ಹೆಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್‌; ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರ ನೇಮಕಕ್ಕೆ ಹೈಕೋರ್ಟ್‌ ಸೂಚನೆ

Date:

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್ ಹಿನ್ನೆಲೆಯಲ್ಲಿ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರನ್ನು ನೇಮಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.

- Advertisement -

ಎಡಿಜಿಪಿ ಎಂ.ಚಂದ್ರಶೇಖರ್ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಹೆಚ್‌ಡಿಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು. ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಹೈಕೋರ್ಟ್ ಸಲಹೆ ಹಿನ್ನೆಲೆಯಲ್ಲಿ ಕ್ಷಮೆಯಾಚನೆಯ ಪ್ರಮಾಣಪತ್ರ ಸಲ್ಲಿಸಬೇಕೆಂದು ಎಡಿಜಿಪಿ ಪರ ವಕೀಲರು ವಾದ ಮಂಡನೆ ಮಾಡಿದರು. ಇದಕ್ಕೆ ಹೆಚ್‌ಡಿಕೆ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಇದನ್ನು ಓದಿದ್ದೀರಾ? ಯುದ್ಧ ನಿಲ್ಲಲ್ಲ, ಹಾರ್ಮುಜ್ ತೆರೆಯಲ್ಲ: ಟ್ರಂಪ್‌ಗೆ ಇರಾನ್ ಸಡ್ಡು

ಈ ವೇಳೆ, ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರನ್ನು ನೇಮಿಸಲು ಹೈಕೋರ್ಟ್ ಪ್ರಸ್ತಾಪ ಮಾಡಿ, ಈ ಬಗ್ಗೆ ನಿಲುವು ತಿಳಿಸಲು ಎರಡೂ ಕಡೆಯ ವಕೀಲರಿಗೆ ಸೂಚನೆ ನೀಡಿತು. ಅರ್ಜಿ ವಿಚಾರಣೆ ಮಾ.26ಕ್ಕೆ ಮುಂದೂಡಿದ ಹೈಕೋರ್ಟ್, ಅಲ್ಲಿಯವರೆಗೆ ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿದೆ.

Advertisements

ತನ್ನ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪ ಮಾಡಿ, ಬೆದರಿಕೆ ಹಾಕಿದ್ದಾರೆ. ನಕಲಿ ವೈದ್ಯಕೀಯ ದಾಖಲೆ ಪಡೆದು ಕರ್ನಾಟಕ ಕೇಡರ್‌ಗೆ ಸೇರ್ಪಡೆಗೊಂಡಿದ್ದಾರೆ ಎಂದು ಹೆಚ್‌ಡಿಕೆ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು. ಅಲ್ಲದೇ, ಲಂಚ ಸ್ವೀಕರಿಸುತ್ತಿರುವುದಾಗಿ ಆರೋಪಿಸಿದ್ದು, ಈ ಸಂಬಂಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಡಿಜಿಪಿ ಎಂ.ಚಂದ್ರಶೇಖರ್ ದೂರು ದಾಖಲಿಸಿದ್ದಾರೆ. ಈ ಪ್ರಕರಣ ರದ್ದು ಕೋರಿ ಹೆಚ್‌ಡಿಕೆ ಹೈಕೋರ್ಟ್ ಮೊರೆ ಹೋಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಪಿಎಂ ಮೋದಿ, ಯುವತಿಯ ಡೀಪ್‌ಫೇಕ್ ಫೋಟೋ: ಸಿಜೆಪಿ ನಾಯಕರು, ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಯುವತಿಯೊಬ್ಬಳ ಮುಖವನ್ನು ಕೃತಕ ಬುದ್ಧಿಮತ್ತೆ (AI)...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...