ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಐದು ಜನ ಸಾಧಕರಿಗೆ 2025ನೇ ಸಾಲಿನ ವಾಲ್ಮೀಕಿ ಪ್ರಶಸ್ತಿ

Date:

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅರ್ಹರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪ್ರತಿ‌ ವರ್ಷ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದೆ.

- Advertisement -

ಪ್ರತಿ ವರ್ಷದಂತೆ‌ ಈ ವರ್ಷವೂ ಸಹ ರಂಗಭೂಮಿ, ಸಂಘಟನೆ, ಮಾಧ್ಯಮ, ‌ಸಾಮಾಜಿಕ ಕ್ಷೇತ್ರ ಮತ್ತು ಸಮಾಜ ಸೇವೆಯಲ್ಲಿ ತಮ್ಮದೇ ಅದ‌ ವಿಶಿಷ್ಟ ಸೇವೆ ಸಲ್ಲಿಸಿ‌ ವಾಲ್ಮೀಕಿ ಸಮಾಜಕ್ಕೆ‌ ತಮ್ಮ ಕೊಡಿಗೆಯನ್ನು ನೀಡಿರುವ ಅರ್ಹ ಸಾಧಕರನ್ನು ಗುರುತಿಸಿ ವಾಲ್ಮೀಕಿ ಪ್ರಶಸ್ತಿಯನ್ನು ಸರ್ಕಾರವು ಪ್ರಕಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

2025ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಬೆಂಗಳೂರು ಕೇಂದ್ರದ ಮಾಧ್ಯಮ ಕ್ಷೇತ್ರದಿಂದ ಬೆಂಗಳೂರಿನ ನಾಗರಾಜು ಗಾಣದ ಹುಣಸೆ, ಬೆಂಗಳೂರು ವಿಭಾಗದಲ್ಲಿ ರಂಗಭೂಮಿ ಕ್ಷೇತ್ರದಿಂದ ಚಿತ್ರದುರ್ಗದ ಚಳ್ಳಕೆರೆಯ ಪಿ. ತಿಪ್ಪೇಸ್ವಾಮಿ, ಮೈಸೂರು ವಿಭಾಗದಲ್ಲಿ ಸಂಘಟನೆ ಕ್ಷೇತ್ರದಿಂದ ಕೊಡಗಿನ ವಿರಾಜಪೇಟೆಯ ಜೆ.ಕೆ. ಮುತ್ತಮ್ಮ, ಬೆಳಗಾವಿ ವಿಭಾಗದಲ್ಲಿ ಸಮಾಜಸೇವೆ ಕ್ಷೇತ್ರದಿಂದ ವಿಜಯಪುರ ಟೌನ್ ನ ಮಳಸಿದ್ದ ಲಕ್ಷ್ಮಣ ನಾಯಕೋಡಿ ಮತ್ತು ಕಲಬುರಗಿ ವಿಭಾಗದಲ್ಲಿ ಸಾಮಾಜಿಕ ಕ್ಷೇತ್ರದಿಂದ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಟೌನ್ ನ ಕೆ. ಉಚ್ಚಂಗಪ್ಪ ಅವರು ಭಾಜನರಾಗಿದ್ದಾರೆ ‌

Advertisements

ರಾಜ್ಯದಲ್ಲಿ ಪ್ರತಿ ವರ್ಷ ಸೀಗೆಹುಣ್ಣಿಮೆ ದಿನದಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ. ಡಾ: ಬಿ.ಆರ್. ಅಂಬೇಡ್ಕ‌ರ್, ಡಾ: ಬಾಬು ಜಗಜೀವನರಾಂ ಹಾಗೂ ಡಿ. ದೇವರಾಜು ಅರಸು ಇವರ ಸ್ಮರಣಾರ್ಥ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುತ್ತಿರುವ ಮಾದರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಸೋಮಣ್ಣ, ಡಿಕೆಶಿ ಉದ್ಧಟತನ ಅಕ್ಷಮ್ಯ

ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಶೈಕ್ಷಣಿಕ ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವಂತಹ ಬೆಂಗಳೂರು, ಮೈಸೂರು. ಬೆಳಗಾವಿ, ಕಲಬುರಗಿ ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ಕೇಂದ್ರ ಸ್ಥಾನದಿಂದ ತಲಾ ಒಬ್ಬರಂತೆ ಒಟ್ಟು ಐದು ಸಾಧಕರಿಗೆ ನಗದು ಮೊತ್ತ ಹಾಗೂ ಬಂಗಾರದ ಪದಕಗಳನ್ನು ನೀಡಿ ಗೌರವಿಸಲಾಗುವುದು.

2025-26ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಇವರ ಸ್ಮರಣಾರ್ಥ ನೀಡುವ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಆಯ್ಕೆ ಮಾಡುವ ಸಂಬಂಧ ಡಾ.ಎ.ಬಿ ರಾಮಚಂದ್ರಪ್ಪ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು.

ಸಮಿತಿಯು ಸಭೆಗಳನ್ನು ನಡೆಸಿ ಪ್ರಶಸ್ತಿಗಾಗಿ ಸ್ವೀಕರಿಸಲಾದ ಸುಮಾರು 133 ನಾಮನಿರ್ದೇಶನಗಳನ್ನು ಪರಿಶೀಲಿಸಿ ಅರ್ಹ ಸಾಧಕರನ್ನು ಗುರುತಿಸಿ ಗುರುತಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು ಸರ್ಕಾರವು ಸಮಿತಿಯ ಶಿಫಾರಸ್ಸನ್ನು ಒಪ್ಪಿ ಅರ್ಹರಿಗೆ ಪ್ರಶಸ್ತಿಯನ್ನು ಘೋಷಿಸಿರುತ್ತದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.  ಇನ್ನೂ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...

‘ಎಸ್ಐಆರ್’ ವಿರುದ್ಧ ಸಿಡಿದೆದ್ದ ರೈತ-ದಲಿತ ಸಂಘಟನೆಗಳು: ಅ.23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ನಿರ್ಧಾರಗಳನ್ನು...