಕಡೆ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿ ಕೆ ಶಿವಕುಮಾರ್

Date:

“ವಾಹನ ಇಂಧನಗಳಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಳದಿಂದ ವಾಹನಗಳ ಎಂಜಿನ್ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ 67 ಕಡೆ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗಿದೆ. ಈ ಕುರಿತು ಸೋಮವಾರ ಸಂಬಂಧಪಟ್ಟ ಸಚಿವರು ಅಧಿಕೃತವಾಗಿ ಪತ್ರಿಕಾಗೋಷ್ಠಿ ನಡೆಸಿ ಪರಿಶೀಲನಾ ವರದಿ ಮತ್ತು ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

- Advertisement -

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

“ಪೆಟ್ರೋಲ್‌ನಲ್ಲಿ ಶೇ.31.5ರಷ್ಟು ಎಥೆನಾಲ್ ಮಿಶ್ರಣ ಮಾಡುತ್ತಿರುವ ಬಗ್ಗೆ ಕೇಳಿಬಂದಿರುವ ದೂರುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಸಚಿವರಿಗೆ ಅಗತ್ಯ ಸೂಚನೆ ನೀಡಿದ್ದು, ಕೇಂದ್ರ ಸರ್ಕಾರಕ್ಕೂ ಮಾಹಿತಿ ರವಾನಿಸಲಾಗಿದೆ. ಸಾವಿರಾರು ವಾಹನ ಸವಾರರು ವಾಹನಗಳ ಮೈಲೇಜ್ ಕಡಿಮೆಯಾಗುವುದು, ನಿರೀಕ್ಷಿತ ದೂರ ಕ್ರಮಿಸದಿರುವುದು ಮತ್ತು ಚಲಿಸುತ್ತಿರುವಾಗಲೇ ಎಂಜಿನ್ ಸ್ಥಗಿತಗೊಳ್ಳುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ದೂರು ನೀಡಿದ್ದಾರೆ” ಎಂದರು.

ಇದನ್ನೂ ಓದಿ: ಪೆಟ್ರೋಲ್ ಬಂಕ್‌ಗಳಲ್ಲಿ ಎಥೆನಾಲ್ ಪ್ರಮಾಣದ ಪ್ರದರ್ಶನ: ಪಿಐಎಲ್ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಪೆಟ್ರೋಲ್ ಬಂಕ್‌ಗಳಷ್ಟೇ ಅಲ್ಲ, ವಿತರಣಾ ಹಂತದಲ್ಲೂ ಪರಿಶೀಲನೆ

“ಪೆಟ್ರೋಲ್ ಬಂಕ್ ಗಳಲ್ಲಿ ಮಾತ್ರವಲ್ಲದೆ, ಎಥೆನಾಲ್ ಮಿಶ್ರಣ ಮತ್ತು ವಿತರಣೆಯಾಗುವ ಹಂತದಲ್ಲೂ ಪರಿಶೀಲನೆ ನಡೆಸಲಾಗಿದೆ. ಎಲ್ಲಿ, ಹೇಗೆ ಮಿಶ್ರಣ ಮಾಡಲಾಗುತ್ತಿದೆ ಎಂಬುದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಸಂಗ್ರಹಿಸಲಾಗಿದೆ. ಸಚಿವರು ವಿವರವಾದ ವರದಿ ಬಿಡುಗಡೆ ಮಾಡಲಿದ್ದಾರೆ” ಎಂದು ಹೇಳಿದರು.

“ಕೇಂದ್ರ ಸರ್ಕಾರ ಈ ವಿಚಾರದಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ವಾಹನಗಳ ಕಾರ್ಯಕ್ಷಮತೆ, ಇಂಧನದ ಗುಣಮಟ್ಟ ಮತ್ತು ಜನರ ಸುರಕ್ಷತೆ ಮುಖ್ಯ. ಕಡಿಮೆ ಬೆಲೆಗೆ ಎಥೆನಾಲ್ ದೊರೆಯುತ್ತದೆ ಎಂಬ ಕಾರಣಕ್ಕೆ ಅದರಿಂದ ಲಾಭ ಪಡೆಯುವ ಉದ್ದೇಶದಿಂದ ಮಿಶ್ರಣದ ಪ್ರಮಾಣ ಹೆಚ್ಚಿಸುವುದು ಸರಿಯಲ್ಲ. ಜನರಿಗೆ ತೊಂದರೆ ಉಂಟುಮಾಡುವುದು ಒಳ್ಳೆಯದಲ್ಲ. ಇಡೀ ದೇಶದ ವಾಹನ ಸವಾರರಲ್ಲಿ ಆತಂಕ ಮೂಡಿಸಿರುವ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಅಪಾಯಕಾರಿ ಪರಿಸ್ಥಿತಿಯನ್ನು ನಾವು ಖಂಡಿಸುತ್ತೇವೆ” ಎಂದು ತಿಳಿಸಿದರು.

“ಬಿಜೆಪಿ, ಜೆಡಿಎಸ್ ನಾಯಕರು ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ಈ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರದಲ್ಲಿ ಎಲ್ಲರೂ ಧ್ವನಿ ಎತ್ತಬೇಕು” ಎಂದು ಹೇಳಿದರು.

“ರಾಜ್ಯದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರುತ್ತೇನೆ. ಕರ್ನಾಟಕದ ಎಲ್ಲ ಜನರ ಮನೆಗಳಲ್ಲೂ ಬೆಳಕು ತುಂಬಲಿ” ಎಂದು ಹಾರೈಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್ | ಸರ್ಕಾರ ರಚನೆಗೆ ವಿಪಕ್ಷ ನಾಯಕರನ್ನು ಆಹ್ವಾನಿಸಿದ ಅಧ್ಯಕ್ಷ; ನೆತನ್ಯಾಹುಗೆ ಹಿನ್ನಡೆ!

ಇಸ್ರೇಲ್‌ನಲ್ಲಿ ಅಕ್ಟೋಬರ್ 27ರಂದು ನಡೆದ ಸಾರ್ವತ್ರಿಕ ಚುನಾವಣೆಯ ನಂತರ ನೂತನ ಸಮ್ಮಿಶ್ರ...

ಅಮೃತಸರ | 100ಕ್ಕೂ ಹೆಚ್ಚು ಸಶಸ್ತ್ರಧಾರಿಗಳಿಂದ ಮನೆ ಮೇಲೆ ಗುಂಡಿನ ದಾಳಿ; ಹಲವರಿಗೆ ಗಂಭೀರ ಗಾಯ

ಪಂಜಾಬ್‌ನ ಅಮೃತಸರ ಜಿಲ್ಲೆಯಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ನೂರಕ್ಕೂ ಹೆಚ್ಚು ಸಶಸ್ತ್ರಧಾರಿಗಳ...

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ ರಾಜಕೀಯ ನಿಲುವು ಯಾವ ದಿಕ್ಕಿಗೆ?

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು ಅಲ್ಪಸಂಖ್ಯಾತರ ವಾಸ್ತವ ಸ್ಥಿತಿ

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು,...