ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಕಡಿವಾಣ: ಸಿಎಂ ಸಿದ್ದರಾಮಯ್ಯ ಭರವಸೆ

Date:

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, “ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ” ಎಂದರು.

ಎಸ್ ಐ ಟಿ ವರದಿ

ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಎಸ್ ಐ ಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿದ್ದಾರೆ” ಎಂದು ಹೇಳಿದರು.

ವಾಹನ ಸೌಲಭ್ಯ

ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, “ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು” ಎಂದರು.

ಹೈಕಮಾಂಡ್ ಅಂತಿಮ ತೀರ್ಮಾನ

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, “ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು...