ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಪ್ರತಾಪ್ ಸಿಂಹಗೆ ನೆಟ್ಟಿಗರ ಕ್ಲಾಸ್!

Date:

ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಅದನ್ನು ತಮ್ಮ ಎಕ್ಸ್‌, ಫೇಸ್‌ಬುಕ್ ಮೊದಲಾದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅದಾದ ಬೆನ್ನಲ್ಲೇ ಪ್ರತಾಪ್ ಸಿಂಹ ಅವರಿಗೆ ನೆಟ್ಟಿಗರು ಪಾಠ ಮಾಡಿದ್ದಾರೆ.

- Advertisement -

“ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೊದಲಿಗೆ ಆರೋಪಿ ನಂ-1 ಆಗಿ, ನಂತರ A-17 ಆಗಿ, ಆರೂವರೆ ವರ್ಷ ಜೈಲಿನಲ್ಲಿದ್ದು ಇತ್ತೀಚೆಗೆ ಜಾಮೀನಿನ ಹೊರಬಂದಿರುವ ಸ್ನೇಹಿತ ಮದ್ದೂರು ನವೀನ್ ರನ್ನು ಭೇಟಿಯಾಗಿ ಅರೋಗ್ಯ ವಿಚಾರಿಸಿದೆ” ಎಂದು ಪ್ರತಾಪ್ ಸಿಂಹ ಎಕ್ಸ್‌ನಲ್ಲಿ ಪೊಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಬೆನ್ನಲ್ಲೇ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ನಿಮ್ಮ ಸ್ನೇಹಿತನೇ ಎಂದು ಪ್ರಶ್ನಿಸಿದ್ದಾರೆ. ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನು ಓದಿದ್ದೀರಾ? ನಿರುದ್ಯೋಗಿ ಪ್ರತಾಪ್ ಸಿಂಹ ಮತ್ತು ರಾಜ್ಯ ನಾಯಕರ ಮಕ್ಕಳ ಪ್ರೇಮ! Prathap Simha | Nepotism | BJP | JDS

ಹೈಕೋರ್ಟ್ ಏಕಸದಸ್ಯ ಪೀಠವು ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ನವೀನ್ ಕುಮಾರ್, ಅಮಿತ್, ಎಚ್ಎಲ್ ಸುರೇಶ್ ಅವರಿಗೆ ಜುಲೈ 16ರಂದು ಜಾಮೀನು ನೀಡಿದೆ. ನಿನ್ನೆ ಪ್ರತಾಪ್ ಸಿಂಹ ಕೊಲೆ‌ ಆರೋಪಿ ನವೀನ್ ಕುಮಾರ್ ಅವರನ್ನು ಭೇಟಿಯಾಗಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

“ಸಮಾಜದಲ್ಲಿ ಅಶಾಂತಿ ಹುಟ್ಟಿಸುವವರು. ಸಮಾಜದ ಸಾಮರಸ್ಯವನ್ನು ಹಾಳು ಮಾಡುವವರು. ತತ್ವ ವಿಚಾರಗಳನ್ನು ಮುಚ್ಚು ಹಾಕಲು ಪ್ರಯತ್ನಿಸುತ್ತಿರುವಂತವರನ್ನು ತಾವು ಹೋಗಿ ಭೇಟಿಯಾಗೋದು ಎಷ್ಟರ ಮಟ್ಟಿಗೆ ನ್ಯಾಯ ಮತ್ತು ನಿಮ್ಮ ಮನಸಾಕ್ಷಿ ಒಪ್ಪುತ್ತಾ” ಎಂದು ನೆಟ್ಟಿಗರೊಬ್ಬರು ಪ್ರಶ್ನಿಸಿದ್ದಾರೆ.

“ಹಿಂದುತ್ವ ಎಂದರೆ ಕೊಲೆಗಾರರ ಜೊತೆ ಇರುವುದೇ..? ಇಂತಹ ಕೊಲೆಗಡುಕರೆಲ್ಲ ನಿಮ್ಮ ಸ್ನೇಹಿತರು” ಎಂದು ಮತ್ತೋರ್ವ ನೆಟ್ಟಿಗರು ಟೀಕಿಸಿದ್ದಾರೆ.

“ಒಬ್ಬ ದಿಟ್ಟ ಲಿಂಗಾಯತ ಪ್ರತಿಭಾವಂತೆ, ಸಾಮಾಜಿಕ ಕಾರ್ಯಕರ್ತೆ, ಜನಪರ ಪತ್ರಕರ್ತೆಯ ಕೊಲೆ ಪ್ರಕರಣದ ಆರೋಪಿಯನ್ನು ಮೆರೆಸೋದು ಯಾರನ್ನು ಮೆಚ್ಚಿಸೋಕೆ ಪ್ರತಾಪ್ ಸರ್..? ಆರ್‌ಎಸ್‌ಎಸ್‌ ನಾಯಕರನ್ನು ಮೆಚ್ಚಿಸಬೇಕು ಅಂದರೆ ಬಸವಣ್ಣನ ಲಿಂಗಾಯತವನ್ನು ದ್ವೇಷಿಸಲೇಬೇಕು ಅಲ್ವಾ..? ನಿಮ್ಮ ಈ ನಡೆ ಇತ್ತೀಚಿನ ನಿಮ್ಮ ಲಿಂಗಾಯತ ವಿರೋಧಿ ಹೇಳಿಕೆಗಳಿಗೆ ತಾಳೆಯಾಗುವಂತಿದೆ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬರ್ತಾ ಬರ್ತಾ ರಾಯರ ಕುದುರೆ ಕತ್ತೆ ಆಯಿತು ಅಂದ ಹಾಗೆ, ಯಾಕೆ ಈ ಒಕ್ಕಲಿಗ ಲಿಂಗಾಯತರ ಮೋಸದ ಆಟ? ಈಗ ಕೊಲೆ ಆರೋಪಿಗಳ ಜೊತೆ .. ನಾವು ನಿಮ್ಮನ್ನ ಜಾತಿ ಮೀರಿ ಜನನಾಯಕ ಅಂದುಕೊಂಡಿದ್ದೆವು. ಜಾಗ್ರತೆಯಿಂದ ಹೆಜ್ಜೆ ಇಡೀ … ನಿಮ್ಮ ಜೊತೆ ನಾವಿದ್ದೇವೆ” ಎಂದು ಪ್ರತಾಪ್ ಬೆಂಬಲಿಗರೊಬ್ಬರು ಎಚ್ಚರಿಕೆ ನೀಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...