ಪ್ರತಿ ವರ್ಷ ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಐದು ಪರಿಸರವಾದಿಗಳಿಗೆ ಪ್ರಶಸ್ತಿ: ಸಿದ್ದರಾಮಯ್ಯ ಘೋಷಣೆ

Date:

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

- Advertisement -

ಅವರು ಇಂದು (ನ.19) ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ -2025 ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ

“ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನ. 1974ರ ಇಂದಿನ ದಿನದಂದು ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪಿತವಾಯಿತು. ಇಂದಿರಾಗಾಂಧಿಯವರು ಪರಿಸರ ಮತ್ತು ಅರಣ್ಯ ರಕ್ಷಣೆಗೆ ಹಲವು ಪ್ರಮುಖ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಪರಿಸರ ಸಂರಕ್ಷಣೆಯ ಜವಾಬ್ದಾರಿ ಕೇವಲ ಸರ್ಕಾರದ ಮೇಲಿಲ್ಲ. ಸಾರ್ವಜನಿಕರು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು. ಭೂಮಿಯ ಮೇಲಿನ ಜೀವಸಂಕುಲಕ್ಕೆ ಉತ್ತಮ ಪರಿಸರದಲ್ಲಿ ಬದುಕಲು ಅವಶ್ಯ. ಮಾಲಿನ್ಯ ರಹಿತ ಪರಿಸರವನ್ನು ನಿರ್ಮಿಸುವುದು ಅತ್ಯಂತ ಅವಶ್ಯವಾಗಿದೆ. ನಾವು ಉಸಿರಾಡುವ ಗಾಳಿ, ನೀರು ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ. ಕೇಂದ್ರದ ವರದಿಯ ಪ್ರಕಾರ ದೇಶದ ಹಲವು ನಗರಗಳು ಮಾಲಿನ್ಯದಿಂದ ಕೂಡಿವೆ. ಈ ಪಟ್ಟಿಯಲ್ಲಿ ಬೆಂಗಳೂರು , ದಾವಣಗೆರೆ, ಕಲ್ಬುರ್ಗಿ ನಗರವೂ ಸೇರಿರುವುದು ಆತಂಕಕಾರಿ ವಿಷಯ. ನಮ್ಮ ರಾಜ್ಯವನ್ನು ವಾಸಯೋಗ್ಯವಾಗಿಸಲು , ಜನರೆಲ್ಲರೂ ಪರಿಸರ ಬಗ್ಗೆ ಕಾಳಜಿಯನ್ನು ಬೆಳೆಸಿಕೊಳ್ಳಬೇಕು” ಎಂದರು.

900 ಟನ್ ಪ್ಲಾಸ್ಟಿಕ್ ಉತ್ಪಾದನೆ

“ಬೆಂಗಳೂರು ನಗರ ಒಂದರಲ್ಲೇ 900 ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತದೆ. ಇದನ್ನು ಜನ ಅರ್ಥಮಾಡಿಕೊಳ್ಳದೇ ಹೋದರೆ ಪ್ಲಾಸ್ಟಿಕ್ ಮುಕ್ತ ನಗರವಾಗಲು ಸಾಧ್ಯವಿಲ್ಲ ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ, ಸರ್ಕಾರದ ಜೊತೆ ಕೈಜೋಡಿಸಿದಾಗ ಮಾತ್ರ 2030 ರ ಹೊತ್ತಿಗೆ ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಸಾಧ್ಯ” ಎಂದು ಹೇಳಿದರು.

ಅತಿ ಹೆಚ್ಚು ಮಾಲಿನ್ಯ ಹೊಂದಿರುವ ನಗರಗಳ ಪಟ್ಟಿಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳು

“ಕೇಂದ್ರದ ವರದಿಯ ಪ್ರಕಾರ 131 ನಗರಗಳು ಮಾಲಿನ್ಯದಿಂದ ಕೂಡಿದ್ದು, ನಿಗದಿತ ಮಟ್ಟಕ್ಕಿಂತಲೂ ಹೆಚ್ಚಿದೆ. ಅದರಲ್ಲಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ ಮತ್ತು ಕಲಬುರಗಿ ಜಿಲ್ಲೆಗಳು ಸೇರಿವೆ. ಇದು ಆತಂಕಕಾರಿ ವಿಷಯ. ಬೆಂಗಳೂರಿನಲ್ಲಿ ವಾಸ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ಸಾಧ್ಯತೆ ಇದೆ. ಅದಕ್ಕಾಗಿ ಎಲ್ಲರೂ ಪರಿಸರದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಸಾಲು ಮರದ ತಿಮ್ಮಕ್ಕ ಇದಕ್ಕೆ ಶ್ರೇಷ್ಠ ಉದಾಹರಣೆ ಎಂದರು. ಇತ್ತೀಚೆಗೆ ನಿಧನರಾದ ಅವರು ಬಹಳಷ್ಟು ಮರಗಿಡಗಳನ್ನು ತಮ್ಮ ಮಕ್ಕಳಂತೆ ಬೆಳೆಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಪ್ರತಿಯೊಬ್ಬರೂ ಸಾಲಮರದ ತಿಮ್ಮಕ್ಕನವರಂತೆ ಆಗಬೇಕು ಎನ್ನುವ ಆಶಯ ನಮ್ಮದು” ಎಂದರು.

ಬೆಂಗಳೂರು ಪ್ಲಾಸ್ಟಿಕ್ ಮತ್ತು ಕಸ ಮುಕ್ತ ನಗರವಾಗಬೇಕು

“ಬೆಂಗಳೂರು ಗಾರ್ಬೇಜ್ ನಗರ ಎಂಬ ಟೀಕೆಗೆ ನಗರ ಗುರಿಯಾಗುತ್ತಿದ್ದು,ಬೆಂಗಳೂರನ್ನು ಗಾರ್ಬೇಜ್ ನಗರವಾಗಿಸುವುದು ನಮ್ಮ ಉದ್ದೇಶವಲ್ಲ. ಪ್ಲಾಸ್ಟಿಕ್ ಮತ್ತು ಕಸ ಮುಕ್ತ ನಗರವಾಗಿಸಬೇಕು ಎನ್ನುವುದು ಸರ್ಕಾರದ ಉದ್ದೇಶ. ಜನರೂ ಹಸಿ ಮತ್ತು ಒಣ ತ್ಯಾಜ್ಯವನ್ನು ಬೇರ್ಪಡಿಸಬೇಕು ಎಂದು ಮನವಿ ಮಾಡಿದರು. ಕೈಗಾರಿಕೋದ್ಯಮಿಗಳು ತ್ಯಾಜ್ಯವನ್ನು ಸಾರ್ವಜನಿಕರಿಗೆ, ಸಮಾಜಕ್ಕೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ನಿರ್ವಹಿಸುವುದು ಕೈಗಾರಿಕೋದ್ಯಮಿಗಳ ಜವಾಬ್ದಾರಿ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...