ಬಿ.ಇಡಿ ದಾಖಲಾತಿ ಪ್ರಕ್ರಿಯೆಗೆ ಅಂತಿಮ ಅವಕಾಶ; ನ. 15ರೊಳಗೆ ದಾಖಲೆ ಪರಿಶೀಲನೆ ಕಡ್ಡಾಯ

Date:

2025ನೇ ಸಾಲಿನ ಬಿ.ಇಡಿ ದಾಖಲಾತಿ ಸಂಬಂಧ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆ ಅಂತಿಮ ಅವಕಾಶ ನೀಡಿದೆ. ಅಕ್ಟೋಬರ್ 3ರಿಂದ ನವೆಂಬರ್ 3ರವರೆಗೆ ಅರ್ಜಿ ಸಲ್ಲಿಸುವ ಹಾಗೂ ದಾಖಲೆ ಪರಿಶೀಲನೆಗೆ ಅವಕಾಶ ನೀಡಲಾಗಿದ್ದರೂ, ಹಲವು ಅಭ್ಯರ್ಥಿಗಳು ನೋಡಲ್ ಕೇಂದ್ರಗಳಲ್ಲಿ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳದೆ ಉಳಿದಿದ್ದಾರೆ. ಹೀಗಾಗಿ ಅಂತಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಅವಕಾಶ ಮಾಡಿಕೊಡಲಾಗಿದೆ.

- Advertisement -

ಒಟ್ಟು 28,976 ಅರ್ಹ ಹಾಗೂ 6,793 ಆಕ್ಷೇಪಿತ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ (https://schooleducation.karnataka.gov.in/)ನಲ್ಲಿ ಪ್ರಕಟಿಸಲಾಗಿದೆ. ಇವರಲ್ಲಿ 6,174 ಮಂದಿ ಅಭ್ಯರ್ಥಿಗಳು ಪತ್ರಿಕಾ ಪ್ರಕಟಣೆ ಹಾಗೂ ಫೋನ್ ಮೂಲಕ ನೀಡಿದ ಸೂಚನೆಗಳ ಬಳಿಕವೂ ದಾಖಲೆ ಪರಿಶೀಲನೆ ಮಾಡಿಸಿಕೊಂಡಿಲ್ಲ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಈ ಹಿನ್ನೆಲೆಯಲ್ಲಿ, ಇಲಾಖೆ ಈ ಅಭ್ಯರ್ಥಿಗಳಿಗೆ ನವೆಂಬರ್ 15ರೊಳಗೆ ತಮ್ಮ ನೋಡಲ್ ಕೇಂದ್ರಕ್ಕೆ ಮೂಲ ದಾಖಲೆಗಳೊಂದಿಗೆ ಹಾಜರಾಗಿ ಪರಿಶೀಲನೆ ಮಾಡಿಸಿಕೊಳ್ಳುವಂತೆ ಅಂತಿಮ ಅವಕಾಶ ನೀಡಿದೆ. ದಿನಾಂಕದ ನಂತರ ಯಾವುದೇ ತಿದ್ದುಪಡಿ ಅಥವಾ ದಾಖಲೆ ಪರಿಶೀಲನೆ ಮಾಡಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅದೇ ರೀತಿ, ಈಗಾಗಲೇ ಕಾಲೇಜು ಆಯ್ಕೆ ಮಾಡಿದ ಅಭ್ಯರ್ಥಿಗಳು ಅದರಲ್ಲಿ ಬದಲಾವಣೆ ಬಯಸಿದರೆ, ಆನ್‌ಲೈನ್ ಮೂಲಕ ಲಾಗಿನ್ ಆಗಿ ನವೆಂಬರ್ 15ರೊಳಗೆ ಬದಲಾವಣೆ ಮಾಡಿಕೊಳ್ಳಬಹುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಮೋದಿಯಡಿ ದೇಶ ಸುರಕ್ಷಿತವೆಂಬ ಸುಳ್ಳುಗುಳ್ಳೆಯ ಒಡೆದ ಸ್ಫೋಟ

ಮೂಲ ದಾಖಲೆ ಪರಿಶೀಲನೆ ಮಾಡಿಸದ ಹಾಗೂ ತಿದ್ದುಪಡಿ ಮಾಡಿಸದ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಯಿಂದ ಕೈಬಿಟ್ಟು ಉಳಿದವರ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿ ತಯಾರಿಸಿ ಕಾಲೇಜು ಹಂಚಿಕೆ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಫಾರ್ಮ್‌-7 ವಿವಾದ | ಆರೋಪಿಗಳ ರಕ್ಷಣೆಗೆ ನಿಂತರೇ ಎಚ್‌ಡಿಕೆ?

ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ...

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...

SIR | ‘ಫಾರ್ಮ್-7’ ಅಕ್ರಮ: ಕರ್ನಾಟಕದಲ್ಲಿ ಬಿಜೆಪಿ ಎಲ್ಲೆಲ್ಲಿ ಏನೇನು ಮಾಡಿತು? ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...