ಎರಡು ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಗೃಹ ಸಚಿವ ಡಾ. ಜಿ ಪರಮೇಶ್ವರ್

Date:

ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆಯ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಹೇಳಿದರು.

ಸೋಮವಾರ ಬೆಳಗ್ಗೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಎತ್ತಿನ ಹೊಳೆ ಯೋಜನೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

“ಎತ್ತಿನ ಹೊಳೆ ಯೋಜನೆಯು ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನವನ್ನು ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ನಮ್ಮ ಸರ್ಕಾರವು ಅನುದಾನ ಬಿಡುಗಡೆ ಮಾಡಲಾಗಿದೆ. ಯೋಜನೆಯ ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ 22 ಸಾವಿರ ಕೋಟಿ ರೂ. ಆಗುತ್ತಿದೆ. ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವಾಟರ್ ಸ್ಟೋರೆಜ್‌ಗಾಗಿ ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ 8 ಲಕ್ಷ ರೂ. ಹಾಗೂ ದೊಡ್ಡಬಳ್ಳಾಪುರದಲ್ಲಿ ಎಕರೆ ಭೂಮಿಗೆ 32 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಗಿದೆ. ಎಲ್ಲ ರೈತರಿಗೂ ಒಂದೇ ರೀತಿಯ ಸಮಾನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗಿದೆ” ಎಂದರು.

ಎನ್‌ಐಎ ದಾಳಿ

“ಎನ್‌ಐಎ ಕಚೇರಿ ಬೆಂಗಳೂರಿನಲ್ಲಿ ಆಗಿದೆ. ಅಕ್ರಮ ಚಟುವಟಿಕೆಗಳ‌ ಬಗ್ಗೆ ಮಾಹಿತಿ ಆಧರಿಸಿ ದಾಳಿ ಮಾಡುತ್ತಿರುತ್ತಾರೆ. ಈ ಬಗ್ಗೆ ಎನ್‌ಐಎ ತಂಡವು ಕೆಲವು ಸಲ ರಾಜ್ಯ ಪೊಲೀಸರೊಂದಿಗೆ ಮಾಹಿತಿ ಹಂಚಿಕೊಳ್ಳುತ್ತಾರೆ. ಅವರ ಕರ್ತವ್ಯ ಅವರು ಮಾಡಲಿದ್ದಾರೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೈಲು ಸೇರಿದ ಬಜರಂಗದಳ ಕಾರ್ಯಕರ್ತರನ್ನು ಭೇಟಿಯಾದ ಶೋಭಾ ಕರಂದ್ಲಾಜೆ

ಲವ್ ಜಿಹಾದ್​ ಪ್ರಕರಣದಲ್ಲಿ ​ಹಲ್ಲೆ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ ಸೇರಿರುವ...

ಕರಂದ್ಲಾಜೆ ವಿರುದ್ದ ಷಡ್ಯಂತ್ರ ನಡೀತಿದೆ ಎಂದ ಬಿಎಸ್‌ವೈ; ಬಾಸ್ ಈಸ್ ಆಲ್ವೇಸ್ ರೈಟ್ ಎಂದ ಸಿ ಟಿ ರವಿ

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಕೇಳಿಲ್ಲ. ಈ ಬಗ್ಗೆ ಈಗಾಗಲೇ...

ಪರಿಹಾರಕ್ಕೆ ಹಣವಿಲ್ಲ, ಜಾಹೀರಾತಿಗೆ ಹಣವಿದೆ ಎಂದು ಸರ್ಕಾರ ಕುಟುಕಿದ ಕುಮಾರಸ್ವಾಮಿ

"ರಾಜ್ಯದ ರೈತರು ನಷ್ಟದಲ್ಲಿದ್ದಾರೆ, ಪರಿಹಾರ ಕೊಡೋಕೆ ಸರ್ಕಾರದ ಬಳಿ ಹಣವಿಲ್ಲ. ಆದ್ರೆ,...