ವಿಜಯಪುರ | ವಿಜಯಪುರ-ಬೆಂಗಳೂರು ಹೆದ್ದಾರಿ ತಡೆದು ರೈತರ ಪ್ರತಿಭಟನೆ

Date:

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ-ಬೆಂಗಳೂರು ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದ್ದಾರೆ. ದಕ್ಷೀನ ಕರ್ನಾಟಕದ ರೈತರ ಕಾವೇರಿ ಹೋರಾಟಕ್ಕೆ ಉತ್ತರ ಕರ್ನಾಟಕದ ರೈತರು ಬೆಂಬಲ ನೀಡಿ, ರಾಜ್ಯದ ರೈತರೆಲ್ಲರೂ ಒಂದೇ ಎಂಬ ಸಂದೇಶ ಸಾರಿದ್ದಾರೆ. ಅಲ್ಲದೆ, ತಮ್ಮ ಹೋರಾಟಗಳಿಗೆ ದಕ್ಷಿಣದ ರೈತರೂ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ.

ಮುಂಬರುವ ಲೋಕಸಭಾ ಚುನಾವಣಾ ದೃಷ್ಟಿಯಿಂದ ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಧಿಕ್ಕಾರ. ಮೊದಲು ನಮ್ಮ ರಾಜ್ಯದ ರೈತರು ಉಳಿಯಲಿ ನಂತರ ಜನ, ಜಾನುವಾರಗಳಿಗೆ ನೀರು ಸಿಕ್ಕು, ಉಳಿದರೆ ನಂತರ ಬೇರೆಯವರೆಗೆ ನೀರು ಬೀಡುವಂತೆ ರೈತರು ಆಗ್ರಹಿಸಿದರು.

ಈ ವೇಳೆ ಸ್ಥಳದಲ್ಲಿ ಜಿಲ್ಲಾಧ್ಯಕ್ಷ ಸಂಗಮೇಶ  ಸಗರ, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ, ಕೊಲಾರ ಅಧ್ಯಕ್ಷ ಸೋಮು ಬಿರಾದಾರ, ತಾಳಿಕೊಟಿ ಅಧ್ಯಕ್ಷ  ಶ್ರೀಶೈಲ ವಾಲಿಕಾರ, ಆಲಮೆಲ್ ಅಧ್ಯಕ್ಷ ಈರಣ್ಣ ಕಲ್ಲೂರು, ಬಾಷಾ ಮನಗೂಳಿ, ಹಣಮಂತ ಬ್ಯಾಡಗಿ, ನಜೀರ ನಂದರಗಿ, ಶಾನೂರ ನಂದರಗಿ, ರೇಖಾ ಪಾಟೀಲ, ವಿಜಯಲಕ್ಷ್ಮಿ ಗಾಯಕವಾಡ, ವಿರೇಶ ಗೊಬ್ಬುರ, ಪ್ರತಾಪ ನಾಗರಗೋಜಿ, ಅರುಣಗೌಡ ತೇರದಾಳ, ಮಹಾದೇವಪ್ಪ ತೇಲಿ, ರಾಮನಗೌಡ ಪಾಟೀಲ, ಕಲ್ಲಪ್ಪಣ್ಣ ಪಾರಶೆಟ್ಟಿ, ಶಫೀಕ ದಫೇದಾರ ಸೇರಿದಂತೆ ಅನೇಕ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು .

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚರ್ಚೆಗೆ ಸಿದ್ದ ಇದ್ದೇನೆ ಬನ್ನಿ; ಡಿಕೆ ಶಿವಕುಮಾರ್‌ಗೆ ಕುಮಾರಸ್ವಾಮಿ ಪ್ರತಿ ಸವಾಲು

"ಮಿಸ್ಟರ್​ ಕುಮಾರಸ್ವಾಮಿ, ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ​. ಚರ್ಚೆ ಮಾಡಲು ಸದನಕ್ಕೆ...

ಯಾರಿಗೂ ಮುಖ ತೋರಿಸದ ಸನ್ನಿವೇಶ ಕುಮಾರಸ್ವಾಮಿಗೆ ನಿರ್ಮಾಣವಾಗಲಿದೆ: ಡಿಕೆ ಶಿವಕುಮಾರ್‌

ಕುಮಾರಸ್ವಾಮಿ ಅವರು ನನ್ನ ಮೇಲೆ ಮನಬಂದಂತೆ ಆರೋಪಿಸುವುದನ್ನು ನೋಡಿಯೂ ನಮ್ಮ ಸಮುದಾಯಕ್ಕಾಗಿ...

ಚಿತ್ರದುರ್ಗ | ನೀತಿ ಸಂಹಿತೆ ನೆಪದಲ್ಲಿ ನೀಲಿ ಬಾವುಟ ತೆರವು; ಕೇಸರಿ ಬಿಟ್ಟಿದ್ದೇಕೆ ಎಂದಾಗ ರಾತ್ರೋರಾತ್ರಿ ಮರುಸ್ಥಾಪನೆ

ಆರಂಭದಲ್ಲಿ ನೆಪ ಹೇಳುತ್ತಿದ್ದ ಪಿಡಿಓಗೆ, ಜನರ ಜೈಭೀಮ್ ಘೋಷಣೆಗಳು ಅಪ್ಪಳಿಸಿದವು... ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿಯಂದು...

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ...