ಶಿಗ್ಗಾವಿ, ಹಾನಗಲ್, ಬ್ಯಾಡಗಿ ತಾಲೂಕು ಬರ ಘೋಷಣೆ ಮಾಡದಿದ್ದರೆ ಹೋರಾಟ: ಬೊಮ್ಮಾಯಿ

Date:

  • ಬಾಯಿ ಮಾತಲ್ಲಿ ಬರ ನಿರ್ವಹಣೆ ಸಾಧ್ಯವಿಲ್ಲ, ತಕ್ಷಣ ಪರಿಹಾರ ನೀಡಿ
  • ಬರ ಪೀಡಿತ ತಾಲೂಕು ಘೋಷಣೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ 

ರಾಜ್ಯ ಸರ್ಕಾರ ಬಾಯಿ ಮಾತಲ್ಲಿ ಬರ ಪರಿಹಾರ ಮಾಡುತ್ತೇವೆ ಎಂದರೆ ಸಾಲದು, ತಕ್ಷಣ ರೈತರಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

- Advertisement -

ಶಿಗ್ಗಾವಿಯಲ್ಲಿ ಶನಿವಾರ ಶಿಗ್ಗಾವಿ ತಾಲೂಕನ್ನು ಬರ ಪೀಡಿತ ತಾಲೂಕು ಎಂದು ಘೋಷಣೆ ಮಾಡುವಂತೆ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಸರಕಾರ ಬರ ಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲು ನಿರಂತರ ವಿಳಂಬ ಮಾಡುತ್ತ, ಸೆಪ್ಟಂಬರ್ ನಲ್ಲಿ 195 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

“ಹಾವೇರಿ ಜಿಲ್ಲೆಯ ಶಿಗ್ಗಾವಿ, ಹಾನಗಲ್, ಬ್ಯಾಡಗಿ ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದು, ಸೋಮವಾರ ಬರ ತಾಲೂಕುಗಳೆಂದು ಘೋಷಣೆ ಮಾಡದಿದ್ದರೆ ರೈತರ ಜೊತೆ ಹೋರಾಟ ನಡೆಸಲಾಗುವುದು. ಈಗಾಗಲೇ ಕಂದಾಯ ಸಚಿವರೊಂದಿಗೆ ಮಾತನಾಡಿದ್ದು, ಅವರು ಮಾನದಂಡಗಳನ್ನು ನೋಡಿ ಈ ತಿಂಗಳಾಂತ್ಯಕ್ಕೆ ಘೋಷಣೆ ಮಾಡುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದರು.

“ಬಿತ್ತಿದ ಬೆಳೆ ಬಾರದಿರುವುದು, ನೀರಿಲ್ಲದಿರುವುದನ್ನು ನೋಡಿ ಬರ ತಾಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬರ ತಾಲೂಕುಗಳೆಂದು ಘೋಷಣೆ ಮಾಡುವ ವಿಶ್ವಾಸ ಇದೆ. ಒಂದು ವೇಳೆ ಸರ್ಕಾರ ಸ್ಪಂದಿಸದಿದ್ಧರೆ, ರೈತರೊಂದಿಗೆ ಸೇರಿ ಸೋಮವಾರದ ನಂತರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಗುಜರಾತನ್ನು ಮೆರೆಸಲು ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಮುಳುಗಿಸಿತೇ ಬಿಸಿಸಿಐ?

ತಕ್ಷಣ ಪರಿಹಾರ ನೀಡಿ

“ಕೇವಲ ಮಾತಿನಿಂದ ಬರ ಪರಿಹಾರ ಮಾಡಲು ಸಾಧ್ಯವಿಲ್ಲ.‌ ಕೇಂದ್ರ ಸರ್ಕಾರ ಈಗಾಗಲೇ ಮೊದಲ ಕಂತಿನಲ್ಲಿ 250 ಕೋಟಿ ರೂ. ಬಿಡುಗಡೆ ಮಾಡಿದೆ. ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಯಲ್ಲಿ ಹದಿನೈದು ಇಪ್ಪತ್ತು ಕೋಟಿ ರೂಪಾಯಿ ಹಣ ಇದೆ. ಸರ್ಕಾರ ಮನಸು ಮಾಡಿದರೆ ಮೊದಲು ರೈತರಿಗೆ ಬೆಳೆ ಪರಿಹಾರ ನೀಡಬೇಕು. ರೈತರು ಈಗಾಗಲೇ ಎರಡು ಬಾರಿ ಬಿತ್ತನೆ ಮಾಡಿ ನಷ್ಟ ಅನುಭವಿಸಿದ್ದಾರೆ” ಎಂದರು.

“ನಾವು ಅಧಿಕಾರ ನಡೆಸಿದಾಗ ಪ್ರವಾಹ ಬಂದಿತ್ತು. ಆಗ ನಾವು ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡಿ ತೋರಿಸಲಿಲ್ಲ. ತಕ್ಷಣ 2500 ಕೋಟಿ ಪರಿ ಹಾರ ಬಿಡುಗಡೆ ಮಾಡಿ ಒಂದು ತಿಂಗಳಲ್ಲಿ ವಿತರಣೆ ಮಾಡಿದ್ದೆವು. ಕೇಂದ್ರದ ಮಾನದಂಡಗಳ ಪ್ರಕಾರ ಒಣ ಬೇಸಾಯಕ್ಕೆ 6 ಸಾವಿರ ರೂ. ಪರಿಹಾರ ಕೊಡುತ್ತಾರೆ. ನಾವು 13 ಸಾವಿರ ಪರಿಹಾರ ಕೊಟ್ಟಿದ್ದೆವು. ನೀರಾವರಿಗೆ 13 ಸಾವಿರ ಇತ್ತು ನಾವು 25 ಸಾವಿರ ಕೊಟ್ಟೆವು. ತೋಟಗಾರಿಕೆಗೆ 18 ಸಾವಿರ ಇತ್ತು ನಾವು 28 ಸಾವಿರ ಪರಿಹಾರ ಕೊಟ್ಟಿದ್ದೆವು. ಇದಕ್ಕೆ ಯಾವುದೇ ಮಾನದಂಡ ಅಡ್ಡಿ ಬರಲಿಲ್ಲ. ಪರಿಹಾರ ನೀಡಬೇಕು ಎನ್ನುವ ಮನಸ್ಸು ಇರಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಉಮರ್ ಖಾಲಿದ್ ರಾಷ್ಟ್ರೀಯವಾದಿ’ ಹೇಳಿಕೆ: ಬಿ ಕೆ ಹರಿಪ್ರಸಾದ್ ವಿರುದ್ಧ ದೂರು

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿ ಜೈಲಿನಲ್ಲಿರುವ ಉಮರ್ ಖಾಲಿದ್...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಕರ್ನಾಟಕ SIR: ಹಿರಿಯರು, ಅನಾರೋಗ್ಯ ಪೀಡಿತರಿಗೆ ಮನೆಬಾಗಿಲಲ್ಲೇ ಪರಿಶೀಲನೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಣೆಗೆ ಹಾಜರಾಗಲು ಸೂಚನೆ...