‘ಗೌರವಧನ ಹೆಚ್ಚಿಸದೆ ಸರ್ಕಾರದಿಂದ ಶೋಷಣೆ’; ಧರಣಿಗೆ ಕೂತ ಎಂಬಿಕೆ, ಎಲ್‌ಸಿಆರ್‌ಪಿ ಮಹಿಳೆಯರು

Date:

ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‌ಆರ್‌ಎಲ್‌ಎಂ) ಭಾಗವಾಗಿ ಕೆಲಸ ಮಾಡುವ ಮಹಿಳೆಯರು ತಮ್ಮ ಗೌರವಧನ ಹೆಚ್ಚಿಸುವಂತೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡಿದ್ದಾರೆ.

- Advertisement -

ಬೆಂಗಳೂರಿನ ಫ್ರೀಡಂಪಾರ್ಕ್‌ಗೆ ರಾಜ್ಯದ ಮೂಲೆಮೂಲೆಯಿಂದ ಬಂದಿರುವ ‘ರಾಜ್ಯ ಗ್ರಾಮ ಪಂಚಾಯಿತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರು’ (ಎಂಬಿಕೆ), ‘ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು’ (ಎಲ್‌ಸಿಆರ್‌ಪಿ), ‘ಕೃಷಿ ಸಖಿಯರು’ (ಕೆಎಸ್‌), ‘ಪಶು ಸಖಿಯರು’ (ಪಿಎಸ್‌) ತಮ್ಮ ಗೌರವಧನ ಹೆಚ್ಚಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರತಿಭಟನೆಯ ವೇಳೆ ‘ಈದಿನ ಡಾಟ್ ಕಾಮ್’ ಜೊತೆ ಮಾತನಾಡಿದ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಸ್ವರೂಪ ಎ.ಸಿ. ಅವರು ತಮ್ಮ ಕಷ್ಟಗಳನ್ನು ವಿವರಿಸಿದರು. “ಎಲ್‌ಸಿಆರ್‌ಪಿಗಳಿಗೆ 3000 ರೂ., ಕೃಷಿ ಸಖಿ, ಪಶುಸಖಿಯರಿಗೆ 3750 ರೂ., ಎಂಬಿಕೆಗಳಿಗೆ 5,000 ರೂ. ಗೌರವ ಧನ ಕೊಡುತ್ತಾರೆ. ಈ ಹಣದಲ್ಲಿ ನಾವು ಸಂಸಾರ ಮಾಡಲು ಸಾಧ್ಯವಿಲ್ಲ. ತಿಂಗಳಿಗೆ ಎಷ್ಟು ಸಂಬಳ ಬರುತ್ತದೆ ಎಂದು ಯಾರಾದರೂ ಕೇಳಿದರೆ ಹೇಳಿಕೊಳ್ಳಲಾಗದಷ್ಟು ಕಡಿಮೆ ಗೌರವಧನವನ್ನು ಸರ್ಕಾರ ನಮಗೆ ಕೊಡುತ್ತಿದೆ. ಕೂಲಿಕಾರ್ಮಿಕರಿಗಿಂತ ಕಡಿಮೆ ಹಣವನ್ನು ನಾವು ಪಡೆಯುತ್ತಿದ್ದೇವೆ” ಎಂದರು.

Swaroop
ಸ್ವರೂಪ ಎ.ಸಿ., ಬೆಂಗಳೂರು ದಕ್ಷಿಣ ಜಿಲ್ಲೆ

ಇದನ್ನೂ ಓದಿರಿ: ರೈತರಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಸರ್ಕಾರ ಬಳಸಿಕೊಂಡಿದ್ದೆಷ್ಟು? ಇಲ್ಲಿದೆ ನೋಡಿ…

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಎಂಬಿಕೆಯಾಗಿ ಕೆಲಸ ಮಾಡುತ್ತಿರುವ ಲತಾ ಅವರು ಮಾತನಾಡಿ, “ನಮಗೆ ತರಬೇತಿಯಲ್ಲಿ ಹೇಳಿದ್ದೇ ಬೇರೆ, ನಡೆಸಿಕೊಳ್ಳುತ್ತಿರುವ ರೀತಿಯೇ ಬೇರೆ. ಪಂಚಾಯಿತಿಯಲ್ಲಿ ಒಂದು ಕೊಠಡಿ ನಿಮಗೆ ಮೀಸಲಿಡಲಾಗುತ್ತದೆ, ನೀವು ಕೂತು ಕೆಲಸ ಮಾಡಬೇಕಷ್ಟೇ ಎಂದಿದ್ದರು. ಆದರೆ ನಮ್ಮ ಕೆಲಸಗಳು ಇಷ್ಟೇ ಅಲ್ಲವಾಗಿದೆ. ಹೊಸ ಸಂಘಟನೆಗಳನ್ನು ಪ್ರತಿ ತಿಂಗಳು ರಚನೆ ಮಾಡಬೇಕು. ಪ್ರತಿ ತಿಂಗಳು ಮಹಿಳೆಯರಿಗೆ ಸಾಲವನ್ನು ಒದಗಿಸಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಯಲ್ಲಿ ನಡೆಯುವ ಸಭೆಗಳಿಗೆ ಹೋಗಿ ಉತ್ತರಗಳನ್ನು ಕೊಡಬೇಕು. ಬೆಳಿಗ್ಗೆ ಹತ್ತೂವರೆಯಿಂದ ಸಂಜೆ ಐದೂವರೆಯವರೆಗೆ ಕೆಲಸ ಎಂದು ಹೇಳಿದ್ದಾರೆ. ಆದರೆ ನಮಗೆ ನಿರ್ದಿಷ್ಟ ಸಮಯ ನಿಗದಿ ಇರುವುದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

latha
ಲತಾ, ಬೆಂಗಳೂರು ದಕ್ಷಿಣ ಜಿಲ್ಲೆ

ಮುಂದುವರಿದು, “ಭಾನುವಾರವೂ ಕೆಲಸ ಮಾಡಬೇಕು, ಎರಡನೇ ಹಾಗೂ ಮೂರನೇ ಶನಿವಾರವೂ ಕೆಲಸ ಮಾಡಬೇಕು ಎನ್ನುತ್ತಾರೆ. ಗ್ರಾಮಗಳಿಂದ ಗ್ರಾಮಕ್ಕೆ ವಾಹನ ಸೌಲಭ್ಯವಿರುವುದಿಲ್ಲ. ಕಾರ್ಯನಿರ್ವಹಣಾ ವರದಿ ಸಲ್ಲಿಸಿದ ಮೇಲೆಯೇ ಗೌರವ ಧನ ಬರುತ್ತದೆ. ನಮ್ಮ ದುಡ್ಡಲ್ಲೇ ಪ್ರಿಂಟ್ ಔಟ್ ತೆಗೆಸಬೇಕು. ಸಂಘಗಳನ್ನು ನಡೆಸಬೇಕಾದರೆ ಸಂಜೆ ಮೇಲೆಯೇ ಹೋಗಬೇಕಾಗುತ್ತದೆ. ದತ್ತಾಂಶವನ್ನು ಅಪ್‌ಲೋಡ್ ಮಾಡಲು ಇಂಟರ್‌ನೆಟ್ ಸೌಲಭ್ಯ ಇರುವುದಿಲ್ಲ. ಮೊಬೈಲ್ ಡೇಟಾಕ್ಕೂ ನಾವೇ ಹಣ ಖರ್ಚು ಮಾಡಬೇಕು. ಈ ಕಡಿಮೆ ಗೌರವಧನದಿಂದ ಜೀವನ ನಡೆಸಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಮಂಡ್ಯ ಜಿಲ್ಲೆಯ ನಿವಿತಾ ಅವರು ಮಾತನಾಡಿ, “ಗೌರವಧನ ಮೀರಿದ ಕೆಲಸಗಳನ್ನು ಮಾಡಿಸುತ್ತಿದ್ದಾರೆ. ಕನಿಷ್ಠ ನರೇಗಾ ಕೂಲಿಯಷ್ಟಾದರೂ ಕೊಡಬೇಕು. ಟಿಎ, ಡಿಎ ಒದಗಿಸಬೇಕು” ಎಂದು ಆಗ್ರಹಿಸಿದರು.

nivita
ನಿವಿತಾ, ಮಂಡ್ಯ ಜಿಲ್ಲೆ

“ನಾವು ಅನಿರ್ದಿಷ್ಟಾವಧಿ ಧರಣಿಗೆ ಕೂತಿದ್ದೇವೆ. ನಾವೆಲ್ಲ ಗ್ರಾಮೀಣ ಭಾಗದ ಹೆಣ್ಣುಮಕ್ಕಳ ಶಕ್ತಿಯನ್ನು ತೋರಿಸುತ್ತೇವೆ. ನಾವ್ಯಾರು ಬಿಟ್ಟಿಬಿದ್ದಿಲ್ಲ. ಹೆಣ್ಣುಮಕ್ಕಳ ಅಭಿವೃದ್ಧಿ ಎಲ್ಲಿ ಆಗುತ್ತಿದೆ. ನಮ್ಮ ಜೀವಕ್ಕೆ ಹಾನಿಯಾದರೆ ಯಾರು ಹೊಣೆ? ಶಾಂತಯುತವಾಗಿ ಮೂರ್ನಾಲ್ಕು ಪ್ರತಿಭಟನೆಗಳನ್ನು ಮಾಡಿದ್ದೇವೆ. ಅದ್ಯಾವುದಕ್ಕೂ ಇವರು ಜಗ್ಗಲ್ಲ, ಬಗ್ಗಲ್ಲ. ನಾವು ಈಗ ಬಂದು ಹೋರಾಟಕ್ಕೆ ಕೂತಿದ್ದೇವೆ” ಎಂದರು.

“ನಮಗೆ ಜೀವ ಭದ್ರತೆಯನ್ನು ಕೊಡಿ. ಯಾವುದೇ ಸಂದರ್ಭದಲ್ಲಿ ಕೆಲಸ ಮಾಡಲೇಬೇಕಾದರೆ ಕನಿಷ್ಠ ವೇತನ ಪಾವತಿ ಮಾಡಿ” ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಪೌರತ್ವ ಪ್ರಮಾಣಪತ್ರ ನೀಡುವುದು ಚುನಾವಣಾ ಆಯೋಗದ ಕೆಲಸವಲ್ಲ; ಮಾಜಿ ಚುನಾವಣಾ ಆಯುಕ್ತ ಅಶೋಕ್ ಲವಾಸಾ ಹೀಗಂದಿದ್ದೇಕೆ?

ವಿಜಯಪುರ ಜಿಲ್ಲೆಯ ಹೇಮಾ ದಳವಾಯಿ ಮಾತನಾಡಿ, “ಎಲ್‌ಸಿಆರ್‌ಪಿ ಆಗಿ ದುಡಿಯುತ್ತಿರುವ ನನಗೆ 2500 ರೂ. ಬರುತ್ತಿದೆ. ನಮ್ಮ ಸೇವೆಗೆ ಸಂಜೀವಿನಿ ಎಂದು ಹೆಸರಿಡಲಾಗಿದೆ. ಇದೊಂಥರ ಗೋಮುಖ ವ್ಯಾಘ್ರದ ಸ್ಕೀಮ್ ರೀತಿ ಇದೆ. ವಸ್ತುಗಳಿಗೆ ಇರುವ ಬೆಲೆ ನಮಗೆ ಇಲ್ಲವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

hema dalavayi
ಹೇಮಾ ದಳವಾಯಿ, ವಿಜಯಪುರ ಜಿಲ್ಲೆ

“ಮಹಿಳಾ ಅಭಿವೃದ್ಧಿಗಾಗಿ ಮಾಡಿರುವ ಯೋಜನೆ ಮಹಿಳಾ ಶೋಷಣೆಯ ಅಸ್ತ್ರವಾಗಿ ಬದಲಾಗಿದೆ. ಅತ್ತೆ ಮನೆಯಲ್ಲಿ ನಡೆಯುತ್ತಿದ್ದ ಶೋಷಣೆಗಳನ್ನು ತಡೆದಿರುವ ಸರ್ಕಾರ ಅಭಿವೃದ್ಧಿ ಹೆಸರಲ್ಲಿ ನಮ್ಮ ಮೇಲೆ ಶೋಷಣೆ ಮಾಡುತ್ತಿದೆ. ಕಡಿಮೆ ಗೌರವಧನದಲ್ಲಿ ದುಡಿಸಿಕೊಳ್ಳುವುದು ಶೋಷಣೆಯಲ್ಲವೇ?” ಎಂದು ಪ್ರಶ್ನಿಸಿದರು.

ಎಂಬಿಕೆ, ಎಲ್‌ಸಿಆರ್‌ಪಿ, ಸಖಿಯರ ಮಹಾ ಒಕ್ಕೂಟದ ಅಧ್ಯಕ್ಷೆ ರುದ್ರಮ್ಮ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...