ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾಗಿದೆ.
ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ.
ಒಂದು ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನು ಸ್ಥಳಕ್ಕೆ ಡಿಸಿಪಿ ಎಸ್.ಗಿರೀಶ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸದ್ಯ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಸ್ಫೋಟಕವನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ