ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಎಫ್‌ಐಆರ್

Date:

ಸಾಮಾಜಿಕ ನ್ಯಾಯದ ಅಡಿ ಸಂವಿಧಾನ ಕೊಟ್ಟಿರುವ ಮೀಸಲಾತಿ ಮೂಲಕ ಪ್ರಾತಿನಿಧ್ಯ ಪಡೆದವರ ವಿರುದ್ಧ ಅವಹೇಳನಕಾರಿಯಾಗಿ ಪಬ್ಲಿಕ್ ಟಿವಿಯಲ್ಲಿ ಮಾತನಾಡಿದ್ದ ನಿರೂಪಕ ಅರುಣ್ ಬಡಿಗೇರ್ ಮೇಲೆ ನೆಲಮಂಗಲ ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಸಾಮಾಜಿಕ ಹೋರಾಟಗಾರ ಅನಂತಕುಮಾರ್ ಚಿಕ್ಕಮಾರನಹಳ್ಳಿ ಅವರು ನೀಡಿದ ದೂರಿನ ಅನ್ವಯ, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 196(1), 353(1), 353(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ನಾನು ಭಾರತದ ಸಂವಿಧಾನದಲ್ಲಿ ನಂಬಿಕೆ ಹೊಂದಿರುವ ನಾಗರಿನಾಗಿದ್ದು, ಸಂವಿಧಾನವು ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯ, ಸಮಾನತೆ, ಘನತೆ ಹಾಗೂ ಸೌಹಾರ್ದತೆಯ ಮೌಲ್ಯಗಳನ್ನು ಕಾಪಾಡುವ ಉದ್ದೇಶದಿಂದ ಈ ದೂರನ್ನು ಸಲ್ಲಿಸುತ್ತಿದ್ದೇನೆ” ಎಂದು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಮುಂದುವರಿದು, “ಪಬ್ಲಿಕ್ ಟಿ.ವಿಯಲ್ಲಿ ಪ್ರಸಾರವಾಗುವ ‘Big Bulletin’ ಕಾರ್ಯಕ್ರಮದಲ್ಲಿ ನಿರೂಪಕನಾದ ಅರುಣ್ ಬಡೀಗರ್ ಭಾರತದ ಸಂವಿಧಾನಾತ್ಮಕ ಮೀಸಲಾತಿ ವ್ಯವಸ್ಥೆ ಹಾಗೂ ಅದರ ಫಲಾನುಭವಿಗಳ ಕುರಿತು ಅತ್ಯಂತ ಆಕ್ಷೇಪಾರ್ಹ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ತಪ್ಪು ಕಲ್ಪನೆ ಮತ್ತು ಪೂರ್ವಗ್ರಹಗಳನ್ನು ಮೂಡಿಸುವ ರೀತಿಯ ಹೇಳಿಕೆಗಳನ್ನು ಕಳೆದ ಜುಲೈ 25ರಂದು ನೀಡಿದ್ದಾರೆ. ಈ ಕಾರ್ಯಕ್ರಮವು ಪಬ್ಲಿಕ್ ಟಿ.ವಿ.ಯ ಅಧಿಕೃತ ಯೂಟ್ಯೂಬ್ ವಾಹಿನಿಯಲ್ಲೂ ಲಭ್ಯವಿದೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

“ಕಾರ್ಯಕ್ರಮದಲ್ಲಿ ಅರುಣ್ ಬಡಿಗೇರ್, ಮೀಸಲಾತಿಯಲ್ಲಿ ಶಿಕ್ಷಣ ಪಡೆದವರು ಶಿಕ್ಷಕರಾಗುವುದು, ವೈದ್ಯರಾಗುವುದು ಮತ್ತು ಇಂಜಿನಿಯರ್‌ಗಳಾಗುವುದರ ಬಗ್ಗೆ ಪ್ರಶ್ನಿಸಿ, ಗುಣಮಟ್ಟವಿಲ್ಲದವರು ಎಂದು ಅರ್ಥ ಬರುವ ರೀತಿಯಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. ಈ ಹೇಳಿಕೆಗಳು ಮೀಸಲಾತಿಯ ಮೂಲಕ ಅವಕಾಶ ಪಡೆದಿರುವ ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಸೇರಿದಂತೆ ಮೀಸಲಾತಿ ಫಲಾನುಭವಿಗಳ ಸಾಮರ್ಥ್ಯ, ಅರ್ಹತೆ ಮತ್ತು ಘನತೆಯನ್ನು ಸಾರ್ವಜನಿಕವಾಗಿ ಪ್ರಶ್ನಿಸುವ ಪ್ರಯತ್ನವಾಗಿದ್ದು, ಸಮಾಜದಲ್ಲಿ ಅವಹೇಳನಕಾರಿ ಪೂರ್ವಗ್ರಹ ಪೀಡಿತ ಮತ್ತು ತಾರತಮ್ಯ ಪೂರ್ಣ ಮನೋಭಾವ ಬೆಳೆಸುವ ಸಾಧ್ಯತೆ ಇದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಮೀಸಲಾತಿಯ ಲಾಭ ಪಡೆದ ನ್ಯಾ ಸಂತೋಷ್ ಹೆಗ್ಡೆ ಮತ್ತು ಬಂಟರು

“ಪಬ್ಲಿಕ್ ಟಿ.ವಿ ಆಡಳಿತ ಮಂಡಳಿ, ಮುಖ್ಯ ಸಂಪಾದಕರು ಹಾಗೂ ಪ್ರಸಾರಕ್ಕೆ ಅನುಮೋದನೆ ನೀಡಿದ ಅಧಿಕಾರಿಗಳ ಪಾತ್ರವನ್ನೂ ಸಮಗ್ರವಾಗಿ ತನಿಖೆ ನಡೆಸಬೇಕು. ನಿರೂಪಕ ಅರುಣ್ ಬಡಿಗೇರ್ ಅವರ ಹೇಳಿಕೆಗಳ ಕುರಿತು ಸಮಗ್ರ ತನಿಖೆ ನಡೆಸಿ, ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟ ಎಲ್ಲರ ವಿರುದ್ಧ ಸೂಕ್ತ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...