ಅತೀವ ಬಿಸಿಲು | ರಾಜ್ಯದ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌: ಹವಾಮಾನ ಇಲಾಖೆ

Date:

ಗ್ರಾಮೀಣ ಭಾಗದ ನಾಣ್ನುಡಿಯಂತೆ ಶಿವರಾತ್ರಿಯೊಂದಿಗೆ ಚಳಿಗಾಲ ಶಿವ ಶಿವ ಎಂದು ಹೋಗಿದೆ. ಬೇಸಿಗೆ ಕಾಲ ಆರಂಭವಾಗುತ್ತಿದೆ. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಬಿಸಿಲು ಎದುರಾಗುವುದು ನಿರೀಕ್ಷಿತ. ಅದರೆ, ಉತ್ತರ ಕರ್ನಾಟಕವನ್ನೂ ಮೀರಿ ಕರಾವಳಿ ಭಾಗದಲ್ಲಿ ಹೆಚ್ಚು ಉಷ್ಠಾಂಗ ದಾಖಲಾಗುತ್ತಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್‌’ ಘೋಷಿಸಿದೆ.

- Advertisement -

ಮಳೆಗಾಲದಲ್ಲಿ ಹೆಚ್ಚು ಮಳೆ ಬೀಳುವ ಸಮಯದಲ್ಲಿಯೇ ಹೇಗೆ ‘ಯೆಲ್ಲೋ, ಆರೆಂಜ್ ಮತ್ತು ರೆಡ್‌’ ಅಲರ್ಟ್‌ ಘೋಷಿಸಲಾಗುತ್ತದೆಯೋ, ಅಂತೆಯೇ, ಬೇಸಿಗೆ ಕಾಲದಲ್ಲೂ ಈ ಅಲರ್ಟ್‌ಗಳನ್ನು ಘೋಷಿಸಲಾಗುತ್ತದೆ. ಬೇಸಿಗೆ ಉಷ್ಠಾಂಶಕ್ಕೆ ಅನುಗುಣವಾಗಿ ಈ ಅಲರ್ಟ್‌ಗಳನ್ನು ಹವಾಮಾನ ಇಲಾಖೆ ಘೋಷಿಸುತ್ತದೆ. ಆ ಭಾಗಗಳಲ್ಲಿ ಬೇಸಿಗೆಯನ್ನು ನಿಭಾಯಿಸಲು ಜನರು ನಾನಾ ರೀತಿಯ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕರಾವಳಿ ಭಾಗದ ದಕ್ಷಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಫೆಬ್ರವರಿ 28 ಮತ್ತು ಮಾರ್ಷ್‌ 01ರಂದು ಅತ್ಯಧಿಕ ತಾಪಮಾನ ದಾಖಲಾಗಲಿದೆ ಎಂದು ಇಲಾಖೆ ಹೇಳಿದೆ.

ಸದ್ಯ, ಕರಾವಳಿ ಭಾಗದಲ್ಲಿ ಉಷ್ಣಾಂಶವು 37° ಇಂದ 38° ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನು, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ 35° ಇಂದ 38° ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಮಾನವ ದೇಹವು ಗರಿಷ್ಠ 40-50° ಸೆಲ್ಸಿಯಸ್‌ವರೆಗೆ ಉಷ್ಣಾಂಶವನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆ. ಆದಾಗ್ಯೂ, ಬೇಸಿಗೆಯಲ್ಲಿ ನಿರ್ಜಲೀಕರಣದಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳು ಹೆಚ್ಚಿರುವುದರಿಂದ ಹೆಚ್ಚು ನೀರನ್ನು ಸೇವಿಸಬೇಕು. ಜೊತೆಗೆ, ನೀರಿನಂಶ ಇರುವ ಆಹಾರ ಪದಾರ್ಥ, ಹಣ್ಣುಗಳನ್ನು ಹೆಚ್ಚಾಗಿ ಬಳಸಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....