ಸರ್ಕಾರ ತಪ್ಪು ಮಾಡಿದರೆ ಮುಲಾಜಿಲ್ಲದೆ ಬರೆಯಿರಿ: ಸಿಎಂ ಸಿದ್ದರಾಮಯ್ಯ

Date:

  • ಕಾಗೆ ಚರ್ಚೆಗಳಿಂದ ಜನರಿಗೆ ಏನು ಪ್ರಯೋಜನ: ಸಿಎಂ ಪ್ರಶ್ನೆ
  • ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡುವುದು ಬಿಡಿ

ಕಾಗೆ ಚರ್ಚೆಗಳಿಂದ, ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಂದ ಜನರಿಗೆ ಏನು ಪ್ರಯೋಜನ? ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

- Advertisement -

ಮಂಡ್ಯದ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡುತ್ತಿದೆಯೋ ಇಲ್ಲವೋ ಎನ್ನುವುದನ್ನೂ ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡುತ್ತಾರೆ. ಇದು ತಪ್ಪು” ಎಂದರು.

“ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ರು. ಆದರೆ ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂತಹ ಮೌಢ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್‌ಗಳು ಮಾಡಬಾರದು” ಎಂದರು.

ವಾಕ್ ಸ್ವಾತಂತ್ರ್ಯ ಘನತೆಯಿಂದ ಬಳಸಿ

“ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ. ಸರ್ಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿ” ಎಂದು ಸಲಹೆ ನೀಡಿದರು.

ನಿರ್ಮಲಾನಂದ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು. ಕೃಷಿ ಸಚಿವ ಚಲುವರಾಯಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಶಾಸಕರಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರ ಸ್ವಾಮಿ ಹಾಗೂ ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...