ಭ್ರೂಣ ಲಿಂಗ ಪತ್ತೆ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ ಬಹುಮಾನ ಘೋಷಣೆ

Date:

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಗಳ ಸುಳಿವನ್ನು ಸರ್ಕಾರಕ್ಕೆ ನೀಡಿದರವರಿಗೆ ಆರೋಗ್ಯ ಇಲಾಖೆಯು ಒಂದು ಲಕ್ಷ ರೂಪಾಯಿ ಬಹುಮಾನವನ್ನು ನೀಡಲಿದೆ. ಈ ಹಿಂದೆ 50 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತಿತ್ತು. ಆದರೆ ಈಗ ಈ ಮೊತ್ತವನ್ನು ಒಂದು ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.

- Advertisement -

ರಾಜ್ಯದಲ್ಲಿ ಕಳೆದ ಕೆಲವು ವರ್ಷಗಳಿಂದ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅದರಲ್ಲೂ ಮುಖ್ಯವಾಗಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಅಧಿಕವಾಗಿದೆ. ಈ ಭ್ರೂಣ ಲಿಂಗ ಪತ್ತೆ ಮಾಡುವುದು ಮತ್ತು ಹತ್ಯೆ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಈ ಯೋಜನೆಯನ್ನು ರೂಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಮಾಡಲಾಗುತ್ತಿದ್ದರೆ ಇದರ ಬಗ್ಗೆ ಜನರು ಇಲಾಖೆಗೆ ಸುಳಿವು ನೀಡಬಹುದು. ಸುಳಿವು ನೀಡಿದವರಿಗೆ ಬರೋಬ್ಬರಿ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ. ಹಾಗೆಯೇ ಸುಳಿವು ನೀಡಿದವರ ಮಾಹಿತಿಯೂ ಕೂಡಾ ಗೌಪ್ಯವಾಗಿರಿಸಲಾಗುತ್ತದೆ ಎಂದು ಈ ಹಿಂದೆಯೇ ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನು ಓದಿದ್ದೀರಾ?  ಬೆಂಗಳೂರು | ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಸಿಕ್ಕಿದ್ದ ಹೆಣ್ಣು ಭ್ರೂಣದ ತಾಯಿ ಪತ್ತೆ

ಇನ್ನು ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ (ಪಿಪಿಪಿಎನ್‌ಡಿಟಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗುಪ್ತ ಕಾರ್ಯಾಚರಣೆಯು ಯಶಸ್ವಿಯಾದರೆ ಈ ಬಗ್ಗೆ ಮಾಹಿತಿ ನೀಡಿದವರಿಗೆ ಈ ಬಹುಮಾನವನ್ನು ನೀಡಲಾಗುತ್ತದೆ.

ಒಟ್ಟು ಒಂದು ಲಕ್ಷ ರೂಪಾಯಿ ಬಹುಮಾನದಲ್ಲಿ 50 ಸಾವಿ ರೂಪಾಯಿಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಮತ್ತು ಇನ್ನುಳಿದ 50 ಸಾವಿರ ರೂಪಾಯಿ ಮೊತ್ತವನ್ನು ಆಯಾ ಜಿಲ್ಲೆಗಳಲ್ಲಿ ಸಂಗ್ರಹವಾಗಿರುವ ಪಿಪಿಪಿಎನ್‌ಡಿಟಿ ಶುಲ್ಕದಿಂದ ಭರಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಮಂಡ್ಯ | ಇನ್ನೂ ನಿಂತಿಲ್ಲ ಭ್ರೂಣಲಿಂಗ ಪತ್ತೆ; ದಂಧೆ ನಡೆಸುತ್ತಿದ್ದ ಮೂವರ ಬಂಧನ

ಎರಡು ವರ್ಷದಲ್ಲಿ ಸುಮಾರು 900 ಹೆಣ್ಣು ಭ್ರೂಣ ಹತ್ಯೆ ಮಾಡಿದ್ದ ತಂಡವೊಂದನ್ನು ಕಳೆದ ಅಕ್ಟೋಬರ್​ನಲ್ಲಿ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದರು. ಶಿವಲಿಂಗೇಗೌಡ, ನಯನ್ ಕುಮಾರ್, ನವೀನ್ ಕುಮಾರ್, ವಿರೇಶ್ ಎಂಬ ನಾಲ್ವರನ್ನು ಬಂಧಿಸಲಾಗಿದೆ.

ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಬಳಿ ಇರುವ ಆಲೆಮನೆಯಲ್ಲಿ ಕೂಡ ಭ್ರೂಣ ಲಿಂಗ ಪತ್ತೆ ಸ್ಕ್ಯಾನಿಂಗ್ ಮಾಡುವುದು ಬೆಳಕಿಗೆ ಬಂದಿತ್ತು. ಇತ್ತೀಚೆಗೆ ಬೆಳಗಾವಿಯಲ್ಲಿ ಕೂಡ ಮಕ್ಕಳ ಮಾರಾಟ ಮತ್ತು ಭ್ರೂಣ ಹತ್ಯೆ ಮಾಡುತ್ತಿದ್ದ ನಕಲಿ ವೈದ್ಯನನ್ನು ಪೊಲೀಸರು ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....