ನಂದಿನಿ ಉತ್ಪನ್ನಗಳಿಂದ ಕ್ಯಾನ್ಸರ್‌ ಬರುವುದಾಗಿ ಅಪಪ್ರಚಾರ: ಎಫ್‌ಐಆರ್ ದಾಖಲು

Date:

ಕೆಎಂಎಫ್‌ನ ನಂದಿನಿ ಉತ್ಪನ್ನಗಳಿಂದ ಕ್ಯಾನ್ಸರ್‌ ಬರುತ್ತದೆ ಎಂದು ಡಾ.ಶರಣ್ಯ ಸಂತೋಷ್‌ ಎಂಬುವವರ ಹೇಳಿಕೆ ನೀಡಿದ್ದು, ಸದ್ಯ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ರೀತಿ ನಂದಿನಿ ಉತ್ಪನ್ನಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಯುತ್ತಿರುವ ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ.

- Advertisement -

ಈ ಬಗ್ಗೆ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ ಶಿವಸ್ವಾಮಿ ಸ್ಪಷ್ಟನೆ ನೀಡಿದ್ದು, “ಇದು ಶುದ್ಧ ಸುಳ್ಳು ಆರೋಪ. ಕೆಎಂಎಫ್‌ ಉತ್ಪನ್ನ ನೈಸರ್ಗಿಕವಾಗಿ ತಯಾರಿಸುತ್ತಿದ್ದೇವೆ. ಈವರೆಗೂ ಕೆಎಂಎಫ್ ಉತ್ಪನ್ನಗಳ ಬಗ್ಗೆ ಯಾವುದೇ ದೂರು ಬಂದಿಲ್ಲ. ಉತ್ಪನ್ನಗಳಿಗೆ ಯಾವುದೇ ರಾಸಾಯನಿಕವನ್ನು ಕೆಎಂಎಫ್‌ ಹಾಕುವುದಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ನಂದಿನಿ ಹಾಲಿನ ಉತ್ಪನ್ನಗಳ ರಾಯಭಾರಿಯಾಗಿ ನಟ ಶಿವರಾಜ್‌ ಕುಮಾರ್ ನೇಮಕ

ಹಾಗೆಯೇ ಡಾ.ಶರಣ್ಯ ಸಂತೋಷ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಕೆಎಂಎಫ್‌ ಉತ್ಪನ್ನಗಳ ಬಗ್ಗೆ ಇದೇ ರೀತಿ ಸುಳ್ಳು ಸುದ್ದಿ ಹಬ್ಬಿಸಿದ್ದರೆ ಕ್ರಮಕೈಗೊಳ್ಳಲಾಗುತ್ತದೆ. ನಂದಿನಿ ಉತ್ಪನ್ನಗಳು ಸುರಕ್ಷಿತವಾಗಿದ್ದು, ಜನರು ಆತಂಕವಿಲ್ಲದೆ ಬಳಸಬಹುದು” ಎಂದು ಬಿ ಶಿವಸ್ವಾಮಿ ಹೇಳಿದ್ದಾರೆ.

ಇನ್ನು, “ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (Food Safety and Standards Authority of India) ನಿಗದಿಪಡಿಸಿದ ಎಲ್ಲಾ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ನಂದಿನಿ ಉತ್ಪನ್ನಗಳನ್ನು ತಯಾರಿಸುವಾಗ ಕಟ್ಟುನಿಟ್ಟಾಗಿ ಪಾಲಿಸಲಾಗಿದೆ. ನಂದಿನಿ ಉತ್ಪನ್ನಗಳು ಸುರಕ್ಷಿತ ಎಂದು ನಾವು ಭರವಸೆ ನೀಡುತ್ತೇವೆ” ಎಂದು ಕರ್ನಾಟಕ ಹಾಲು ಒಕ್ಕೂಟ ಮಾಹಿತಿ ನೀಡಿದೆ.

ಪಶುಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್​, “ಕಲಬೆರಕೆ ಆಗುತ್ತಿದ್ದರೆ ಕ್ರಮಕೈಗೊಳ್ಳಲಾಗುವುದು. ಬೇರೆ ಬೇರೆ ಇಲಾಖೆ ಅಧಿಕಾರಿಗಳು ಇದರ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆ. ಆದರೆ ಅಪಪ್ರಚಾರವಾಗಬಾರದು. ಬೇರೆ ಬೇರೆ ಕಂಪನಿಯವರು ನಮ್ಮ ನಂದಿನಿಯ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...