ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

Date:

Advertisements

ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ ವಸ್ತಾರೆ ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ.

ಕಳೆದ ಕೆಲ ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬನಶಂಕರಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು.

ನಿರೂಪಕಿ, ನಟಿ ಅಪರ್ಣಾ ನಿಧನದ ಸುದ್ದಿ ಕನ್ನಡ ಚಿತ್ರರಂಗಕ್ಕೆ ದೊಡ್ಡ ಆಘಾತ ತಂದಿದೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅಪರ್ಣಾ ವಿಧಿವಶರಾಗಿದ್ದಾರೆ.

Advertisements

ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದರು. ಸಿನಿಮಾ ಮತ್ತು ಧಾರಾವಾಹಿಯಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಕಿರುತೆರೆಯ ಅನೇಕ ಕಾರ್ಯಕ್ರಮಗಳನ್ನು ಕೂಡ ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋದಲ್ಲಿ ಕನ್ನಡ ಅನೌನ್ಸ್​ಮೆಂಟ್​ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.

1984ರಲ್ಲಿ ತೆರೆಕಂಡಿದ್ದ ಪುಟ್ಟಣ್ಣ ಕಣಗಾಲ್‌ ಅವರ ‘ಮಸಣದ ಹೂವು’ ಚಿತ್ರದಲ್ಲಿ ಖ್ಯಾತ ನಟ ದಿವಂಗತ ಅಂಬರೀಶ್ ಹಾಗೂ ಜಯಂತಿಯವರ ಜೊತೆಗೆ ನಟಿಸುವ ಮೂಲಕ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ನಂತರ ‘ಇನ್ಸ್‌ಪೆಕ್ಟರ್‌ ವಿಕ್ರಮ್‌’ ಸೇರಿದಂತೆ ಹತ್ತು ಚಿತ್ರಗಳಲ್ಲಿ ನಟಿಸಿದ್ದರು. ಆ ಬಳಿಕ 1989ರಲ್ಲಿ ನಿರೂಪಕಿಯಾಗಿ ಟೆಲಿವಿಷನ್‌ ಸೇರಿದ್ದರು.

90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದವರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ. 1998ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಮೂಡಲ ಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ಕೂಡ ನಟಿಸಿ, ಖ್ಯಾತಿ ಗಳಿಸಿದ್ದರು. 2013ರಲ್ಲಿ ಬಿಗ್‌ಬಾಸ್‌ ಕನ್ನಡದ ಮೊದಲ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಕೂಡ ಭಾಗವಹಿಸಿದ್ದರು. 2015ರಲ್ಲಿ ಸೃಜನ್‌ ಲೋಕೇಶ್‌ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್‌’ ಕಾರ್ಯಕ್ರಮದಲ್ಲಿ ವರಲಕ್ಷ್ಮೀ ಪಾತ್ರ ಮಾಡುವ ಮೂಲಕ ಮನೆಮಾತಾಗಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ

“ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿ, ಟ್ವೀಟ್ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X