ಮಗುವಿನ ಜವಾಬ್ದಾರಿ ಹೊರದ ತಂದೆಗೆ ಭೇಟಿಯ ಹಕ್ಕಿಲ್ಲ: ಕರ್ನಾಟಕ ಹೈಕೋರ್ಟ್

Date:

ಮಗುವಿನ ಆರ್ಥಿಕ ಮತ್ತು ಭಾವನಾತ್ಮಕ ಜವಾಬ್ದಾರಿಗಳನ್ನು ನಿರ್ವಹಿಸಲು ನಿರಾಕರಿಸುವ ಅಥವಾ ನಿರ್ಲಕ್ಷಿಸುವ ತಂದೆಗೆ, ಆ ಮಗುವನ್ನು ಭೇಟಿ ಮಾಡುವ ಯಾವುದೇ ನೈತಿಕ ಅಥವಾ ಕಾನೂನುಬದ್ಧ ಹಕ್ಕಿರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಮಗುವಿನ ಲಾಲನೆ-ಪಾಲನೆಯಲ್ಲಿ ಆಸಕ್ತಿ ತೋರದ ಮತ್ತು ಕರ್ತವ್ಯದಿಂದ ನುಣುಚಿಕೊಳ್ಳುವ ತಂದೆ, ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಹಕ್ಕು ಮಂಡಿಸುವುದು ಸರಿಯಲ್ಲ ಎಂದು ನ್ಯಾಯಮೂರ್ತಿ ಪಿ. ಶ್ರೀಸುಧಾ ಅವರಿದ್ದ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

- Advertisement -

ಬೆಂಗಳೂರಿನ ಶಾಂತಿ ನಗರದ ಮಹಿಳೆ ಮತ್ತು ರಾಜಾಜಿನಗರದ ವ್ಯಕ್ತಿಯ ವಿವಾಹವು ಕೌಟುಂಬಿಕ ಕಲಹಗಳ ಕಾರಣದಿಂದಾಗಿ ಮುರಿದುಬಿದ್ದಿತ್ತು. ಈ ದಂಪತಿಯ ವಿವಾಹವು 2024ರ ಸೆಪ್ಟೆಂಬರ್ 24ರಂದು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ಮೂಲಕ ಕಾನೂನುಬದ್ಧವಾಗಿ ಅನೂರ್ಜಿತಗೊಂಡಿತ್ತು. ಈ ಸಂದರ್ಭದಲ್ಲಿ ಮಾಡಿಕೊಂಡ ಒಪ್ಪಂದದ ಪ್ರಕಾರ, 5 ವರ್ಷದ ಮಗುವಿನ ಸಂಪೂರ್ಣ ಪಾಲನೆಯ ಜವಾಬ್ದಾರಿಯನ್ನು ತಾಯಿಗೆ ನೀಡಲಾಗಿತ್ತು. ಅಷ್ಟೇ ಅಲ್ಲದೆ, ತಂದೆಯು ಸ್ವಇಚ್ಛೆಯಿಂದ ಲಿಖಿತ ಒಪ್ಪಂದದ ಮೂಲಕ ಮಗುವನ್ನು ಭೇಟಿ ಮಾಡುವ ತನ್ನ ಎಲ್ಲಾ ಹಕ್ಕುಗಳನ್ನು ತ್ಯಜಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಹೀಗಿದ್ದರೂ, 2026ರ ಜನವರಿ 30ರಂದು ಕೌಟುಂಬಿಕ ನ್ಯಾಯಾಲಯವು ತನ್ನ ಹಿಂದಿನ ಒಪ್ಪಂದವನ್ನು ಕಡೆಗಣಿಸಿ, ಮಗುವನ್ನು ಭೇಟಿ ಮಾಡಲು ತಂದೆಗೆ ಅವಕಾಶ ಕಲ್ಪಿಸಿತ್ತು. ಇದನ್ನು ಪ್ರಶ್ನಿಸಿ ಮಗುವಿನ ತಾಯಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, “ಮಗುವಿನ ಜನನದಿಂದಲೂ ತಂದೆ ಯಾವುದೇ ಆರ್ಥಿಕ ಅಥವಾ ಭಾವನಾತ್ಮಕ ಬೆಂಬಲ ನೀಡಿಲ್ಲ, ಜೊತೆಗೆ ಮರುಮದುವೆಯಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮಗುವಿನ ಜೀವನದಲ್ಲಿ ಮತ್ತೆ ಮಧ್ಯಪ್ರವೇಶಿಸಲು ಅವರಿಗೆ ಅವಕಾಶ ನೀಡಲಾಗದು” ಎಂದು ತಿಳಿಸಿದೆ.

ಇದನ್ನೂ ಓದಿ: ಆರ್‌ಜಿ ಕರ್ ನಂತರವೂ ಬದಲಾಗದ ಬಂಗಾಳದ ಚಿತ್ರಣ; ಅನ್ಯಾಯದ ಹತ್ಯೆಗಳಿಗೆ ಹೊಣೆ ಯಾರು?

ತಾಯಿ ಎಂದಿಗೂ ಜೀವನಾಂಶದ ಬೇಡಿಕೆ ಇಟ್ಟಿಲ್ಲ ಎಂಬ ಅಂಶವನ್ನು ಗಮನಿಸಿದ ನ್ಯಾಯಪೀಠ, ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ. ನೋಟಿಸ್ ಜಾರಿ ಮಾಡಿದರೂ ನ್ಯಾಯಾಲಯಕ್ಕೆ ಹಾಜರಾಗದ ತಂದೆಯ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ತಾಯಿಯ ಅರ್ಜಿಯನ್ನು ಪುರಸ್ಕರಿಸಿ ತಂದೆಗೆ ಮಗುವನ್ನು ಭೇಟಿ ಮಾಡುವ ಹಕ್ಕಿಲ್ಲ ಎಂದು ತೀರ್ಪು ನೀಡಿದೆ. ಈ ತೀರ್ಪು ಪಾಲನೆಯ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವ ಪೋಷಕರಿಗೆ ದೊಡ್ಡ ಎಚ್ಚರಿಕೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಪ್ರೀಂ ಕೋರ್ಟ್‌ನ ಕ್ಷಮಿಸುವ ಗುಣದಿಂದ ದೇಶದಲ್ಲಿ ಅಪರಾಧ ಕೃತ್ಯ ಹೆಚ್ಚಳ: ಜಸ್ಟಿಸ್ ದೀಪಾಂಕರ್ ದತ್ತಾ

ಸುಪ್ರೀಂ ಕೋರ್ಟ್‌ನ ಕ್ಷಮಿಸುವ ಮತ್ತು ದಯೆ ತೋರುವ ಪ್ರವೃತ್ತಿಯಿಂದಾಗಿಯೇ ಇಂದು ದೇಶದಲ್ಲಿ...

ಅನರ್ಹತೆ ನೋಟಿಸ್: ಲೋಕಸಭಾ ಸ್ಪೀಕರ್ ಬಳಿ ಮತ್ತೆ 15 ದಿನ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು

ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...