ಸಕಾಲ ಸೇವೆ ವಿಳಂಬವಾದರೆ ಅಧಿಕಾರಿಗಳಿಗೆ ಫೈನ್: ಹುಸಿ ದೂರು ನೀಡಿದರೆ ನಾಗರಿಕರಿಗೂ ಕಾದಿದೆ ದಂಡ!

Date:

ರಾಜ್ಯದಲ್ಲಿ ನಾಗರಿಕರಿಗೆ ಸಕಾಲದಲ್ಲಿ ಸರ್ಕಾರಿ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ‘ಕರ್ನಾಟಕ ಸಕಾಲ ಸೇವೆಗಳ (ತಿದ್ದುಪಡಿ) ಅಧಿನಿಯಮ, 2026’ ಕಾಯ್ದೆಯಡಿ, ಸೇವೆಗಳನ್ನು ವಿಳಂಬಗೊಳಿಸುವ ಅಧಿಕಾರಿಗಳಿಗೆ ವಿಧಿಸುವ ಪರಿಹಾರ ವೆಚ್ಚ ಮತ್ತು ದುರುದ್ದೇಶಪೂರಿತ ದೂರು ಸಲ್ಲಿಸುವ ನಾಗರಿಕರಿಗೆ ವಿಧಿಸುವ ದಂಡದ ಮೊತ್ತವನ್ನು ಪರಿಷ್ಕರಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ನೂತನ ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.

- Advertisement -

ಸಾರ್ವಜನಿಕರಿಗೆ ನಿಗದಿತ ಸಮಯದೊಳಗೆ ಸೇವೆಗಳನ್ನು ಒದಗಿಸಲು ಅಥವಾ ಮೇಲ್ಮನವಿಗಳನ್ನು ವಿಲೇವಾರಿ ಮಾಡಲು ವಿಫಲರಾಗುವ ಸಕ್ಷಮ ಪ್ರಾಧಿಕಾರಿ, ಹೆಸರಿಸಲಾದ ಅಧಿಕಾರಿ ಅಥವಾ ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಗಳಿಂದ ಈ ಪರಿಹಾರ ವೆಚ್ಚವನ್ನು ವಸೂಲಿ ಮಾಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

​ವಿಳಂಬದ ಅವಧಿಗೆ ಅನುಗುಣವಾಗಿ ದಂಡದ ದರಗಳ ಪರಿಷ್ಕರಣೆ:

​ಮೊದಲ 1ರಿಂದ 5 ದಿನಗಳ ವಿಳಂಬಕ್ಕೆ ದಿನಕ್ಕೆ ರೂ. 20 ರಂತೆ ಗರಿಷ್ಠ ರೂ.100 ಪರಿಹಾರ.
​6 ರಿಂದ 10 ದಿನಗಳ ವಿಳಂಬಕ್ಕೆ ದಿನಕ್ಕೆ ರೂ. 40 ರಂತೆ ಗರಿಷ್ಠ ರೂ. 300 ಪರಿಹಾರ.
​11 ರಿಂದ 15 ದಿನಗಳ ವಿಳಂಬಕ್ಕೆ ದಿನಕ್ಕೆ ರೂ. 60 ರಂತೆ ಗರಿಷ್ಠ ರೂ. 600 ಪರಿಹಾರ.
​16 ರಿಂದ 20 ದಿನಗಳ ವಿಳಂಬಕ್ಕೆ ದಿನಕ್ಕೆ ರೂ. 80 ರಂತೆ ಗರಿಷ್ಠ ರೂ. 1,000 ಪರಿಹಾರ.
​21 ರಿಂದ 25 ದಿನಗಳ ವಿಳಂಬಕ್ಕೆ ದಿನಕ್ಕೆ ರೂ.100 ರಂತೆ ಒಟ್ಟಾರೆಯಾಗಿ ಗರಿಷ್ಠ ರೂ1,500 ಪರಿಹಾರ ವೆಚ್ಚವನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ರಾಯಚೂರು | ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಹರಿಸದ ಅಧಿಕಾರಿಗಳ ವಿರುದ್ಧ ಅ.2ರಂದು ರೈತರಿಂದ ಮುತ್ತಿಗೆ

​ಅಲ್ಲದೆ, ಸೇವೆಗಳನ್ನು ಸರಿಯಾಗಿ ನೀಡದೆ ಲೋಪದೋಷಗಳಿದ್ದರೆ ಅಥವಾ ಅರ್ಜಿಗಳನ್ನು ಸೂಕ್ತ ಕಾರಣವಿಲ್ಲದೆ ತಪ್ಪಾಗಿ ತಿರಸ್ಕರಿಸಿದ್ದರೆ (Deficient Services/Wrongful Rejections), ನಾಗರಿಕರಿಗೆ ಗರಿಷ್ಠ ರೂ. 1,500 ಪರಿಹಾರವನ್ನು ಸಂಬಂಧಪಟ್ಟ ಅಧಿಕಾರಿಯಿಂದ ವಸೂಲಿ ಮಾಡಿ ನೀಡಲಾಗುತ್ತದೆ.

​ಹುಸಿ ಮತ್ತು ಕಿರುಕುಳಕಾರಿ ದೂರು ನೀಡುವ ನಾಗರಿಕರಿಗೆ ದಂಡ:

ಸರ್ಕಾರಿ ನೌಕರರಿಗೆ ಕೇಡು ಉಂಟುಮಾಡುವ, ಕಿರುಕುಳ ನೀಡುವ, ಬೆದರಿಸುವ ಅಥವಾ ದುರುದ್ದೇಶದಿಂದ ಸುಳ್ಳು ಕುಂದುಕೊರತೆ ದೂರುಗಳನ್ನು ಸಲ್ಲಿಸುವ ನಾಗರಿಕರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

​ತನಿಖೆಯಲ್ಲಿ ದೂರು ದುರುದ್ದೇಶಪೂರಿತ ಎಂದು ಸಾಬೀತಾದರೆ, ಅಂತಹ ನಾಗರಿಕರಿಗೆ ಪ್ರತಿ ಅರ್ಜಿಗೆ ರೂ. 1,500 ದಂಡ ವಿಧಿಸಲಾಗುತ್ತದೆ. ಇದೇ ತಪ್ಪನ್ನು ಪುನರಾವರ್ತಿಸಿದಲ್ಲಿ ಮತ್ತೆ ಪ್ರತಿ ಅರ್ಜಿಗೆ ರೂ. 1,500 ದಂಡ ವಿಧಿಸಲಾಗುತ್ತದೆ. ನಾಗರಿಕರಿಗೆ ತಮ್ಮ ಅಹವಾಲು ಹೇಳಿಕೊಳ್ಳಲು ಸೂಕ್ತ ಅವಕಾಶ ನೀಡಿದ ನಂತರವೇ ಈ ಆದೇಶ ಹೊರಡಿಸಲಾಗುತ್ತದೆ ಹಾಗೂ ಈ ದಂಡದ ಮೊತ್ತವನ್ನು ಭೂ ಕಂದಾಯ ಹಿಂಬಾಕಿಯಂತೆ ವಸೂಲಿ ಮಾಡಲಾಗುತ್ತದೆ.

ಸಾರ್ವಜನಿಕ ಸೇವೆಗಳ ವಿಲೇವಾರಿಯಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿಯನ್ನು ಹೆಚ್ಚಿಸುವುದು ಈ ತಿದ್ದುಪಡಿಯ ಮುಖ್ಯ ಉದ್ದೇಶವಾಗಿದೆ ಎಂದು ​ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮರಣಾನಂತರ ದೇಹದಾನಕ್ಕೆ ಮುಂದಾದ ಮೂವರು ಶಿಕ್ಷಕರು, ಸಾಹಿತಿ

ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನ ಮತ್ತು ಸಂಶೋಧನೆಗೆ ನೆರವಾಗುವ ಉದ್ದೇಶದಿಂದ ಮರಣಾನಂತರ ತಮ್ಮ...

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...