ಪೊಲೀಸರ ಕೊಲೆಗೆ ಸಂಚು ಆರೋಪ, 17 ರೈತ ಮುಖಂಡರು ಸೇರಿ 700 ರೈತರ ಮೇಲೆ ಎಫ್‌ಐಆರ್‌

Date:

ಬಾಗಲಕೋಟೆ ಜಿಲ್ಲೆಯ ಸೈದಾಪೂರದ ಸಮೀರವಾಡಿ ಸಕ್ಕರೆ ಕಾರ್ಖಾನೆಯಲ್ಲಿ ನ.13ರಂದು ಕಬ್ಬು ತುಂಬಿದ್ದ ಟ್ರಾಕ್ಟರ್ ಟ್ರೇಲರ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಸಂಚಿನ ಆರೋಪದ ಮೇಲೆ 17 ಜನ ರೈತ ಮುಖಂಡರು ಮತ್ತು 700 ರೈತರ ಮೇಲೆ ಎಫ್‌ಐಆರ್‌ ದಾಖಲಾಗಿದೆ

- Advertisement -

ಮಹಾಲಿಂಗಪುರ ಪೋಲಿಸ್ ಠಾಣೆಯ ಪಿಎಸ್‌ಐ ಶಿವಾನಂದ ಸಿಂಗನ್ನವರ್‌ ಅವರು ಸರ್ಕಾರದ ಪರವಾಗಿ ಎಫ್‌ಐಆರ್‌ ದಾಖಲಿಸಿದ್ದಾರೆ. (ಸಿ. ಆರ್ ನಂಬರ್ 75/2025)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿ. 12.11.2025 ರಂದು ಗೋದಾವರಿ ಸಕ್ಕರೆ ಕಾರ್ಖಾನೆ ಸಮೀರವಾಡಿ ರವರು ಸರಕಾರ ನಿಗದಿ ಪಡಿಸಿದ ದರ ಪ್ರತಿ ಟನ್ ಗೆ ಕೊಡುವದಾಗಿ ಘೋಷಣೆ ಮಾಡಿ ಕಾರ್ಖಾನೆ ಪೂಜೆ ಕಾರ್ಯಕ್ರಮ ಮಾಡಿ ಕಬ್ಬು ಕಟಾವು ಮಾಡಲು ಆದೇಶ ಕೊಟ್ಟಿದ್ದರು. ಅದರಂತೆ ಕಬ್ಬು ತುಂಬಿದ ಸುಮಾರು 150 ಟ್ರ್ಯಾಕ್ಟರ್‌ಗಳು ಕಬ್ಬು ತುಂಬಿಕೊಂಡು ಕಾರ್ಖಾನೆಗೆ ಬಂದಿದ್ದವು. ಇದನ್ನು ಖಂಡಿಸಿ (1) ಬಸವಂತ ಕಾಂಬಳೆ, 2) ಹಣಮಂತಗೌಡ ಪಾಟೀಲ 3) ಸುರೇಶ ಚಿಂಚಲಿ 4) ಸುರೇಶ ಢವಳೇಶ್ವರ 5)ಮಹೇಶಗೌಡ ಪಾಟೀಲ 6) ದುಂಡಪ್ಪ ಯರಗಟ್ಟಿ, 7) ಕಲಮೇಶ ಹನಗೋಜಿ 8) ಮುತ್ತು ಹೊಸಕೋಟಿ 9)ರಾಚಪ್ಪ ಕೊಳ್ಳೋಳಿ 10) ಈರಪ್ಪ ಹಂಚಿನಾಳ 11) ಬಸಪ್ಪ ಸಂಗನ್ನವರ 12) ಸದಾಶಿವ ಸಂಕರಡ್ಡಿ 13)ಸುಭಾಸ ಶಿರಬೂರ 14) ಮಂಜು ಅರಕೇರಿ 15) ಹಣಮಂತ ನಬಾಬ್ 16) ಮುತ್ತಪ್ಪ ಕೋಮಾರ 17) ಗಂಗಾಧರ ಮೇಟಿ ಇವರ ನೇತೃತ್ವದಲ್ಲಿ ಸುಮಾರು 700 ಜನರು ಸಕ್ಕರೆ ಕಾರ್ಖಾನೆಗಳಿಗೆ ಮುತ್ತಿಗೆ ಹಾಕಿ‌ ಪ್ರತಿಭಟಿಸಿದರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ ಕೊಲೆಗೆ ಸಂಚು ರೂಪಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸ್ಥಳದಲ್ಲಿ ಇಲ್ಲದಿದ್ದರೂ ಪ್ರಕರಣ ದಾಖಲು: ಆರೋಪ

ಈ ಪ್ರಕರಣದಲ್ಲಿ 17ನೇ ಆರೋಪಿಯನ್ನಾಗಿ ರೈತ ಮುಖಂಡ ಗಂಗಾಧರ ಮೇಟಿ ಹೆಸರಿದೆ. ಕಳೆದೊಂದು ವಾರದಿಂದ ತಾನು ಕುಟುಂಬ ಸಮೇತ ದಿಲ್ಲಿ ಪ್ರವಾಸದಲ್ಲಿದ್ದು, ತನ್ನ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಲಾಗಿದೆ ಎಂದು ಗಂಗಾಧರ ಮೇಟಿ ದೂರಿದ್ದಾರೆ.

ಮುಧೋಳದಲ್ಲಿ ನಡೆದ ಕಬ್ಬು ಬೆಳೆಗಾರರ ಚಳುವಳಿಯಲ್ಲಿ ತಾನು ಒಂದು ದಿನವು ಭಾಗವಹಿಸಲಿಲ್ಲ. ಘಟನೆ ನಡೆದಾಗ ಸ್ಥಳದಲ್ಲಿ ಇಲ್ಲದಿದ್ದರೂ ತಮ್ಮ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಗಂಗಾಧರ ಮೇಟಿ ಆರೋಪಿಸಿದ್ದಾರೆ.
ಸದ್ಯ ದಿಲ್ಲಿ ಪ್ರವಾಸದಲ್ಲಿರುವ ಅವರು, ಇಂಡಿಯಾ ಗೇಟ್ ಬಳಿಯಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ, ಪೊಲೀಸ್‌ ಇಲಾಖೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...