ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

Date:

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ ಬಂಧನಕ್ಕೊಳಗಾಗುವಂತೆ ಮಾಡಿದ ಗಂಭೀರ ಆರೋಪದಡಿ ರಾಜರಾಜೇಶ್ವರಿನಗರ (ಆರ್‌ಆರ್‌ ನಗರ) ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ಎಂಟು ಮಂದಿಯ ವಿರುದ್ಧ ಇಲ್ಲಿನ ಆರ್‌ಆರ್‌ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

- Advertisement -

​ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರಲ್ಲದೆ, ಕಿರಣ್ ನಾಯ್ಡು, ಲೋಹಿತ್ ಗೌಡ, ಮಂಜುನಾಥ್, ಲಕ್ಷ್ಮೀ ಜಯರಾಮ್ ಅವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಇವರೊಂದಿಗೆ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್‌ ಇನ್ಸ್‌ಪೆಕ್ಟ‌ರ್ ಐಯಣ್ಣ ರೆಡ್ಡಿ, ಪೊಲೀಸ್ ಇನ್ಸ್‌ಪೆಕ್ಟ‌ರ್ ಲೋಹಿತ್ ಬಿ.ಎನ್. ಹಾಗೂ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖ‌ರ್ ಅವರ ಮೇಲೂ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

​ಮಹಿಳೆಯನ್ನು ಬಂಧಿಸುವಂತೆ ಮಾಡಲು ಸಂಚು ರೂಪಿಸಿದ ಹಾಗೂ ನಕಲಿ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಹಲವು ಗಂಭೀರ ಸೆಕ್ಷನ್‌ಗಳನ್ನು ಪ್ರಯೋಗಿಸಲಾಗಿದೆ. ಐಪಿಸಿ ಸೆಕ್ಷನ್ 395, 363, 345C, 354A, 342, 323, 120B, 504, 506 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ (ಐಟಿ ಆ್ಯಕ್ಟ್) 66E ಮತ್ತು 67ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಕರಣದಲ್ಲಿ ಶಾಸಕರು ಹಾಗೂ ಪೊಲೀಸ್ ಅಧಿಕಾರಿಗಳು ಭಾಗಿಯಾಗಿರುವ ಕಾರಣ, ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈಗಾಗಲೇ ಎಫ್‌ಐಆ‌ರ್ ದಾಖಲಿಸಿಕೊಂಡಿರುವ ರಾಜರಾಜೇಶ್ವರಿನಗರ ಠಾಣೆಯ ಪೊಲೀಸರು, ಪ್ರಕರಣದ ಮುಂದಿನ ತನಿಖೆಗಾಗಿ ಕಡತಗಳನ್ನು ಎಸ್‌ಐಟಿಗೆ ಹಸ್ತಾಂತರಿಸಲು ಅಗತ್ಯ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...