ಸರ್ಕಾರಿ ಹುದ್ದೆಗಾಗಿ ನಿರಂತರ ಅಭ್ಯಾಸ ಮಾಡುತ್ತಿದ್ದ ಅಭ್ಯರ್ಥಿಗಳಿಗೆ ಆರ್ಥಿಕ ಇಲಾಖೆ ಗುಡ್‌ನ್ಯೂಸ್ ನೀಡಿದೆ. ಪೊಲೀಸ್ ಇಲಾಖೆಯ 4,115 ಪೊಲೀಸ್ ಹುದ್ದೆಗಳಿಗೆ ನೇಮಕಾತಿ ನಡೆಸಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಶೀಘ್ರದಲ್ಲೇ, ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.
ಕಳೆದ 2 ವರ್ಷಗಳಲ್ಲಿ ಭರ್ತಿಯಾಗದೆ ಉಳಿದಿದ್ದ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅನುಮೋದನೆ ದೊರೆತಿರುವ 4,115 ಹುದ್ದೆಗಳಲ್ಲಿ 3,500 ಪೊಲೀಸ್ ಕಾನ್‌ಸ್ಟೆಬಲ್, 615 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಅನುಮೋದಿತ ಹುದ್ದೆಗಳ ಪೈಕಿ, 2,000 ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ (ಸಿಎಆರ್/ಡಿಎಆರ್) ಹುದ್ದೆಗಳು, 1,500 ವಿಶೇಷ ಮೀಸಲು ಪೊಲೀಸ್ ಕಾನ್‌ಸ್ಟೆಬಲ್ (ಕೆಎಸ್‌ಆರ್‌ಪಿ) ಹುದ್ದೆಗಳು ಹಾಗೂ 615 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿವೆ.
ಈ ಹುದ್ದೆಗಳ ನೇಮಕಾತಿಗೆ ಇನ್ನು ಮೂರು ತಿಂಗಳ ಒಳಗಾಗಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಸಿಎಆರ್/ಡಿಎಆರ್ ಹಾಗೂ ಕೆಎಸ್‌ಆರ್‌ಪಿ ಹುದ್ದೆಗಳಿಗೆ ವಿದ್ಯಾರ್ಹತೆಯು ಎಸ್‌ಎಸ್‌ಎಲ್‌ಸಿ ಮತ್ತು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಯಾವುದಾದರೂ ಪದವಿ ಪಡೆದಿರಬೇಕು.
ಅಲ್ಲದೆ, ಸಿಎಆರ್/ಡಿಎಆರ್ ಹಾಗೂ ಕೆಎಸ್‌ಆರ್‌ಪಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಮತ್ತು 25 ವರ್ಷ ಮೀರಿರಬಾರದು. ಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳಿಗೆ 2 ವರ್ಷ ವಯೋಮಿತಿ ಸಡಿಲಿಕೆ ಇದ್ದು, 27 ವರ್ಷ ವಯಸ್ಸಿನ ಒಳಗಿನವರು ಅರ್ಜಿ ಸಲ್ಲಿಸಬಹುದು. ಜೊತೆಗೆ, ಬುಡಕಟ್ಟು ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷದವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
Sports
Reading
Rating